ನವದೆಹಲಿ: ಮುಂದಿನ ವರ್ಷ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಭಾಗವಹಿಸಲು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಭಾರತ ಆಮಂತ್ರಣವನ್ನು ನೀಡಿದೆ.ಆದರೆ ಈ ಕುರಿತಾಗಿ ಇನ್ನು ಯಾವುದೇ ಅಂತಿಮ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದು ಯುಎಸ್ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್ ಹೇಳಿದರು.


COMMERCIAL BREAK
SCROLL TO CONTINUE READING

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಯು.ಎಸ್. ಕಾರ್ಯದರ್ಶಿ ಮೈಕ್ ಪೊಂಪೆಯೊ ಮತ್ತು ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಎನ್. ಮ್ಯಾಟಿಸ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಸ್ಯಾಂಡರ್ಸ್ ದೃಢಪಡಿಸಿದರು.ಮುಂದಿನ ವರ್ಷ ಡೊನಾಲ್ಡ್ ಟ್ರಂಪ್ ಅವರ ಅಧ್ಯಕ್ಷೀಯ ಭೇಟಿಗಾಗಿ  ಪೂರ್ವ ಮಾತುಕತೆ ನಡೆಸುವ ನಿಟ್ಟಿನಲ್ಲಿ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.


ಪ್ರತಿ ವರ್ಷ, ಭಾರತ ಸರ್ಕಾರ ಗಣರಾಜ್ಯೋತ್ಸವ ದಿನದಂದು ವಿಶೇಷ ಅತಿಥಿಯಾಗಿ ಆಯಾ ದೇಶದ ಮುಖ್ಯಸ್ಥರನ್ನು ಆಹ್ವಾನಿಸುತ್ತದೆ.ಈ ಸಂದರ್ಭದಲ್ಲಿ ದೇಶದ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರದರ್ಶಿಸುತ್ತದೆ.ಈ ವರ್ಷ ಅಸಿಯಾನ್ ದೇಶಗಳಾದ ಥೈಲ್ಯಾಂಡ್, ವಿಯೆಟ್ನಾಂ, ಇಂಡೋನೇಷಿಯಾ, ಮಲೇಷಿಯಾ, ಫಿಲಿಫೈನ್ಸ್, ಸಿಂಗಾಪುರ್, ಮ್ಯಾನ್ಮಾರ್, ಕಾಂಬೋಡಿಯಾ, ಲಾವೋಸ್ ಮತ್ತು ಬ್ರೂನಿ ದೇಶಗಳ ಅಧ್ಯಕ್ಷರು ಮತ್ತು  ಪ್ರಧಾನಿಗಳು ಗಣರಾಜ್ಯೋತ್ಸವದಲ್ಲಿ ಭಾಗವಹಿಸಿದ್ದರು.


ಈ ಹಿಂದೆ 2015ರಲ್ಲಿ ಮಾಜಿ ಯು.ಎಸ್. ಅಧ್ಯಕ್ಷ ಬರಾಕ್ ಒಬಾಮ 65 ನೇ ಗಣರಾಜ್ಯೋತ್ಸವ ದಿನದಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.