ಕೈವ್ (ಉಕ್ರೇನ್): ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್‌ನಲ್ಲಿ (Russia Ukraine War) ಸೇನಾ ಕಾರ್ಯಾಚರಣೆಯನ್ನು ಅಧಿಕೃತಗೊಳಿಸಿದ ಗಂಟೆಗಳ ನಂತರ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳಿಗಾಗಿ ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಗುರುವಾರ 24 ಗಂಟೆಗಳ ತುರ್ತು ಸಹಾಯವಾಣಿಯನ್ನು ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರದ ಸಿದ್ದತೆ


ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ (Indian Embassy) ಕಚೇರಿ, "ಉಕ್ರೇನ್‌ನಲ್ಲಿ ಪ್ರಸ್ತುತ ಪರಿಸ್ಥಿತಿಯು ಹೆಚ್ಚು ಅನಿಶ್ಚಿತವಾಗಿದೆ. 24 ಗಂಟೆಗಳ ತುರ್ತು ಸಹಾಯವಾಣಿ +380 997300428, +380 997300483 ಅನ್ನು ನೀಡಿದೆ." 


ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಅವರು ಎಲ್ಲಿದ್ದರೂ "ಶಾಂತ ಮತ್ತು ಸುರಕ್ಷಿತವಾಗಿರಿ" ಎಂದು ಸಲಹೆ ನೀಡಿದೆ. "ದಯವಿಟ್ಟು ಶಾಂತವಾಗಿರಿ ಮತ್ತು ನೀವು ಎಲ್ಲಿದ್ದರೂ ಸುರಕ್ಷಿತವಾಗಿರಿ" ಎಂದು ತಿಳಿಸಿದೆ. ಪೂರ್ವ ಯುರೋಪಿಯನ್ (Europe) ರಾಷ್ಟ್ರದ ವಿರುದ್ಧ ರಷ್ಯಾ (Russia) ತನ್ನ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಉಕ್ರೇನ್‌ನಲ್ಲಿರುವ ಭಾರತೀಯರಿಗೆ ಭಾರತೀಯ ರಾಯಭಾರ ಕಚೇರಿ 24 ಗಂಟೆಗಳ ಸಹಾಯವಾಣಿ ಬಿಡುಗಡೆ ಮಾಡಿತು. 


ಇದನ್ನೂ ಓದಿ: ರಷ್ಯಾದ ಜೊತೆಗಿನ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಉಕ್ರೇನ್..!


ಏತನ್ಮಧ್ಯೆ, ಉಕ್ರೇನ್‌ನಲ್ಲಿನ (Ukriane) ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಹೇಳಿದೆ. ವೇಗವಾಗಿ ಬದಲಾಗುತ್ತಿರುವ ಪರಿಸ್ಥಿತಿಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಭಾರತೀಯರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ಮೇಲೆ ಕೇಂದ್ರೀಕರಿಸಲಾಗಿದೆ. ಕಂಟ್ರೋಲ್ ರೂಮ್ ಅನ್ನು 24x7 ಆಧಾರದ ಮೇಲೆ ವಿಸ್ತರಿಸಲಾಗುತ್ತಿದೆ ಮತ್ತು ಕಾರ್ಯನಿರ್ವಹಿಸುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ