ಇಂಡೋನೇಷ್ಯಾದ (Indonesia) ನ್ಯಾಯಾಲಯವೊಂದು 13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ತಪ್ಪಿತಸ್ಥ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಫೆ.19 ಕ್ಕೆ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ


ಇಂಡೋನೇಷ್ಯಾದ ಕೆಲವು ಧಾರ್ಮಿಕ ಬೋರ್ಡಿಂಗ್ ಶಾಲೆಗಳಲ್ಲಿ ಲೈಂಗಿಕ ದೌರ್ಜನ್ಯದ (Rape case) ಬಗ್ಗೆ ಈ ಪ್ರಕರಣವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ.


36 ವರ್ಷದ ಹೆರ್ರಿ ವೈರವಾನ್ ಅವರು 13 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಇವರಲ್ಲಿ ಎಲ್ಲರೂ ಅಪ್ರಾಪ್ತ ವಯಸ್ಕರು. ಅಲ್ಲದೆ ಅವರಲ್ಲಿ ಸುಮಾರು ಎಂಟು ಮಂದಿಯನ್ನು ಗರ್ಭಿಣಿಯರನ್ನಾಗಿ (Pregnant) ಮಾಡಿದ ಆರೋಪ ಈ ಶಿಕ್ಷಕನ ಮೇಲಿತ್ತು. ಇದೀಗ ಈ ಆರೋಪ ಸಾಬೀತಾಗಿದ್ದು, ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿ ಅದೇಶಿಸಿದೆ. 


ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು, ಅಲ್ಲದೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಅಧ್ಯಕ್ಷ ಜೋಕೊ ವಿಡೋಡೊ (Joko Widodo) ಪ್ರಕರಣದ ಬಗ್ಗೆ ವಿಶೇಷ ಗಮನ ಹರಿಸಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.


ವಿದ್ಯಾರ್ಥಿನಿಯೊಬ್ಬಳ ಕುಟುಂಬವು ಕಳೆದ ವರ್ಷ ತಮ್ಮ ಹದಿಹರೆಯದ ಮಗಳನ್ನು ಅತ್ಯಾಚಾರ ಮಾಡಿ ಗರ್ಭಪಾತ ಮಾಡಿದ್ದಕ್ಕಾಗಿ ವೈರಾವನ್‌ ವಿರುದ್ಧ ಪೊಲೀಸರಿಗೆ ದೂರು ನೀಡಿತ್ತು. 


ಇದನ್ನೂ ಓದಿ: Money Remedies: ಅತ್ಯಂತ ಪ್ರಭಾವಶಾಲಿಯಾಗಿದೆ ಈ ಯಂತ್ರ! ಮನೆಯಲ್ಲಿಟ್ಟರೆ ಧನವೃಷ್ಟಿಯ ಜೊತೆಗೆ ಸಫಲತೆ ನಿಮ್ಮದಾಗಲಿದೆ


ವಿಚಾರಣೆಯ ಸಮಯದಲ್ಲಿ, ಅವರು ಐದು ವರ್ಷಗಳಿಂದ ಸ್ಕಾಲರ್‌ಶಿಪ್‌ನಲ್ಲಿ ಶಾಲೆಗೆ ಹೋಗುತ್ತಿರುವ ಬಡ ಕುಟುಂಬಗಳ ಅನೇಕ ಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದಾರೆಂದು ತಿಳಿದುಬಂದಿದೆ.


ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.