ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಅಂತಾರಾಷ್ಟ್ರೀಯ ಖಂಡನೆ; ಭಾರತಕ್ಕೆ ಅಮೆರಿಕ, ರಷ್ಯಾ ಬೆಂಬಲ

Donald Trump on Pahalgam terror attack: ಕಾಶ್ಮೀರದಿಂದ ಬಂದಿರುವ ಸುದ್ದಿ ಆತಂಕಕಾರಿಯಾಗಿದೆ. ಭಯೋತ್ಪಾದನೆ ವಿರುದ್ಧ ಭಾರತದೊಂದಿಗೆ ಅಮೆರಿಕ ದೃಢವಾಗಿ ನಿಲ್ಲುತ್ತದೆ. ಮೃತರ ಆತ್ಮಕ್ಕೆ ಶಾಂತಿ ಮತ್ತು ಗಾಯಗೊಂಡವರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ. ಪ್ರಧಾನಮಂತ್ರಿ ಮೋದಿ ಮತ್ತು ಭಾರತದ ಜನತೆಗೆ ನಮ್ಮ ಸಂಪೂರ್ಣ ಬೆಂಬಲವಿದೆ. ನಮ್ಮ ಹೃದಯ ನಿಮ್ಮೊಂದಿಗಿದೆ!" ಎಂದು ಬರೆದಿದ್ದಾರೆ.

Written by - Manjunath N | Last Updated : Apr 22, 2025, 11:20 PM IST
  • ಕಾಶ್ಮೀರದಿಂದ ಬಂದಿರುವ ಸುದ್ದಿ ಆತಂಕಕಾರಿಯಾಗಿದೆ.
  • ಭಯೋತ್ಪಾದನೆ ವಿರುದ್ಧ ಭಾರತದೊಂದಿಗೆ ಅಮೆರಿಕ ದೃಢವಾಗಿ ನಿಲ್ಲುತ್ತದೆ.
  • ಮೃತರ ಆತ್ಮಕ್ಕೆ ಶಾಂತಿ ಮತ್ತು ಗಾಯಗೊಂಡವರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಅಂತಾರಾಷ್ಟ್ರೀಯ ಖಂಡನೆ; ಭಾರತಕ್ಕೆ ಅಮೆರಿಕ, ರಷ್ಯಾ ಬೆಂಬಲ

International condemnation of Pahalgam terror attack: ಪಹಲ್ಗಾಮ್‌:  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ಜನರು, ಮುಖ್ಯವಾಗಿ ಪ್ರವಾಸಿಗರು, ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತೀವ್ರವಾಗಿ ಖಂಡಿಸಿದ್ದಾರೆ. ಭಾರತಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿರುವ ಇಬ್ಬರೂ ನಾಯಕರು, ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಮತ್ತು ಗಾಯಗೊಂಡವರ ಶೀಘ್ರ ಚೇತರಿಸಿಕೊಳ್ಳಲಿ ಎಂದು ಅವರು ಪ್ರಾರ್ಥಿಸಿದ್ದಾರೆ

ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ಖಾತೆಯಲ್ಲಿ, "ಕಾಶ್ಮೀರದಿಂದ ಬಂದಿರುವ ಸುದ್ದಿ ಆತಂಕಕಾರಿಯಾಗಿದೆ. ಭಯೋತ್ಪಾದನೆ ವಿರುದ್ಧ ಭಾರತದೊಂದಿಗೆ ಅಮೆರಿಕ ದೃಢವಾಗಿ ನಿಲ್ಲುತ್ತದೆ. ಮೃತರ ಆತ್ಮಕ್ಕೆ ಶಾಂತಿ ಮತ್ತು ಗಾಯಗೊಂಡವರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ. ಪ್ರಧಾನಮಂತ್ರಿ ಮೋದಿ ಮತ್ತು ಭಾರತದ ಜನತೆಗೆ ನಮ್ಮ ಸಂಪೂರ್ಣ ಬೆಂಬಲವಿದೆ. ನಮ್ಮ ಹೃದಯ ನಿಮ್ಮೊಂದಿಗಿದೆ!" ಎಂದು ಬರೆದಿದ್ದಾರೆ.Image

ರಷ್ಯಾದ ರಾಯಭಾರ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪುಟಿನ್, "ಪಹಲ್ಗಾಮ್‌ನ ಭಯೋತ್ಪಾದಕ ದಾಳಿಯ ದುರಂತ ಪರಿಣಾಮಗಳಿಗೆ ನನ್ನ ಸಂತಾಪಗಳು. ಈ ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಈ ದಾಳಿಯ ಸಂಘಟಕರು ಮತ್ತು ದುಷ್ಕರ್ಮಿಗಳು ತಕ್ಕ ಶಿಕ್ಷೆಗೆ ಒಳಗಾಗಬೇಕು. ಭಯೋತ್ಪಾದನೆಯ ಎಲ್ಲ ರೂಪಗಳ ವಿರುದ್ಧ ಭಾರತದೊಂದಿಗಿನ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಮೃತರ ಕುಟುಂಬಗಳಿಗೆ ಸಾಂತ್ವನ ಮತ್ತು ಗಾಯಗೊಂಡವರ ಶೀಘ್ರ ಚೇತರಿಕೆಗೆ ಶುಭಾಶಯಗಳನ್ನು ತಿಳಿಸಿ," ಎಂದಿದ್ದಾರೆ.

ಇದೇ ವೇಳೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ, ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ್ದಾರೆ. ಈ ದಾಳಿಯಿಂದ ಉಂಟಾದ ಆಘಾತದ ನಡುವೆಯೂ ಭಾರತ ಸರ್ಕಾರ ಮತ್ತು ರಾಜ್ಯ ಆಡಳಿತವು ತಕ್ಷಣದ ಕ್ರಮಕೈಗೊಳ್ಳುವ ಮೂಲಕ ಸ್ಥಿತಿಗತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನದಲ್ಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News