ನವದೆಹಲಿ: ಫಿಲಿಪೈನ್ಸ್‌ನ ಪತ್ರಕರ್ತರಾದ ಮರಿಯಾ ರೆಸ್ಸಾ ಮತ್ತು ರಷ್ಯಾದ ಡಿಮಿಟ್ರಿ ಮುರಾಟೋವ್ ಅವರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡುವ ಅವರ ಪ್ರಯತ್ನಗಳಿಗಾಗಿ ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.


COMMERCIAL BREAK
SCROLL TO CONTINUE READING

"ಫಿಲಿಪೈನ್ಸ್ ಮತ್ತು ರಷ್ಯಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಅವರ ಧೈರ್ಯಶಾಲಿ ಹೋರಾಟಕ್ಕಾಗಿ ಇಬ್ಬರಿಗೂ ಪ್ರತಿಷ್ಠಿತ ನೊಬೆಲ್ (Nobel Prize) ಪ್ರಶಸ್ತಿಯನ್ನು ನೀಡಲಾಗಿದೆ.ಇದೆ ವೇಳೆ ಅವರು ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯವು ಹೆಚ್ಚು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ ಈ ಆದರ್ಶಕ್ಕಾಗಿ ನಿಲ್ಲುವ ಎಲ್ಲ ಪತ್ರಕರ್ತರ ಪ್ರತಿನಿಧಿಗಳಾಗಿದ್ದಾರೆ" ಎಂದು ನಾರ್ವೇಜಿಯನ್ ನೊಬೆಲ್ ಸಮಿತಿಯ ಅಧ್ಯಕ್ಷ ಬೆರಿಟ್ ರೀಸ್-ಆಂಡರ್ಸನ್ ಶುಕ್ರವಾರ ಹೇಳಿದರು.


1935 ರಲ್ಲಿ ಜರ್ಮನ್ ಕಾರ್ಲ್ ವಾನ್ ಒಸಿಟ್ಜ್ಕಿ ತನ್ನ ದೇಶದ ರಹಸ್ಯ ಯುದ್ಧಾನಂತರದ ಮರು ಶಸ್ತ್ರಾಸ್ತ್ರ ಕಾರ್ಯಕ್ರಮವನ್ನು ಬಹಿರಂಗಪಡಿಸಿದ್ದಕ್ಕಾಗಿ ಪ್ರಶಸ್ತಿಯನ್ನು ಗೆದ್ದ ನಂತರ ಪತ್ರಕರ್ತರಿಗೆ ದೊರೆತಿರುವ ಮೊದಲ ಬಹುಮಾನವಾಗಿದೆ.


ಇದನ್ನೂ ಓದಿ: ಅಮೆರಿಕದ ಅರ್ಥಶಾಸ್ತ್ರಜ್ಞ ಮಿಲ್ಗ್ರೋಮ್ ಮತ್ತು ವಿಲ್ಸನ್ ಅವರಿಗೆ ಈ ಸಾಲಿನ ನೊಬೆಲ್ ಪ್ರಶಸ್ತಿ


ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಗೆ ನೊಬೆಲ್ ಪ್ರಶಸ್ತಿ


"ರಾಹುಲ್ ದ್ರಾವಿಡ್ ಭಾರತ ಕ್ರಿಕೆಟ್ ತಂಡಕ್ಕೆ ಪೂರ್ಣಾವಧಿ ಕೋಚ್ ಆಗಬಾರದು"


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.