ಕಾಬೂಲ್‌ನ ಮಸೀದಿಯಲ್ಲಿ ಬಾಂಬ್ ಸ್ಪೋಟ, 8 ಸಾವು, 18 ಮಂದಿಗೆ ಗಾಯ
Kabul Bomb Blast: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಮಸೀದಿಯೊಂದರ ಬಳಿ ಶುಕ್ರವಾರ ನಡೆದ ಉಗ್ರರ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು 18 ಮಂದಿ ಗಾಯಗೊಂಡಿದ್ದಾರೆ.
ಕಾಬೂಲ್‌ನಲ್ಲಿ ಬಾಂಬ್ ಸ್ಫೋಟ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಮಸೀದಿ ಬಳಿ ನಿನ್ನೆ (ಶುಕ್ರವಾರ 05 ಆಗಸ್ಟ್) ನಡೆದ ಭಯೋತ್ಪಾದಕ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 18 ಜನರು ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಶುಕ್ರವಾರ ಮಸೀದಿ ಬಳಿ ನಿಲ್ಲಿಸಿದ್ದ ವಾಹನದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಾಲಿಬಾನ್ ನ ಹಿರಿಯ ಅಧಿಕಾರಿಯೊಬ್ಬರು ಬಾಂಬ್ ದಾಳಿಯನ್ನು ದೃಢಪಡಿಸಿದ್ದು, ಕಾರಿನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ತಾಲಿಬಾನ್ ನೇಮಕಗೊಂಡ ವಕ್ತಾರ ಖಾಲಿದ್ ಜದ್ರಾನ್ ಪ್ರಕಾರ, ಪಶ್ಚಿಮ ಕಾಬೂಲ್‌ನ ಶಿಯಾ ಪ್ರಾಬಲ್ಯದ ಸರ್-ಇ ಕರೇಜ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬಾಂಬ್ ಸ್ಫೋಟ ಸಂಭವಿಸಿದೆ.
ಇದನ್ನೂ ಓದಿ- Snake: ಅಬ್ಬಬ್ಬಾ... ದೈತ್ಯ ಹೆಬ್ಬಾವನ್ನು ಹೆಗಲ ಮೇಲೆ ಹೊತ್ತೊಯ್ದ ವ್ಯಕ್ತಿ: ವಿಡಿಯೋ ನೋಡಿ
ಆರಂಭಿಕ ವರದಿಯಲ್ಲಿ, ಬಾಂಬ್ ಸ್ಫೋಟದಲ್ಲಿ ಮೊದಲಿಗೆ ಇಬ್ಬರು ಮಾತ್ರ ಸಾವನ್ನಪ್ಪಿದ್ದರು. ಆದರೆ ನಂತರ ತೀವ್ರವಾಗಿ ಗಾಯಗೊಂಡಿದ್ದ ಕೆಲವರು ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಸಾವಿನ ನಂತರ, ಸಾವಿನ ಸಂಖ್ಯೆ ಎಂಟಕ್ಕೆ ಏರಿತು ಮತ್ತು ಈ ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.
ದಾಳಿಯ ಹೊಣೆ ಹೊತ್ತ ಐಎಸ್:
ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಐಎಸ್) ಈ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತುಕೊಂಡಿದೆ. ಪೊಲೀಸರು ಈ ಬಾಂಬ್ ಸ್ಫೋಟದಲ್ಲಿ 8 ಮಂದಿ ಸಾವನ್ನಾಪಿದ್ದಾರೆ ಎಂದು ದೃಢಪಡಿಸಿದ್ದರೆ, ಸ್ಫೋಟದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ಭಯೋತ್ಪಾದಕ ಸಂಘಟನೆ ಐಎಸ್ ಹೇಳಿಕೊಂಡಿದೆ.
ಇದನ್ನೂ ಓದಿ- ಅಮೆರಿಕದಲ್ಲಿ ಮಂಕಿಪಾಕ್ಸ್ ಅಲರ್ಟ್- ಹೆಲ್ತ್ ಎಮರ್ಜೆನ್ಸಿ ಘೋಷಣೆ
ಈ ಘಟನೆಯ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾನಾಲ್ಲಿ ವೈರಲ್ ಆಗುತ್ತಿವೆ. ಇವುಗಳಲ್ಲಿ ಸ್ಫೋಟದ ನಂತರ ಜನರು ಸಹಾಯಕ್ಕಾಗಿ ಕಿರುಚುತ್ತಿರುವುದನ್ನು ಕಾಣಬಹುದಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.