"ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು": ಮಲಾಲಾ ಯೂಸುಫ್‌ಜಾಯ್

Malala Yousafzai: ಪಾಕಿಸ್ತಾನದ ಸಾಮಾಜಿಕ ಕಾರ್ಯಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್‌ಜಾಯ್ ಅವರು ಕರ್ನಾಟಕ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ. 

Edited by - Chetana Devarmani | Last Updated : Feb 10, 2022, 05:27 PM IST
  • "ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು"
  • ಪಾಕಿಸ್ತಾನದ ಸಾಮಾಜಿಕ ಕಾರ್ಯಕರ್ತೆ ಮಲಾಲಾ ಯೂಸುಫ್‌ಜಾಯ್
  • ಕರ್ನಾಟಕ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಅಸಮ್ಮತಿ
"ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು": ಮಲಾಲಾ ಯೂಸುಫ್‌ಜಾಯ್  title=
ಮಲಾಲಾ ಯೂಸುಫ್‌ಜಾಯ್

ನವದೆಹಲಿ: ಪಾಕಿಸ್ತಾನದ ಸಾಮಾಜಿಕ ಕಾರ್ಯಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್‌ಜಾಯ್ (Malala Yousafzai) ಅವರು ಕರ್ನಾಟಕ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ. ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯುವುದು ತುಂಬಾ ಅಪಾಯಕಾರಿ ಎಂದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಹೆಣ್ಣು ಮಕ್ಕಳು ಹಿಜಾಬ್ (hijab) ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕವಾಗಿದೆ. ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು."

“College is forcing us to choose between studies and the hijab”.

Refusing to let girls go to school in their hijabs is horrifying. Objectification of women persists — for wearing less or more. Indian leaders must stop the marginalisation of Muslim women. https://t.co/UGfuLWAR8I

— Malala (@Malala) February 8, 2022

 

ಮಲಾಲಾ ಯೂಸುಫ್‌ಜಾಯ್ ಅವರು ಪಾಕಿಸ್ತಾನ (Pakistan) ಸೇರಿದಂತೆ ವಿಶ್ವದಾದ್ಯಂತ ಹೆಣ್ಣುಮಕ್ಕಳ ಪರ ಧ್ವನಿ ಎತ್ತುತ್ತಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಅವರಿಗೆ 2014 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು.

ಇದನ್ನೂ ಓದಿ:  Karnataka Hijab Row:ಇಂದು ಮಧ್ಯಾಹ್ನ ಪೂರ್ಣ ಪೀಠದಲ್ಲಿ ಹಿಜಾಬ್ ವಿವಾದದ ವಿಚಾರಣೆ, ಶಾಲಾ ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಹಿಜಾಬ್ ವಿವಾದವು ಕರ್ನಾಟಕದಲ್ಲಿ (Karnataka Hijab Row) ಸಾಕಷ್ಟು ಗಮನ ಸೆಳೆದಿದೆ. ಹೆಚ್ಚುತ್ತಿರುವ ವಿವಾದವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಎಲ್ಲಾ ಶಾಲಾ-ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಿಸಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News