ನವದೆಹಲಿ: ಪಾಕಿಸ್ತಾನದ ಸಾಮಾಜಿಕ ಕಾರ್ಯಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್‌ಜಾಯ್ (Malala Yousafzai) ಅವರು ಕರ್ನಾಟಕ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ. ಹೆಣ್ಣು ಮಕ್ಕಳು ಶಾಲೆಗೆ ಹೋಗದಂತೆ ತಡೆಯುವುದು ತುಂಬಾ ಅಪಾಯಕಾರಿ ಎಂದರು.


COMMERCIAL BREAK
SCROLL TO CONTINUE READING

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಹೆಣ್ಣು ಮಕ್ಕಳು ಹಿಜಾಬ್ (hijab) ಧರಿಸಿ ಶಾಲೆಗೆ ಹೋಗಲು ನಿರಾಕರಿಸುವುದು ಭಯಾನಕವಾಗಿದೆ. ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು."