Mass Firing in Virginia Walmart store: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ ನಡೆದಿದೆ.ವರ್ಜೀನಿಯಾದ ವಾಲ್‌ಮಾರ್ಟ್ ಅಂಗಡಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಇಲ್ಲಿಯವರೆಗೆ, ಈ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ರಾತ್ರಿ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಅಂಗಡಿಗೆ ನುಗ್ಗಿ ಗುಂಡು ಹಾರಿಸಲು ಆರಂಭಿಸಿದ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಲಭಿಸಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೆಲ ಹೊತ್ತಿನ ಬಳಿಕ ದಾಳಿಕೋರ ಶವವಾಗಿ ಪತ್ತೆಯಾಗಿದ್ದಾನೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ :  2023ರಲ್ಲಿ ಆಕಾಶದಿಂದ ಬೆಂಕಿ ಮಳೆ, 3ನೇ ಮಹಾಯುದ್ಧ, ನಾಸ್ಟ್ರಾಡಾಮಸ್ ಭಯಾನಕ ಭವಿಷ್ಯವಾಣಿ


ಪೊಲೀಸರ ಪ್ರಕಾರ, ಮಂಗಳವಾರ ರಾತ್ರಿ 10:12 ರ ಸುಮಾರಿಗೆ, ವಾಲ್‌ಮಾರ್ಟ್‌ನಲ್ಲಿ ಗುಂಡಿನ ದಾಳಿಯ ವರದಿಯನ್ನು ಪೊಲೀಸರು ಸ್ವೀಕರಿಸಿದರು. ಇದಾದ ನಂತರ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ತಂಡ ಅಂಗಡಿಯನ್ನು ಸುತ್ತುವರಿದಿದೆ. ತಂಡವೊಂದು ಒಳಗೆ ಪ್ರವೇಶಿಸಿದಾಗ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಮೃತಪಟ್ಟಿದ್ದ. ಈ ಗುಂಡಿನ ಚಕಮಕಿಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 


ಗುಂಡಿನ ದಾಳಿಯ ನಂತರ ಶೂಟರ್ ಸಹ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆಯೇ ಅಥವಾ ಅವನು ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆಯೇ ಎಂಬುದು ಇನ್ನೂ ತಿಳಿದಿಲ್ಲ. ದಾಳಿಕೋರ ಪೊಲೀಸರ ಮೇಲೆ ಗುಂಡು ಹಾರಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಾಲ್‌ಮಾರ್ಟ್ ಕೂಡ ಈ ಗುಂಡಿನ ದಾಳಿಯ ಬಗ್ಗೆ ಬೇಸರ ವ್ಯಕ್ತಪಡಿಸಿದೆ. ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ ಕಂಪನಿ, "ಅಮೆರಿಕದ ಅಂಗಡಿಯಲ್ಲಿ ನಡೆದ ಘಟನೆಯಿಂದ ನಮಗೆ ಆಘಾತವಾಗಿದೆ" ಎಂದು ಹೇಳಿದರು.


ಇದನ್ನೂ ಓದಿ :  ಮತ್ತೆ ಬಂದ ಮೃತಪಟ್ಟಿದ್ದ ವ್ಯಕ್ತಿ…ದೆವ್ವದ ಜೊತೆ ಮಾತನಾಡಿದ ಸಿಬ್ಬಂದಿ..ಕ್ಯಾಮರಾದಲ್ಲಿ ವಿಡಿಯೋ ಸೆರೆ


ಎರಡು ದಿನಗಳ ಹಿಂದೆ, ಅಂದರೆ ಭಾನುವಾರ ರಾತ್ರಿ ಯುಎಸ್ಎಯ ಕೊಲೊರಾಡೋದ ಎಲ್ಜಿಬಿಟಿಕ್ಯು ಕ್ಲಬ್‌ನಲ್ಲಿ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು. ಈ ಗುಂಡಿನ ದಾಳಿಯಲ್ಲಿ 5 ಜನರು ಸಾವನ್ನಪ್ಪಿದ್ದರೆ, 18 ಜನರು ಗಾಯಗೊಂಡಿದ್ದಾರೆ. ಅಧ್ಯಕ್ಷ ಬೈಡನ್ ಕೂಡ ಈ ಘಟನೆಗೆ ಪ್ರತಿಕ್ರಿಯಿಸಿದ್ದಾರೆ. ದುಃಖವನ್ನು ವ್ಯಕ್ತಪಡಿಸಿದ ಅವರು, ದ್ವೇಷದ ವಿರುದ್ಧ ಧ್ವನಿ ಎತ್ತುವಂತೆ ಅಮೆರಿಕನ್ನರಿಗೆ ಮನವಿ ಮಾಡಿದರು.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.