ನಮಸ್ತೆ ಟ್ರಂಪ್ ಕಾರ್ಯಕ್ರಮ ಹೌಡಿ ಮೋದಿಯಂತೆ ಇರಲಿದೆ- ವಿದೇಶಾಂಗ ಸಚಿವಾಲಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಆಯೋಜಿಸಿದ್ದ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯಲಿರುವ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹೂಸ್ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಂತೆ ಇರಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಗುರುವಾರ ತಿಳಿಸಿದ್ದಾರೆ.

Last Updated : Feb 20, 2020, 04:43 PM IST
ನಮಸ್ತೆ ಟ್ರಂಪ್ ಕಾರ್ಯಕ್ರಮ ಹೌಡಿ ಮೋದಿಯಂತೆ ಇರಲಿದೆ- ವಿದೇಶಾಂಗ ಸಚಿವಾಲಯ

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಆಯೋಜಿಸಿದ್ದ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯಲಿರುವ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹೂಸ್ಟನ್‌ನಲ್ಲಿ ನಡೆದ ‘ಹೌಡಿ ಮೋದಿ’ ಕಾರ್ಯಕ್ರಮದಂತೆ ಇರಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಗುರುವಾರ ತಿಳಿಸಿದ್ದಾರೆ.

"ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭೇಟಿಗಾಗಿ ನಾವು ಕುತೂಹಲದಿಂದ ಕಾಯುತ್ತಿದ್ದೇವೆ, ಇದು ನಮ್ಮ ಜಾಗತಿಕ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುತ್ತದೆ" ಎಂದು ಪತ್ರಿಕಾಗೋಷ್ಠಿಯಲ್ಲಿ ರವೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ಫೆಬ್ರವರಿ 24 ರಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಎರಡು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಬರಲಿದ್ದಾರೆ. ಟ್ರಂಪ್ ಅವರ ಭಾರತಕ್ಕೆ ಮೊದಲು ಭೇಟಿ ನೀಡಿದ್ದು, ಭಾರತ-ಯುಎಸ್ ಸಂಬಂಧಗಳಿಗೆ ಪ್ರಮುಖ ಉತ್ತೇಜನವಾಗಿದೆ.

More Stories

Trending News