ಇಸ್ಲಾಮಾಬಾದ್: ಸೋಮವಾರವಷ್ಟೇ ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರ್ಕಾರ ಉರುಳಿ, ಶಹಬಾಜ್ ಷರೀಫ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ‌ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ಶಹಬಾಜ್ ಷರೀಫ್ ತಮ್ಮ ಮೊದಲ ಭಾಷಣದಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ, “ಭಾರತ ಭಯೋತ್ಪಾದನೆಯನ್ನು ಬಯಸುವುದಿಲ್ಲ” ಅಂತ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: Imran Khan: ಇಮ್ರಾನ್ ಖಾನ್ ಸರ್ಕಾರ ಪತನ, ಪಾಕಿಸ್ತಾನದ ಹೊಸ ಪ್ರಧಾನಿ ಯಾರು ಗೊತ್ತಾ?


"ಪಾಕಿಸ್ತಾನ ಭಾರತದೊಂದಿಗೆ ಶಾಂತಿಯನ್ನು ಬಯಸುತ್ತದೆ. ಆದರೆ ಕಾಶ್ಮೀರ ಸಮಸ್ಯೆಯ ಪರಿಹಾರವಿಲ್ಲದೆ ಶಾಂತಿ ಸಾಧ್ಯವಿಲ್ಲ" ಎಂದು ಶಹಬಾಜ್ ಷರೀಫ್ ಇಸ್ಲಾಮಾಬಾದ್‌ನಲ್ಲಿ ಹೇಳಿದ್ದರು.  


ಭಾರತದ ಜೊತೆ ಉತ್ತಮ ಸಂಬಂಧ ಹೊಂದುವ ಉದ್ದೇಶವಿದೆ ಎಂದಿದ್ದ ಷರೀಫ್ , ಕಾಶ್ಮೀರ ವಿಷಯ ಇತ್ಯರ್ಥವಾಗದಿದ್ದರೆ ಇದು ಸಾಧ್ಯವಾಗುವುದಿಲ್ಲ ಎಂದಿದ್ದರು. ‘ನಮ್ಮ ದೇಶದ ಪಕ್ಕದಲ್ಲಿ ಯಾರಿರಬೇಕು ಎಂದು ಆಯ್ಕೆ ಮಾಡಲಾಗದು. ನಾವು ನೆರೆಹೊರೆಯವರಾಗಿ ಇರಬೇಕಷ್ಟೇ. ಆದರೆ, ದೇಶ ಉದಯವಾದ ದಿನದಿಂದಲೂ ಭಾರತದ ಜೊತೆಗೆ ಪಾಕಿಸ್ತಾನದ ಸಂಬಂಧ ಉತ್ತಮವಾಗಿಲ್ಲ. ಇದು ದುರದೃಷ್ಟಕರ ವಿಚಾರ’ ಎಂದು ಶಹಬಾಜ್‌ ಹೇಳಿದ್ದರು.


ಪಾಕಿಸ್ತಾನದ ಪ್ರಧಾನಿಯಾಗಿ ಸೋಮವಾರ ಆಯ್ಕೆಯಾದ ಶಹಬಾಜ್ ಷರೀಫ್, ಕಾಶ್ಮೀರದ ಜನರಿಗೆ ರಾಜತಾಂತ್ರಿಕ, ನೈತಿಕ ಬೆಂಬಲ ನೀಡುವುದರ ಜೊತೆಗೆ ಎಲ್ಲ ಅಂತರರಾಷ್ಟ್ರೀಯ ವೇದಿಕೆಗಳಿಗೆ ಈ ವಿಚಾರವನ್ನು ಒಯ್ಯುವ ಭರವಸೆ ನೀಡಿದ್ದರು. 


ಇದನ್ನು ಓದಿ: ಪಾಕ್ ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಜ್ ಷರೀಫ್ ನಾಮ ನಿರ್ದೇಶನ


ಇದಕ್ಕೆ ತಿರುಗೇಟು ನೀಡಿದ ಭಾರತದ ಪ್ರಧಾನಿ, "ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು. ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು” ಎಂದು ಸಂದೇಶ ಕಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.