)
Nobel Peace Prize 2025 Winners: ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವ ಅವರ ಅವಿಶ್ರಾಂತ ಕೆಲಸಕ್ಕಾಗಿ ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಅವರ ಹೋರಾಟಕ್ಕಾಗಿ ಮಾರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೇಜಿಯನ್ ನೊಬೆಲ್ ಸಮಿತಿ ನಿರ್ಧರಿಸಿದೆ" ಎಂದು ಸಮಿತಿಯು ತಮ್ಮ ಅಧಿಕೃತ X ಹ್ಯಾಂಡಲ್ನಲ್ಲಿ ಪ್ರಕಟಿಸಿದೆ.
ಅಂದಹಾಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಜನರು ಸಹ ಅವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತದೆ ಅಂತ ನಿರೀಕ್ಷಿಸುತ್ತಿದ್ದರು. ಆಗಸ್ಟ್ನಲ್ಲಿ, ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್, ಟ್ರಂಪ್ "ವಿಶ್ವದಾದ್ಯಂತ ಹಲವಾರು ಸಂಘರ್ಷಗಳನ್ನು ಕೊನೆಗೊಳಿಸಿದ್ದರಿಂದ" ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಬೇಕೆಂದು ಒತ್ತಾಯಿಸಿದ್ದರು.
ಅಷ್ಟೇ ಅಲ್ಲದೆ, "ಕೇವಲ ಏಳು ತಿಂಗಳ ಅವಧಿಯಲ್ಲಿ, ನಾನು ಏಳು ಯುದ್ಧಗಳನ್ನು ಕೊನೆಗೊಳಿಸಿದ್ದೇನೆ" ಎಂದು ಟ್ರಂಪ್ ಹೇಳಿದರು. ಇಸ್ರೇಲ್ ಮತ್ತು ಇರಾನ್, ಭಾರತ ಮತ್ತು ಪಾಕಿಸ್ತಾನ, ರುವಾಂಡಾ ಮತ್ತು ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ, ಥೈಲ್ಯಾಂಡ್ ಮತ್ತು ಕಾಂಬೋಡಿಯಾ, ಅರ್ಮೇನಿಯಾ ಮತ್ತು ಅಜೆರ್ಬೈಜಾನ್, ಈಜಿಪ್ಟ್ ಮತ್ತು ಇಥಿಯೋಪಿಯಾ ಮತ್ತು ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧಗಳನ್ನು ನಾನು ಕೊನೆಗೊಳಿಸಿದ್ದೇನೆ ಎಂದು ಟ್ರಂಪ್ ಹೇಳಿಕೊಂಡಿದ್ದರು.