ಅಮೆರಿಕದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆಸ್ಪತ್ರೆ ಆವರಣದಲ್ಲಿ ಐವರ ಸಾವು
ಮೇ ತಿಂಗಳಿನಲ್ಲಿ ಅಮೆರಿಕದಲ್ಲಿ 2 ಬಾರಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಕಳೆದ ವಾರವಷ್ಟೇ ಟೆಕ್ಸಾಸ್‍ನಲ್ಲಿ ಬಂದೂಕುದಾರಿಯೊಬ್ಬ 19 ಮಕ್ಕಳು ಮತ್ತು ಇಬ್ಬರು ಶಿಕ್ಷಕರನ್ನು ಗುಂಡಿಕ್ಕಿ ಕೊಂದಿದ್ದ.
ಓಕ್ಲಹೋಮಾ: ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿದೆ. ಆಸ್ಪತ್ರೆ ಆವರಣದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿದ್ದಾರೆ. ಬಂದೂಕು ಹಿಡಿದು ಬಂದ ಅಪರಿಚಿತ ವ್ಯಕ್ತಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ.
ಓಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್ ಫ್ರಾನ್ಸಿಸ್ ಆಸ್ಪತ್ರೆಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಗುಂಡಿನ ದಾಳಿ ಬಳಿಕ ದಾಳಿಕೋರ ಸಹ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆ ಕಟ್ಟಡದ 2ನೇ ಮಹಡಿಯಲ್ಲಿ ವ್ಯಕ್ತಿಯೊಬ್ಬ ಬಂದೂಕು ಹಿಡಿದಿರುವ ಬಗ್ಗೆ ನಮಗೆ ಕರೆ ಬಂದಿತ್ತು. ನಾವು ಸ್ಥಳಕ್ಕೆ ಬರುವಷ್ಟರಲ್ಲಿ ಆತ ಅನೇಕರ ಮೇಲೆ ಗುಂಡಿನ ದಾಳಿ ನಡೆಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಜಗತ್ತಿನಾದ್ಯಂತ 23 ದೇಶಗಳಿಗೆ ಹರಡಿದ ಮಂಗನ ಕಾಯಿಲೆ
ಅಪರಿಚಿತ ವ್ಯಕ್ತಿಯ ಗುಂಡಿನ ದಾಳಿಗೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಅಂತಾ ಅಧಿಕಾರಿಗಳು ತಿಳಿಸಿದ್ದಾರೆ. ಹಂತಕನ ಬಳಿ ದೊಡ್ಡದಾದ ರೈಫಲ್ ಮತ್ತು ಪಿಸ್ತೂಲ್ ಇತ್ತು. ಆತ ಜನರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ಮೇ ತಿಂಗಳಿನಲ್ಲಿ ಅಮೆರಿಕದಲ್ಲಿ ನಡೆದ 2 ಬಾರಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಕಳೆದ ವಾರವಷ್ಟೇ ಟೆಕ್ಸಾಸ್‍ನಲ್ಲಿ ಬಂದೂಕುದಾರಿಯೊಬ್ಬ 19 ಮಕ್ಕಳು ಮತ್ತು ಇಬ್ಬರು ಶಿಕ್ಷಕರನ್ನು ಗುಂಡಿಕ್ಕಿ ಕೊಂದಿದ್ದ. ನೂಯಾರ್ಕ್‍ನ ಸೂಪರ್ ಮಾರ್ಕೆಟ್‍ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ 10 ಮಂದಿಯನ್ನು ಹತ್ಯೆ ಮಾಡಿದ್ದ. ಪದೇ ಪದೇ ಗುಂಡಿನ ದಾಳಿ ನಡೆಯುತ್ತಿರುವುದು ಅಮೆರಿಕದಲ್ಲಿ ಆತಂಕ ಹುಟ್ಟಿಸಿದೆ.
ಇದನ್ನೂ ಓದಿ: ಕಚ್ಚಾ ತೈಲ ರಪ್ತಿಗಾಗಿ ಚೀನಾ ಮತ್ತು ಭಾರತವನ್ನು ಅವಲಂಬಿಸಿದ ರಷ್ಯಾ
ಘಟನೆ ಕುರಿತು ಅಧ್ಯಕ್ಷರಿಗೆ ಮಾಹಿತಿ
ಮತ್ತೊಂದೆಡೆ ಶ್ವೇತಭವನವೂ ಈ ಘಟನೆಯ ಮೇಲೆ ಕಣ್ಣಿಟ್ಟಿದೆ. ಟಲ್ಸಾದಲ್ಲಿ ನಡೆದ ಗುಂಡಿನ ದಾಳಿಯ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಶ್ವೇತಭವನದ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಂಡಿನ ದಾಳಿಯ ಬಗ್ಗೆ ಅಧ್ಯಕ್ಷರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಜೋ ಬಿಡೆನ್ ಇತ್ತೀಚೆಗೆ ನ್ಯೂಜಿಲೆಂಡ್‌ನ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರನ್ನು ಅಮೆರಿಕದಲ್ಲಿ ಹಿಂಸಾಚಾರವನ್ನು ಎದುರಿಸಲು ಸಲಹೆ ಕೇಳಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.