Pakistan Flood: ಪ್ರವಾಹದಿಂದ 1000 ಕ್ಕೂ ಹೆಚ್ಚು ಜನರ ಸಾವು : ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
Flood in Pakistan: ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಮರ್ಯಮ್ ಔರಂಗಜೇಬ್, ಗುರುವಾರ ನೀಡಿದ ಹೇಳಿಕೆಯಲ್ಲಿ ದೇಶದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ತುರ್ತು ಪರಿಸ್ಥಿತಿ ಎಂದು ಬಣ್ಣಿಸಿದ್ದಾರೆ.
Flood in Pakistan: ನೆರೆಯ ರಾಷ್ಟ್ರ ಪಾಕಿಸ್ತಾನ ಪ್ರವಾಹದ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಪಾಕಿಸ್ತಾನ ಸರ್ಕಾರವು 'ರಾಷ್ಟ್ರೀಯ ತುರ್ತುಸ್ಥಿತಿ'ಯನ್ನು ಘೋಷಿಸಿದೆ. ಪ್ರವಾಹ ಪೀಡಿತ ಜನರ ಪುನರ್ವಸತಿಗೆ ಸಹಾಯ ಮಾಡಲು ದೇಣಿಗೆಗಳನ್ನು ಸಂಗ್ರಹಿಸುತ್ತಿದೆ. ಅಲ್ಲಿನ ಮಾಧ್ಯಮ ವರದಿಯ ಪ್ರಕಾರ, ಪ್ರಧಾನ ಮಂತ್ರಿ ಶಹಬಾಜ್ ಷರೀಫ್ ತಮ್ಮ ಯುನೈಟೆಡ್ ಕಿಂಗ್‌ಡಮ್ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಅಲ್ಲದೆ ತಮ್ಮ ಅಧ್ಯಕ್ಷತೆಯಲ್ಲಿ ಪ್ರವಾಹ ಪರಿಹಾರ ಚಟುವಟಿಕೆಗಳನ್ನು ಪರಿಶೀಲಿಸುವ ಸಭೆಯನ್ನು ನಡೆಸಲಿದ್ದಾರೆ.
ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ :
ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಮರ್ಯಮ್ ಔರಂಗಜೇಬ್, ಗುರುವಾರ ನೀಡಿದ ಹೇಳಿಕೆಯಲ್ಲಿ ದೇಶದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ತುರ್ತು ಪರಿಸ್ಥಿತಿ ಎಂದು ಬಣ್ಣಿಸಿದ್ದಾರೆ. ಬಲೂಚಿಸ್ತಾನ ಮತ್ತು ಸಿಂಧ್‌ನಲ್ಲಿ ಪ್ರವಾಹದಿಂದ ಉಂಟಾದ ವಿನಾಶದಿಂದಾಗಿ ಪಾಕಿಸ್ತಾನದಲ್ಲಿ ಇದುವರೆಗೆ 343 ಮಕ್ಕಳು ಸೇರಿದಂತೆ 937 ಮಡಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ದೇಶದಲ್ಲಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕನಿಷ್ಠ 30 ಮಿಲಿಯನ್ ಜನರು ನಿರಾಶ್ರಿತರಾಗಿದ್ದಾರೆ.
ಇದನ್ನೂ ಓದಿ : Imran Khan : ಇಮ್ರಾನ್ ಖಾನ್‌ಗೆ ಮಧ್ಯಂತರ ಜಾಮೀನು
ಪ್ರವಾಹ ಸಂತ್ರಸ್ತರ ನೆರವಿಗೆ ಮನವಿ :
ಮಳೆಯಿಂದ ಸಂಭವಿಸಿರುವ ಭಾರೀ ವಿನಾಶದ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ದೊಡ್ಡ ಮೊತ್ತದ ಅಗತ್ಯವಿರುವುದರಿಂದ ಪ್ರವಾಹ ಸಂತ್ರಸ್ತರ ಪುನರ್ವಸತಿಗಾಗಿ ವಿದೇಶದಲ್ಲಿ ನೆಲೆಸಿರುವ ಪಾಕಿಸ್ತಾನಿಯರು ಸೇರಿದಂತೆ, ಎಲ್ಲರೂ ದೇಶಕ್ಕೆ ದೇಣಿಗೆ ನೀಡುವಂತೆ ಮನವಿ ಮಾಡಲಾಗಿದೆ. ಎರಡು ದಿನಗಳ ಅಧಿಕೃತ ಭೇಟಿಗಾಗಿ ಕತಾರ್ ಗೆ ತೆರಳಿರುವ ಶಹಬಾಜ್ ಷರೀಫ್, ದೇಶದ ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೇಶಕ್ಕೆ ವಾಪಸಾಗುತ್ತಿದ್ದಾರೆ.
ಪ್ರಧಾನಿಯವರ ಯುಕೆ ಪ್ರವಾಸ ರದ್ದು :
ಪ್ರಧಾನಿ ತಮ್ಮ ಖಾಸಗಿ ಬ್ರಿಟನ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಮ್ಮಗಳ ಚಿಕಿತ್ಸೆಗಾಗಿ ಅವರು ಕತಾರ್‌ನಿಂದ ಲಂಡನ್‌ಗೆ ತೆರಳಬೇಕಿತ್ತು. ಆದರೆ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕತಾರ್ ನಿಂದಲೇ ಷರೀಫ್ ವಾಪಾಸಾಗುತ್ತಿದ್ದಾರೆ. ಪ್ರವಾಹ ಪರಿಹಾರ ಚಟುವಟಿಕೆಗಳನ್ನು ಪರಿಶೀಲಿಸುವ ಸಭೆಯನ್ನು ಹಮ್ಮಿಕೊಂಡಿದ್ದು, ಈ ಸಭೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿದಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಪ್ರವಾಹ ಪೀಡಿತರ ರಕ್ಷಣೆ ಮತ್ತು ಪರಿಹಾರಕ್ಕಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಲಿದ್ದಾರೆ.
ಇದನ್ನೂ ಓದಿ : ಭತ್ತದ ವಿಸ್ತಿರ್ಣದಲ್ಲಿ ಕುಸಿತ, ಭಾರತದ ಮತ್ತು ಪ್ರಪಂಚದ ಮೇಲಾಗುವ ಪರಿಣಾಮವೇನು ಗೊತ್ತೇ?
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.