Odisha Rail Accident ಕುರಿತು ಪಾಕ್ ಪ್ರತಿಕ್ರಿಯೆ, ಟ್ವೀಟ್ ಮಾಡಿದ ಬಿಲಾವಲ್ ಭುಟ್ಟೊ
Odisha Train Derail Incident: ಒಡಿಶಾ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಇದುವರೆಗೆ ಪಾಕಿಸ್ತಾನದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ, ಆದರೆ ಇದೀಗ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಟ್ವೀಟ್ ಮಾಡುವ ಮೂಲಕ ಪಾಕಿಸ್ತಾನದ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದಕ್ಕೂ ಮುನ್ನ ಹಲವು ರಾಷ್ಟ್ರಗಳ ಮುಖ್ಯಸ್ಥರಿಂದ ಸಂದೇಶಗಳು ಬಂದಿವೆ
Odisha Train Mishap: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಕುರಿತು ಪ್ರತಿಕ್ರಿಯೆಗಳು ಮುಂದುವರೆದಿದೆ. ಏತನ್ಮಧ್ಯೆ, ಈ ಭೀಕರ ರೈಲು ಅಪಘಾತದ ಕುರಿತು ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ವಿದೇಶಗಳ ಅನೇಕ ಮುಖ್ಯಸ್ಥರು ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. ನೇಪಾಳ, ಕೆನಡಾ ಸೇರಿದಂತೆ ಹಲವು ರಾಷ್ಟ್ರಗಳ ಮುಖ್ಯಸ್ಥರು ಟ್ವೀಟ್ ಮಾಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರೊಂದಿಗೆ ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ. ಈ ಮಧ್ಯೆ, ಪಾಕಿಸ್ತಾನದ ಕಡೆಯಿಂದ ಪ್ರತಿಕ್ರಿಯೆ ಕೂಡ ಬಂದಿದೆ. ಇದುವರೆಗೆ ಪಾಕಿಸ್ತಾನದ ವತಿಯಿಂದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ಹೊರಬಂದಿರಲಿಲ್ಲ, ಆದರೆ, ಇದೀಗ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಹೇಳಿಕೆ ನೀಡಿದ್ದಾರೆ.
PAK ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ
ವಾಸ್ತವವಾಗಿ, ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಟ್ವೀಟ್ ಮಾಡುವ ಮೂಲಕ ತನ್ನ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಕುರಿತು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿರುವ ಬಿಲಾವಲ್, 'ಭಾರತದ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆಯನ್ನು ಕೇಳಿ ದುಃಖವಾಯಿತು. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಸಹಾನುಭೂತಿ ಇದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇವೆ" ಎಂದಿದ್ದಾರೆ. ಬಿಲಾವಲ್ ಭುಟ್ಟೊ ಜರ್ದಾರಿ ಅವರು ತಮ್ಮ ಟ್ವೀಟ್‌ನಲ್ಲಿ ಬಾಲಸೋರ್ ರೈಲು ಅಪಘಾತ ಎಂಬ ಹ್ಯಾಶ್‌ಟ್ಯಾಗ್ ಅನ್ನು ಸಹ ಬಳಸಿದ್ದಾರೆ. ಬಿಲಾವಲ್ ಭುಟ್ಟೋ ಜರ್ದಾರಿ ಅವರ ಈ ಟ್ವೀಟ್‌ಗೆ ಜನರು ಸಹ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.
Train Collision: ಬಾಲಾಸೋರ್ ತಲುಪಿದ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರು
ಮತ್ತೊಂದೆಡೆ, ಒಡಿಶಾದಲ್ಲಿ ಶನಿವಾರ ಸಂಭವಿಸಿದ ರೈಲು ಅಪಘಾತದಲ್ಲಿ ಜನರ ಸಾವಿಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಸಬಾ ಕೊರೊಸಿ ಸಂತಾಪ ಸೂಚಿಸಿದ್ದಾರೆ. ಒಡಿಶಾದಲ್ಲಿ ನಡೆದ ರೈಲು ಅಪಘಾತದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ ಎಂದು ಅವರು ಹೇಳಿದ್ದಾರೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರು, ಅವರ ಕುಟುಂಬಗಳು ಮತ್ತು ತುರ್ತು ಸೇವೆಗಳೊಂದಿಗೆ ಇವೆ. ಜನರಿಗೆ ಮತ್ತು ಭಾರತ ಸರ್ಕಾರಕ್ಕೆ ನನ್ನ ಸಂತಾಪಗಳು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-Train Accident: ರೈಲು ಯಾತ್ರೆಯ ವೇಳೆ ಈ ಸಂಗತಿಗಳನ್ನು ನೆನಪಿನಲ್ಲಿಡಿ, ದುರಂತದ ವೇಳೆ ಪ್ರಾಣ ರಕ್ಷಿಸಿಕೊಳ್ಳಬಹುದು
ಸ್ಥಳಕ್ಕಾಗಮಿಸಿದ ಪ್ರಧಾನಿ ಮೋದಿ!
ಇದೆಲ್ಲದರ ಹೊರತಾಗಿ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ತೈವಾನ್ ಅಧ್ಯಕ್ಷ ಸಾಯಿ ಇಂಗ್ ವೆನ್ ಸೇರಿದಂತೆ ಅನೇಕ ವಿಶ್ವ ನಾಯಕರು ಈ ಘಟನೆಯ ಬಗ್ಗೆ ತಮ್ಮ ದೇಶದ ಪರವಾಗಿ ಸಂದೇಶಗಳನ್ನು ಕಳುಹಿಸಿದ್ದಾರೆ. ರೈಲು ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯ ಕುರಿತು ಪ್ರತಿ ಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಈ ರೈಲು ಅಪಘಾತದ ಪರಿಸ್ಥಿತಿಯನ್ನು ಚರ್ಚಿಸಲು ಪ್ರಧಾನಿ ತುರ್ತು ಸಭೆ ಕರೆದಿದ್ದಾರೆ. ಪ್ರಧಾನಿ ಮೋದಿ ಘಟನಾ ಸ್ಥಳಕ್ಕೂ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಸ್ತುತ ಗಾಯಾಳುಗಳ ಭೇಟಿಗೆ ತೆರಲಿದ್ದಾರೆ ಎನ್ನಲಾಗಿದೆ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.