Pakistan blast: ಪಾಕಿಸ್ತಾನ ರಾಜಕೀಯ ಸಮಾವೇಶದಲ್ಲಿ ಬಾಂಬ್ ಸ್ಫೋಟಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿ!

Pakistan bomb blast: ವರದಿಗಳ ಪ್ರಕಾರ, ಪಾಕಿಸ್ತಾನ ಬಾಂಬ್ ಸ್ಫೋಟದಲ್ಲಿ ಸ್ಥಳೀಯ ಜೆಯುಐ-ಎಫ್ ನಾಯಕ ಕೂಡ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Written by - Puttaraj K Alur | Last Updated : Jul 30, 2023, 09:56 PM IST
  • ಪಾಕಿಸ್ತಾನದಲ್ಲಿ ಆಯೋಜಿಸಿದ್ದ ರಾಜಕೀಯ ಸಮಾವೇಶದಲ್ಲಿ ಬಾಂಬ್ ಸ್ಫೋಟ
  • ಆತ್ಮಹತ್ಯಾ ಬಾಂಬರ್ ಸ್ಫೋಟಕ್ಕೆ 40ಕ್ಕೂ ಹೆಚ್ಚು ಮಂದಿ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ
  • ಪಾಕಿಸ್ತಾನದ ಖೈಬರ್ ಪಂಕ್ತುನ್ವಾ ಪ್ರಾಂತ್ಯದ ಬಜೌರ್ ನಗರದಲ್ಲಿ ನಡೆದಿರುವ ಘಟನೆ
Pakistan blast: ಪಾಕಿಸ್ತಾನ ರಾಜಕೀಯ ಸಮಾವೇಶದಲ್ಲಿ ಬಾಂಬ್ ಸ್ಫೋಟಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿ!   title=
ರಾಜಕೀಯ ಸಮಾವೇಶದಲ್ಲಿ ಬಾಂಬ್ ಸ್ಫೋಟ!

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಆಯೋಜಿಸಿದ್ದ ರಾಜಕೀಯ ಸಮಾವೇಶದಲ್ಲಿ ಬಾಂಬ್ ಸ್ಫೋಟಗೊಂಡು 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.  ಖೈಬರ್ ಪಂಕ್ತುನ್ವಾ ಪ್ರಾಂತ್ಯದ ಬಜೌರ್ ನಗರದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಜಮಿಯತ್ ಉಲೇಮಾ ಇಸ್ಲಾಂ-ಫಜಲ್ (JUI-F) ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬರ್ ಸ್ಫೋಟಕ್ಕೆ 40ಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: China Taiwan Issue: ತೈವಾನ್‌ಗೆ ಅಮೆರಿಕದಿಂದ 28 ​​ಸಾವಿರ ಕೋಟಿ ಮಿಲಿಟರಿ ನೆರವು, ಸಿಡಿದೆದ್ದ ಚೀನಾ

ವರದಿಗಳ ಪ್ರಕಾರ, ಪಾಕಿಸ್ತಾನ ಬಾಂಬ್ ಸ್ಫೋಟದಲ್ಲಿ ಸ್ಥಳೀಯ ಜೆಯುಐ-ಎಫ್ ನಾಯಕ ಕೂಡ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಆಂಬ್ಯುಲೆನ್ಸ್‌ಗಳು ಆಗಮಿಸುತ್ತಿರುವುದನ್ನು ದೂರದರ್ಶನದ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಬಾಂಬ್ ಸ್ಫೋಟದ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಶೇರ್ ಆಗುತ್ತಿವೆ. ಸ್ಫೋಟದ ತೀವ್ರತೆಗೆ ಸಾವನ್ನಪ್ಪಿದವರ ತಲೆಬುರುಡೆಗಳು ಮತ್ತು ಚಪ್ಪಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದ ಕಂಡುಬಂದಿದೆ. ಈ ಬಾಂಬ್ ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆ ಅಥವಾ ವ್ಯಕ್ತಿ ಹೊತ್ತುಕೊಂಡಿಲ್ಲ.

ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ಪಟಾಕಿ ಗೋದಾಮು ಸ್ಫೋಟ, 10 ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ

ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪ್ರಾಂತ್ಯದ ಉಸ್ತುವಾರಿ ಮುಖ್ಯಮಂತ್ರಿ ಅಜಮ್ ಖಾನ್ ಅವರಿಗೆ JUI-F ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್ ಒತ್ತಾಯಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿ ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪುವವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News