)
Flood Live reporting : ಕೆಲವೊಮ್ಮೆ ಪತ್ರಕರ್ತರು ಜೀವದ ಹಂಗು ತೊರೆದು ಕೆಲಸ ಮಾಡುತ್ತಾರೆ. ಭಯೋತ್ಪಾದಕ ದಾಳಿ, ಪ್ರವಾಹ, ಭೂಕಂಪ, ಸುನಾಮಿ ಅಥವಾ ಕೊರೊನಾದಂತಹ ಸಾಂಕ್ರಾಮಿಕ ರೋಗದ ಸಂದಂಭದಲ್ಲಿಯೂ ಗಮನಾರ್ಹ ಕೆಲಸ ಮಾಡಿದ್ದಾರೆ.
ಪ್ರಸ್ತುತ ಮಳೆಗಾಲ, ಕೆಲವು ಪ್ರಾಂತ್ಯಗಳಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಈ ಬಗ್ಗೆ ವರದಿ ಮಾಡುವಾಗ ಪತ್ರಕರ್ತರೊಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋದ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದೆ. ಕುತ್ತಿಗೆಯ ಆಳದ ನೀರಿನಲ್ಲಿ ಕೈಯಲ್ಲಿ ಮೈಕ್ ಹಿಡಿದುಕೊಂಡು ನೇರ ಪ್ರಸಾರ ಮಾಡುತ್ತಿದ್ದ ವರದಿಗಾರ ಕೊಚ್ಚಿ ಹೋಗಿದ್ದಾನೆ. ಅಲ್ ಅರೇಬಿಯಾ ಇಂಗ್ಲಿಷ್ ಫೇಸ್ಬುಕ್ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೆಟ್ಟಿಗರು ಅವರ ಧೈರ್ಯವನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇಂತಹ ಅಪಾಯಕಾರಿ ಪರಿಸ್ಥಿತಿಗಳಲ್ಲಿ ವರದಿ ಮಾಡುವ ಅಗತ್ಯವನ್ನು ಪ್ರಶ್ನಿಸಿದ್ದಾರೆ. ಕೆಲವರು ಇದು ಧೈರ್ಯಶಾಲಿ ಪತ್ರಿಕೋದ್ಯಮವೋ ಅಥವಾ ರೇಟಿಂಗ್ಗಳಿಗಾಗಿ ಈ ರೀತಿ ಮಾಡುತ್ತೀರಾ ಅಂತ ಪ್ರಶ್ನೆ ಮಾಡುತ್ತಿದ್ದಾರೆ.
A Pakistani reporter is swept away by strong currents during a live broadcast while covering the floods in neck-deep water.#Pakistan #Floods pic.twitter.com/0raCbYaoer
— Al Arabiya English (@AlArabiya_Eng) July 17, 2025
ಜೂನ್ 26 ರಿಂದ ಪಾಕಿಸ್ತಾನದಲ್ಲಿ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ವರದಿಗಳ ಪ್ರಕಾರ ಸುಮಾರು 116 ಜನರು ಸಾವನ್ನಪ್ಪಿದ್ದಾರೆ. ಪಂಜಾಬ್ ಪ್ರಾಂತ್ಯದಲ್ಲಿ ಅತಿ ಹೆಚ್ಚು 44 ಜನರು ಸಾವನ್ನಪ್ಪಿದ್ದಾರೆ, ಖೈಬರ್ ಪಖ್ತುನ್ಖ್ವಾದಲ್ಲಿ 37, ಸಿಂಧ್ನಲ್ಲಿ 18 ಮತ್ತು ಬಲೂಚಿಸ್ತಾನ್ನಲ್ಲಿ 19 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ..
ಇದಲ್ಲದೆ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಒಬ್ಬರು ಸಾವನ್ನಪ್ಪಿದ್ದು, ಐದು ಜನರು ಗಾಯಗೊಂಡಿದ್ದಾರೆ. ಪ್ರವಾಹವು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ. ನೂರಾರು ಮನೆಗಳು ನಾಶವಾಗಿವೆ. ವಿದ್ಯುತ್ ಮತ್ತು ನೀರಿನಂತಹ ಅಗತ್ಯ ಸೇವೆಗಳನ್ನು ಸ್ಥಗಿತಗೊಳಿಸಿದೆ. ಚಹಾನ್ ಅಣೆಕಟ್ಟು ಕುಸಿತವು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ, ರಾವಲ್ಪಿಂಡಿ ಸೇರಿದಂತೆ ಹಲವಾರು ಪ್ರದೇಶಗಳು ಮುಳುಗಿವೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.