ಕರಾಚಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿ ಪಾಕಿಸ್ತಾನ ಈಗ ಚೀನಾದ ಬೆಂಬಲದೊಂದಿಗೆ ವಿಶ್ವಸಂಸ್ಥೆ ಬಳಿ ಹೋಗುವುದಾಗಿ ಹೇಳಿದೆ.


COMMERCIAL BREAK
SCROLL TO CONTINUE READING

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ' ಈ ವಿಷಯವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ತೆಗೆದುಕೊಂಡು ಹೋಗಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ ಎಂದು ನಾನು ಚೀನಾದೊಂದಿಗೆ ಹಂಚಿಕೊಂಡಿದ್ದೇನೆ. ನಮಗೆ ಅಲ್ಲಿ ಚೀನಾದ ಸಹಾಯ ಬೇಕಾಗುತ್ತದೆ ”ಎಂದು ತಿಳಿಸಿದರು. ಚೀನಾ ಪಾಕಿಸ್ತಾನಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದೆ ಎಂದು ಅವರು ಸ್ಪಷ್ಟಪಡಿಸಿದರು. 


ಇದೇ ವೇಳೆ 15 ಭದ್ರತಾ ಮಂಡಳಿಯ ಖಾಯಂ ಸದಸ್ಯರಲ್ಲದ ಇಂಡೋನೇಷ್ಯಾ ಮತ್ತು ಪೋಲೆಂಡ್ ರಾಷ್ಟ್ರಗಳ ಬೆಂಬಲಕ್ಕಾಗಿ ಅವರನ್ನು ಸಂಪರ್ಕಿಸಲು ಯೋಜಿಸಿದೆ ಎಂದು ಖುರೇಷಿ ಹೇಳಿದರು.