ನವದೆಹಲಿ: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಅಂತರರಾಷ್ಟ್ರೀಯ ಸಂಬಂಧಗಳನ್ನು ಹೇಗೆ ನಡೆಸುವುದು ಎಂದು ತಿಳಿದಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.


COMMERCIAL BREAK
SCROLL TO CONTINUE READING

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಇಮ್ರಾನ್ ಖಾನ್ ಭಾರತದ ವಿರುದ್ಧ ಪ್ರಚೋದನಕಾರಿ ಮತ್ತು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿದರು ಎಂದು ಭಾರತದ ವಿದೇಶಾಂಗ ಇಲಾಖೆ ಆರೋಪಿಸಿದೆ. ಇದೇ ವೇಳೆ ಕಾಶ್ಮೀರ ವಿಚಾರದಲ್ಲಿ ಹಸ್ತಕ್ಷೇಪ ವಹಿಸಿದ ಮಲೇಷ್ಯಾ ದೇಶಕ್ಕೂ ಭಾರತ ತಕ್ಕ ಪ್ರತಿಕ್ರಿಯೆ ನೀಡಿದೆ.


ಇಮ್ರಾನ್ ಖಾನ್ ಅವರು ಯುಎನ್‌ಜಿಎದಲ್ಲಿ ಪ್ರಚೋದನಕಾರಿ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ಬಳಸಿದ್ದಾರೆ. ಅಂತರರಾಷ್ಟ್ರೀಯ ಸಂಬಂಧಗಳನ್ನು ಹೇಗೆ ನಡೆಸುವುದು ಎಂದು ಅವರಿಗೆ ತಿಳಿದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. 'ಅತ್ಯಂತ ಗಂಭೀರವಾದ ವಿಷಯವೆಂದರೆ ಅವರು ಭಾರತದ ವಿರುದ್ಧ ಜಿಹಾದ್‌ಗೆ ಬಹಿರಂಗ ಕರೆ ನೀಡಿದರು, ಇದು ಸಾಮಾನ್ಯ ವಿಷಯವಲ್ಲ' ಎಂದು ಅವರು ಹೇಳಿದರು.


ಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಲೇಷ್ಯಾ ಮತ್ತು ಟರ್ಕಿ ದೇಶಕ್ಕೆ ಬಲವಾದ ಸಂದೇಶ ರವಾನಿಸಿರುವ ಭಾರತ ಯಾವುದೇ ರೀತಿಯ ಹೇಳಿಕೆಯನ್ನು ಬಹಿರಂಗವಾಗಿ ನೀಡುವ ಮೊದಲು ದೇಶದ ಆಂತರಿಕ ಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.