ನವದೆಹಲಿ: ಭಾರತ ಮತ್ತು ಪಾಕ್ ನಡುವೆ ದ್ವಿಪಕ್ಷೀಯ ಮಾತುಕತೆ ವಿಚಾರವಾಗಿ ಸಕಾರಾತ್ಮಕ ಮಾತುಕತೆ ಕೇಳಿಬರುತ್ತಿರುವ ಬೆನ್ನಲ್ಲೇ ಈಗ ಪಾಕ್ ಮತ್ತೆ ಯೂಟರ್ನ್ ಹೊಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ - ಇಮ್ರಾನ್ ಖಾನ್‌ಗೆ ಪತ್ರ ಬರೆದ ಪ್ರಧಾನಿ ಮೋದಿ ನೀಡಿದ ಸಲಹೆ ಇದು


ಭಾರತದಿಂದ ಸೀಮಿತ ಸಕ್ಕರೆ, ಹತ್ತಿ ಮತ್ತು ಗೋಧಿಯನ್ನು ಆಮದು ಮಾಡಿಕೊಳ್ಳಲು ಅವಕಾಶ ನೀಡುವ ಯೋಜನೆ ಕುರಿತಾಗಿ ಚರ್ಚೆ ನಡೆದಿದೆ. ಇತ್ತೀಚಿಗಷ್ಟೇ ಅತಿರೇಕದ ಹಣದುಬ್ಬರವನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಆಮದು ಪರವಾನಗಿಗಳನ್ನು ಅಂಗೀಕರಿಸಲಾಗುವುದು ಎಂದು ಪಾಕಿಸ್ತಾನ ಸರ್ಕಾರದ ಆರ್ಥಿಕ ಸಮನ್ವಯ ಸಮಿತಿ ಬುಧವಾರ ಹೇಳಿದೆ.ಕಾಶ್ಮೀರ ಉದ್ವಿಗ್ನತೆಯ ಹೊರತಾಗಿಯೂ ವ್ಯಾಪಾರ ಏಕೆ ಪುನರಾರಂಭಗೊಳ್ಳುತ್ತಿದೆ ಎಂದು ಕೇಳಿದಾಗ ಪಾಕಿಸ್ತಾನ ಹಣಕಾಸು ಸಚಿವ ಹಮ್ಮದ್ ಅಜರ್ ಅವರು ಜನರ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದರು.


ಇದನ್ನೂ ಓದಿ - China ವ್ಯಾಕ್ಸಿನ್ ಹಾಕಿಸಿಕೊಂಡ ಪಾಕ್ ಪ್ರಧಾನಿ Imran Khan ವರದಿ Corona Positive


ಆದರೆ ಗುರುವಾರ ಆಂತರಿಕ ಸಚಿವ ಶೇಖ್ ರಶೀದ್ ಅಹ್ಮದ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭಾರತವು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸುವವರೆಗೆ ಈ ನಿರ್ಧಾರವನ್ನು ಮುಂದೂಡಲಾಗಿದೆ. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಸಂದರ್ಭದಲಿ ಪಾಕಿಸ್ತಾನವು ಭಾರತದೊಂದಿಗೆ ವ್ಯಾಪಾರ ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಸ್ಥಗಿತಗೊಳಿಸಿತು.ಎರಡೂ ದೇಶಗಳು ತಮ್ಮ ಉನ್ನತ ರಾಜತಾಂತ್ರಿಕರನ್ನು ಹಿಂತೆಗೆದುಕೊಂಡವು, ಮತ್ತು ದೂತಾವಾಸದ ಸಿಬ್ಬಂದಿಯನ್ನು ತಮ್ಮ ದೇಶಕ್ಕೆ ವಾಪಸ್ ಕರೆಸಿಕೊಳ್ಳಲಾಯಿತು.


ಇದನ್ನೂ ಓದಿ -Pakistan National Day: ಇಮ್ರಾನ್ ಖಾನ್‌ಗೆ ಪತ್ರ ಬರೆದ ಪ್ರಧಾನಿ ಮೋದಿ ನೀಡಿದ ಸಲಹೆ ಇದು


ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರು ಪರಸ್ಪರ ಪತ್ರಗಳನ್ನು ವಿನಿಮಯ ಮಾಡಿಕೊಂಡಿದ್ದರು, ಜೊತೆಗೆ ಕಳೆದ ವಾರ ತಮ್ಮ ಹಂಚಿದ ಸಿಂಧೂ ನದಿಯಿಂದ ಸಂಪನ್ಮೂಲಗಳ ಬಳಕೆಯ ಕುರಿತು ಮಾತುಕತೆಗಳನ್ನು ಪುನರಾರಂಭಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.