Pakistan Blast: ಪೇಷಾವರ್ ಮಸೀದಿಯಲ್ಲಿ ಭಾರಿ ಬಾಂಬ್ ವಿಸ್ಫೋಟ, 30 ಜನರ ಸಾವು, 50 ಮಂದಿಗೆ ಗಾಯ
Pshawar Mosque Blast: ಪಾಕಿಸ್ತಾನದ (Pakistan) ಪೇಶಾವರದ ಮಸೀದಿಯಲ್ಲಿ (Peshawar Blast 2022) ಶುಕ್ರವಾರದ ಪ್ರಾರ್ಥನೆಯ ವೇಳೆ ವ್ಯಕ್ತಿಯೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Pshawar Mosque Blast: ಪಾಕಿಸ್ತಾನದ (Pakistan) ಪೇಶಾವರದ ಮಸೀದಿಯಲ್ಲಿ (Peshawar Blast 2022) ಶುಕ್ರವಾರದ ಪ್ರಾರ್ಥನೆಯ ವೇಳೆ ವ್ಯಕ್ತಿಯೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಲೇಡಿ ರೀಡಿಂಗ್ ಆಸ್ಪತ್ರೆಗೆ (Lady Reading Hospital) ಕರೆದೊಯ್ಯಲಾಗಿದೆ. ರಕ್ಷಣಾ ತಂಡದ ಅಧಿಕಾರಿಗಳ ಪ್ರಕಾರ, ಕನಿಷ್ಠ 15 ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿವೆ.
ಶುಕ್ರವಾರದ ಪ್ರಾರ್ಥನೆಯ (Blast During Namaz) ವೇಳೆ ಮಸೀದಿಯಲ್ಲಿ ಬಾಂಬ್ ಸ್ಫೋಟದ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಆ ಸಮಯದಲ್ಲಿ ಪೇಶಾವರದ ಮಸೀದಿಯಲ್ಲಿ ಜನಸಂದಣಿ ಇತ್ತು, ಇದ್ದಕ್ಕಿದ್ದಂತೆ ಗುಂಪಿನಿಂದ ಹೊರ ಬಂದ ಒಬ್ಬ ವ್ಯಕ್ತಿಯು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಸ್ಫೋಟಕ್ಕೂ ಮುನ್ನ ಗುಂಡಿನ ಸದ್ದು ಕೂಡ ಕೇಳಿಬಂದಿದೆ ಎನ್ನಲಾಗಿದೆ.
ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ತಗುಲಿದ ಗುಂಡು , ಕೈವ್‌ನ ಆಸ್ಪತ್ರೆಗೆ ದಾಖಲು
ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ಪ್ರಸ್ತುತ ಸ್ಫೋಟಗೊಂಡ ಸ್ಥಳಕ್ಕೆ ಪೊಲೀಸ್ ತಂಡ ತಲುಪಿದೆ. ಈ ಪ್ರದೇಶದಲ್ಲಿ ಅನೇಕ ಮಾರುಕಟ್ಟೆಗಳಿದ್ದು, ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಸಾಮಾನ್ಯವಾಗಿ ಮಾರುಕಟ್ಟೆಗಳು ತುಂಬಿರುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ.
ಇದನ್ನೂ ಓದಿ-ರಷ್ಯಾ ದಾಳಿಯಿಂದ ಯುಕ್ರೇನ್ ನ್ಯೂಕ್ಲಿಯರ್ ಪವರ್ ಪ್ಲಾಂಟ್ ನಲ್ಲಿ ಕಾಣಿಸಿಕೊಂಡ ಬೆಂಕಿ : ಇಲ್ಲಿದೆ ವಿಡಿಯೋ
ಪೇಶಾವರ್ ಸಿಸಿಪಿಒ ಪ್ರಕಾರ, ಕೊಚಾ ರಿಸಲ್ದಾರ್‌ನಲ್ಲಿರುವ ಇಮಾಂಬಾಡ್ ನಲ್ಲಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ದಾಳಿಕೋರರು ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಹೊಡೆದುರುಳಿಸಿದ್ದಾರೆ ಮತ್ತು ಶೀಘ್ರದಲ್ಲೇ ಸ್ಫೋಟಕಗಳೊಂದಿಗೆ ಆವರಣವನ್ನು ಪ್ರವೇಶಿಸಿದ್ದಾರೆ ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ ಎಂದು ಅವರು ಹೇಳಿದ್ದಾರೆ. ಇದೊಂದು ಆತ್ಮಾಹುತಿ ದಾಳಿಯಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ-ಉಕ್ರೇನ್-ರಷ್ಯಾ ಬಿಕ್ಕಟ್ಟು: ಬೆಲಾರಸ್‌ನಲ್ಲಿ ಎರಡನೇ ಸುತ್ತಿನ ಮಾತುಕತೆ ಪ್ರಾರಂಭ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.