ಮತ್ತೊಂದು ರಣಭೀಕರ ವಿಮಾನ ದುರಂತ... 179 ಮಂದಿ ಪ್ರಯಾಣಿಕರ ದಾರುಣ ಸಾವು! ಆಘಾತಕಾರಿ ಲೈವ್ ವಿಡಿಯೋ ಇಲ್ಲಿದೆ
Plane crash at South Korea: ಜೆಜು ಏರ್ ಫ್ಲೈಟ್ 7 ಸಿ 2216 ಬ್ಯಾಂಕಾಕ್‌ನಿಂದ 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಗಳೊಂದಿಗೆ ಮುವಾನ್ ಕೌಂಟಿಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಈ ಅಪಘಾತ ಸಂಭವಿಸಿದೆ. ಲ್ಯಾಂಡಿಂಗ್ ಗೇರ್ ಅಸಮರ್ಪಕ ಕಾರ್ಯದಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಮಾನ ಅಪಘಾತದ ಲೈವ್ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಆಘಾತವಾಗುತ್ತಿದೆ.
Plane crash at South Korea: ಕಝಾಕಿಸ್ತಾನ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತ ಮಾಸುವ ಮುನ್ನ, ದಕ್ಷಿಣ ಕೊರಿಯಾದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. 181 ಜನರಿದ್ದ ವಿಮಾನವು ಭಾನುವಾರ ಬೆಳಗ್ಗೆ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್‌ವೇ ದಾಟುತ್ತಿದ್ದ ವಿಮಾನ ನೇರವಾಗಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ 179 ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಲಾಗಿದೆ ಎಂದು ಸ್ಥಳೀಯ ಅಗ್ನಿಶಾಮಕ ಇಲಾಖೆ ಬಹಿರಂಗಪಡಿಸಿದೆ.
ಇದನ್ನೂ ಓದಿ: ವರ್ಷಾಂತ್ಯಕ್ಕೆ ಚಿನ್ನ-ಬೆಳ್ಳಿ ಬೆಲೆಯಲ್ಲಿ ಮಹತ್ತರ ಬದಲಾವಣೆ! ಆಭರಣ ಖರೀದಿಗೆ ಇದೇ ಬೆಸ್ಟ್ ಟೈಮ್...
ಜೆಜು ಏರ್ ಫ್ಲೈಟ್ 7 ಸಿ 2216 ಬ್ಯಾಂಕಾಕ್‌ನಿಂದ 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಗಳೊಂದಿಗೆ ಮುವಾನ್ ಕೌಂಟಿಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಈ ಅಪಘಾತ ಸಂಭವಿಸಿದೆ. ಲ್ಯಾಂಡಿಂಗ್ ಗೇರ್ ಅಸಮರ್ಪಕ ಕಾರ್ಯದಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಮಾನ ಅಪಘಾತದ ಲೈವ್ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಆಘಾತವಾಗುತ್ತಿದೆ.
ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ವಿಮಾನದ ಕೆಲವು ಭಾಗಗಳು ರನ್‌ವೇ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಘಟನೆಯ ಕುರಿತು ದಕ್ಷಿಣ ಕೊರಿಯಾದ ಹಂಗಾಮಿ ಅಧ್ಯಕ್ಷ ಚೋಯ್ ಸಾಂಗ್-ಮೋಕ್ ಪ್ರತಿಕ್ರಿಯಿಸಿದ್ದಾರೆ. ಆಂತರಿಕ ಮತ್ತು ಭದ್ರತಾ ಸಚಿವಾಲಯಕ್ಕೆ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಲಭ್ಯವಿರುವ ಎಲ್ಲ ಉಪಕರಣಗಳು ಮತ್ತು ಸಿಬ್ಬಂದಿಯನ್ನು ಸಜ್ಜುಗೊಳಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ವಿಮಾನದಲ್ಲಿದ್ದ ಹೆಚ್ಚಿನ ಪ್ರಯಾಣಿಕರು ಕೊರಿಯನ್ನರು ಮತ್ತು ಇಬ್ಬರು ಥಾಯ್ ಪ್ರಜೆಗಳು ಇದ್ದರು ಎಂದು ಮಾಹಿತಿ ನೀಡಿದ್ದಾರೆ. ಪರಿಹಾರ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.
ಇದನ್ನೂ ಓದಿ: Income Tax Exemption: 2025 ರಲ್ಲಿ 15 ಲಕ್ಷದವರೆಗಿನ ಆದಾಯದ ಮೇಲೆ ಸಿಗಲಿದೆಯಾ ತೆರಿಗೆ ವಿನಾಯಿತಿ
ಅಪಘಾತದ ಸ್ಥಳದಿಂದ ಒಬ್ಬ ಪ್ರಯಾಣಿಕ ಮತ್ತು ಒಬ್ಬ ಸಿಬ್ಬಂದಿಯನ್ನು ತುರ್ತು ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಕಿಯನ್ನು ನಿಯಂತ್ರಿಸಲು ಅಧಿಕಾರಿಗಳು 32 ಅಗ್ನಿಶಾಮಕ ವಾಹನಗಳು ಮತ್ತು ಹಲವಾರು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.