ಸೌಹಾರ್ಧಯುತ ಸಂಬಂಧಕ್ಕೆ ಮುಂದಾದ ಭಾರತ-ಪಾಕ್

ಭಾರತವು ಪಾಕಿಸ್ತಾನದೊಂದಿಗಿನ ಸೌಹಾರ್ದಯುತ ಸಂಬಂಧವನ್ನು ಬಯಸುತ್ತದೆ ಆದರೆ ಭಯೋತ್ಪಾದನೆ ಮತ್ತು ಹಗೆತನವಿಲ್ಲದ ವಿಶ್ವಾಸದ ವಾತಾವರಣವು ಕಡ್ಡಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಮ್ರಾನ್ ಖಾನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Last Updated : Mar 27, 2021, 12:57 PM IST
  • ಭಾರತವು ಪಾಕಿಸ್ತಾನದೊಂದಿಗಿನ ಸೌಹಾರ್ದಯುತ ಸಂಬಂಧವನ್ನು ಬಯಸುತ್ತದೆ ಆದರೆ ಭಯೋತ್ಪಾದನೆ ಮತ್ತು ಹಗೆತನವಿಲ್ಲದ ವಿಶ್ವಾಸದ ವಾತಾವರಣವು ಕಡ್ಡಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಾಕಿಸ್ತಾನದ ಸಹವರ್ತಿ ಇಮ್ರಾನ್ ಖಾನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಸೌಹಾರ್ಧಯುತ ಸಂಬಂಧಕ್ಕೆ ಮುಂದಾದ ಭಾರತ-ಪಾಕ್  title=
file photo

ನವದೆಹಲಿ: ಭಾರತವು ಪಾಕಿಸ್ತಾನದೊಂದಿಗಿನ ಸೌಹಾರ್ದಯುತ ಸಂಬಂಧವನ್ನು ಬಯಸುತ್ತದೆ ಆದರೆ ಭಯೋತ್ಪಾದನೆ ಮತ್ತು ಹಗೆತನವಿಲ್ಲದ ವಿಶ್ವಾಸದ ವಾತಾವರಣವು ಕಡ್ಡಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಮ್ರಾನ್ ಖಾನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನ (Pakistan) ದಿನಾಚರಣೆಯಂದು ಆ ದೇಶದ ಜನರಿಗೆ ಶುಭಾಶಯ ಕೋರಲು ಪ್ರಧಾನಿ ಮೋದಿ ಶ್ರೀ ಖಾನ್ ಅವರಿಗೆ ಪತ್ರ ಬರೆದಿದ್ದಾರೆ."ನೆರೆಯ ರಾಷ್ಟ್ರವಾಗಿ, ಭಾರತವು ಪಾಕಿಸ್ತಾನದ ಜನರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಬಯಸುತ್ತದೆ. ಇದಕ್ಕಾಗಿ, ಭಯೋತ್ಪಾದನೆ ಮತ್ತು ಹಗೆತನವಿಲ್ಲದ ನಂಬಿಕೆಯ ವಾತಾವರಣವು ಕಡ್ಡಾಯವಾಗಿದೆ" ಎಂದು ಅವರು ಹೇಳಿದರು.

ಇದನ್ನೂ ಓದಿ: Corona Vaccine: ಸಂಕಷ್ಟದಲ್ಲಿದ್ದ ಪಾಕಿಸ್ತಾನಕ್ಕೆ ಮತ್ತೆ ಸಹಾಯ ಹಸ್ತ ಚಾಚಿದ ಭಾರತ

ಇದು ಪ್ರತಿವರ್ಷ ಕಳುಹಿಸುವ ವಾಡಿಕೆಯ ಪತ್ರವಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.ಕರೋನವೈರಸ್ ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವಲ್ಲಿ ಪ್ರಧಾನಿ ಮೋದಿ ಅವರು ಇಮ್ರಾನ್ಖಾನ್ ಮತ್ತು ಪಾಕಿಸ್ತಾನದ ಜನರಿಗೆ ಶುಭಾಶಯಗಳನ್ನು ತಿಳಿಸಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳಲ್ಲಿ ಇತ್ತೀಚಿಗೆ ಸಕಾರಾತ್ಮಕ ಚಲನೆಯ ಸೂಚನೆಗಳು ಕಂಡುಬಂದಿವೆ.ಸೋಮವಾರ, ಪಾಕಿಸ್ತಾನದ ಅಧಿಕಾರಿಗಳ ನಿಯೋಗ ಶಾಶ್ವತ ಸಿಂಧೂ ಆಯೋಗದ ಸಭೆಗಾಗಿ ಭಾರತಕ್ಕೆ ಆಗಮಿಸಿತು. ಎರಡೂವರೆ ವರ್ಷಗಳಲ್ಲಿ ಇಂತಹ ಮೊದಲ ಸಂವಾದ ಇದಾಗಿದೆ.

ಇದನ್ನೂ ಓದಿ: China ವ್ಯಾಕ್ಸಿನ್ ಹಾಕಿಸಿಕೊಂಡ ಪಾಕ್ ಪ್ರಧಾನಿ Imran Khan ವರದಿ Corona Positive

ಕಳೆದ ವಾರ, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು ಪಾಕಿಸ್ತಾನದೊಂದಿಗೆ ಉತ್ತಮ ನೆರೆಹೊರೆಯ ಸಂಬಂಧವನ್ನು ಬಯಸುತ್ತಾರೆ ಮತ್ತು ಸಮಸ್ಯೆಗಳನ್ನು ಬಗೆಹರಿಸಲು ಬದ್ಧರಾಗುರುವುದಾಗಿ ಹೇಳಿದ್ದಾರೆ.ದ್ವಿಪಕ್ಷೀಯ ಕುರಿತಾದ ಅರ್ಥಪೂರ್ಣ ಸಂವಾದವನ್ನು ಅನುಕೂಲಕರ ವಾತಾವರಣದಲ್ಲಿ ಮಾತ್ರ ನಡೆಸಬಹುದು ಎಂದು ಹೇಳಿದರು.ಅಂತಹ ವಾತಾವರಣವನ್ನು ಸೃಷ್ಟಿಸುವ ಜವಾಬ್ದಾರಿ ಇಸ್ಲಾಮಾಬಾದ್‌ನಲ್ಲಿದೆ ಎಂದು ಅವರು ಹೇಳಿದರು.

ಭಾರತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ನಂತರ ಮತ್ತು 2019 ರಲ್ಲಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಉಭಯ ದೇಶಗಳ ನಡುವಿನ ಸಂಬಂಧವು ಹದಗೆಟ್ಟಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News