ನ್ಯೂಯಾರ್ಕ್‌ಗೆ ಬಂದಿಳಿದ ಪ್ರಧಾನಿ ಮೋದಿ: ಇಂದು ಸಂಜೆ ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಭೇಟಿ ಮಾಡಿ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ವಾಷಿಂಗ್ಟನ್‌ನಿಂದ ನ್ಯೂಯಾರ್ಕ್‌ಗೆ ಹೊರಟರು.

Written by - ZH Kannada Desk | Last Updated : Sep 25, 2021, 08:17 AM IST
  • ಜೋ ಬಿಡೆನ್ ಭೇಟಿ, ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ನ್ಯೂಯಾರ್ಕ್‌ಗೆ ಬಂದಿಳಿದರು
  • ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಭಾಷಣದೊಂದಿಗೆ ಪ್ರಧಾನಿ ಮೋದಿಯವರ ಅಮೆರಿಕ ಪ್ರವಾಸ ಮುಕ್ತಾಯಗೊಳ್ಳಲಿದೆ
  • UNGA ಅಧಿವೇಶನದಲ್ಲಿ ಕೋವಿಡ್-19, ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಬಗ್ಗೆ ಚರ್ಚೆ ನಡೆಯಲಿದೆ
ನ್ಯೂಯಾರ್ಕ್‌ಗೆ ಬಂದಿಳಿದ ಪ್ರಧಾನಿ ಮೋದಿ: ಇಂದು ಸಂಜೆ ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ನ್ಯೂಯಾರ್ಕ್‌ಗೆ ಆಗಮಿಸಿದ್ದು, ಇಂದು ಸಂಜೆ 6.30ಕ್ಕೆ ನಡೆಯಲಿರುವ 76 ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬಿಡೆನ್(Joe Biden) ಅವರನ್ನು ಭೇಟಿ ಮಾಡಿ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ವಾಷಿಂಗ್ಟನ್‌ನಿಂದ ನ್ಯೂಯಾರ್ಕ್‌ಗೆ ಹೊರಟರು.

‘ವಾಷಿಂಗ್ಟನ್‌ಗೆ ಧನ್ಯವಾದಗಳು. ಮುಂದಿನ ಪಯಣ ನ್ಯೂಯಾರ್ಕ್‌ಗೆ. ಐತಿಹಾಸಿಕ ಕ್ವಾಡ್ ನಾಯಕರ ಶೃಂಗಸಭೆ ಮತ್ತು ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ಜೊತೆಗಿನ ದ್ವಿಪಕ್ಷೀಯ ಮಾತುಕತೆಯ ನಂತರ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರು ನ್ಯೂಯಾರ್ಕ್ ಭೇಟಿಗೆ ಹೊರಡುತ್ತಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಟ್ವೀಟ್ ಮಾಡಿದ್ದಾರೆ. ‘ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಸದಸ್ಯತ್ವ ಹೆಚ್ಚಿನ ಮಹತ್ವ ಪಡೆದಿದೆ’ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಟೋಬರ್ 7 ರಿಂದ ಎಲ್ಲ ಧಾರ್ಮಿಕ ಸ್ಥಳಗಳನ್ನು ತೆರೆಯಲು ಮುಂದಾದ ಈ ರಾಜ್ಯ

ಕೋವಿಡ್ -19 ಸಾಂಕ್ರಾಮಿಕದ ಬಳಿಕ ಪ್ರಧಾನಿ ಮೋದಿ 3 ದಿನಗಳ ಅಮೆರಿಕ ಭೇಟಿಗಾಗಿ ಪ್ರಧಾನಿ ಮೋದಿ ಬುಧವಾರ ವಾಷಿಂಗ್ಟನ್‌ಗೆ ಆಗಮಿಸಿದ್ದರು. ಕಳೆದ 2 ದಿನಗಳ ಕಾಲ ಸಾಲು ಸಾಲು ಸಭೆಗಳಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ(Narendra Modi) ಹಲವು ಮಹತ್ವದ ಚರ್ಚೆಗಳನ್ನು ನಡೆಸಿದ್ದಾರೆ. ಈಗಾಗಲೇ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದಲ್ಲದೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೊಶಿಹಿಡೆ ಸುಗ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಕೋವಿಡ್ -19ರ ನಂತರದ ಮೊದಲ ಕ್ವಾಡ್ ಮೀಟಿಂಗ್‌ನಲ್ಲಿ ಕೂಡ ಭಾಗವಹಿಸಿದ್ದರು.

ಭಾರತದಲ್ಲಿ ಹೂಡಿಕೆಯನ್ನು ಆಕರ್ಷಿಸಲು 5 ಜಾಗತಿಕ ಸಿಇಒ(CEO)ಗಳ ಜೊತೆ ಕೂಡ ಗುರುವಾರ ಮಾತುಕತೆ ನಡೆಸಿದ್ದಾರೆ. ಇಂದು(ಸೆ.25) ನಡೆಯಲಿರುವ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಭಾಷಣದೊಂದಿಗೆ ಪ್ರಧಾನಿ ಮೋದಿಯವರ ಅಮೆರಿಕ ಪ್ರವಾಸ ಮುಕ್ತಾಯಗೊಳ್ಳಲಿದೆ. UNGA ಅಧಿವೇಶನದಲ್ಲಿ ಮುಖ್ಯವಾಗಿ ಕೋವಿಡ್-19 ಜಾಗತಿಕ ಸಮಸ್ಯೆ, ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮತ್ತು ಇತರ ಮುಖ್ಯವಾದ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ಮನೆಯೇ ಆಗಲಿದೆ ಥಿಯೇಟರ್..! ಸೋನಿ ಬಿಡುಗಡೆ ಮಾಡಿದೆ 85 ಇಂಚಿನ ಸ್ಮಾರ್ಟ್ ಟಿವಿ

ಈ ವರ್ಷದ ಸಾಮಾನ್ಯ(United Nations General Assembly) ಚರ್ಚೆಯ ವಿಷಯವೆಂದರೆ ‘ಕೋವಿಡ್ -19ರಿಂದ ಚೇತರಿಸಿಕೊಳ್ಳುವ ಭರವಸೆಯ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು, ಸಮರ್ಥವಾಗಿ ಪುನರ್ನಿರ್ಮಾಣ ಮಾಡುವುದು, ಭೂಮಿಯ ಅಗತ್ಯಗಳಿಗೆ ಸ್ಪಂದಿಸುವುದು, ಜನರ ಹಕ್ಕುಗಳನ್ನು ಗೌರವಿಸುವುದು ಮತ್ತು ವಿಶ್ವಸಂಸ್ಥೆಯನ್ನು ಪುನರುಜ್ಜೀವನಗೊಳಿಸುವುದು’ ಎಂಬುದಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

More Stories

Trending News