PM Modi In America: ಅಮೆರಿಕ ತಲುಪಿದ ಪ್ರಧಾನಿ ಮೋದಿ, ಟ್ವೀಟ್ ಮೂಲಕ ಹೇಳಿದ್ದೇನು?
PM Modi In America: ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಮುಖ್ಯವಾದ ಪ್ರವಾಸದಲ್ಲಿ ಅಮೆರಿಕವನ್ನು ತಲುಪಿದ್ದಾರೆ. ವಾಷಿಂಗ್ಟನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ನೀಡಲಾಯಿತು. ಪ್ರಧಾನಮಂತ್ರಿಯವರ ಈ ಭೇಟಿಯಿಂದ ಅಮೆರಿಕದಲ್ಲಿ ವಾಸಿಸುತ್ತಿರುವ ಭಾರತೀಯರು ತುಂಬಾ ಉತ್ಸುಕರಾಗಿದ್ದಾರೆ. ತಮ್ಮ ಮೂರು ದಿನಗಳ ಭೇಟಿಯಲ್ಲಿ ಪ್ರಧಾನಿ ಮೋದಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ.
ವಾಷಿಂಗ್ಟನ್: PM Modi In America- ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ದಿನಗಳ ಭೇಟಿಗಾಗಿ ಅಮೆರಿಕ (PM Narendra Modi US Visit) ತಲುಪಿದ್ದಾರೆ. ಗುರುವಾರ ಮುಂಜಾನೆ ವಾಷಿಂಗ್ಟನ್ ವಿಮಾನ ನಿಲ್ದಾಣವನ್ನು ತಲುಪಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಅಮೆರಿಕದ ವಿದೇಶಾಂಗ ಸಚಿವಾಲಯದ ಅನೇಕ ಅಧಿಕಾರಿಗಳು ಆಗಮಿಸಿದ್ದರು. ಇದಲ್ಲದೇ, ಅಮೆರಿಕದಲ್ಲಿ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಕೂಡ ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು.
ತಮ್ಮ ಮೂರು ದಿನಗಳ ಅಮೆರಿಕ ಭೇಟಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ ಮತ್ತು ಕ್ವಾಡ್ ದೇಶಗಳ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ (Joe Biden) ಜೊತೆ ದ್ವಿಪಕ್ಷೀಯ ಮಾತುಕತೆ ಕೂಡ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿಯವರ ಈ ಅಮೆರಿಕ ಭೇಟಿ ಬಹಳ ಮಹತ್ವದ್ದಾಗಿದೆ.
ಇದನ್ನೂ ಓದಿ- ಕುದುರೆಗೆ ನೀರು ಕುಡಿಸುವುದು ಹೇಗೆ?: ಪ್ರಧಾನಿ ಮೋದಿ ಕುಟುಕಿದ ಸ್ವಾಮಿ..!
ಪ್ರಧಾನಿ ಮೋದಿಯವರ ಟ್ವೀಟ್ ವೈರಲ್ :
ಏತನ್ಮಧ್ಯೆ, ಅಮೇರಿಕ ತಲುಪಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi), ಟ್ವೀಟ್ ನಲ್ಲಿ ಫೋಟೋ ಶೇರ್ ಮಾಡುವ ಮೂಲಕ ಅವರು ಈ ಸುದೀರ್ಘ ಪ್ರಯಾಣದಲ್ಲಿ ತಮ್ಮ ಸಮಯವನ್ನು ಯಾವ ರೀತಿ ಕಳೆದರು ಎಂದು ಎರಡು ಸಾಲುಗಳಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಚಿತ್ರದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಕಡತಗಳನ್ನು ಕೈಯಲ್ಲಿ ಹಿಡಿದಿರುವುದು ಕಂಡುಬರುತ್ತದೆ. ಕಡತಗಳ ಜೊತೆಗೆ, ಪಿಎಂ ಅವರ ಕೈಯಲ್ಲಿ ಪೆನ್ ಕೂಡ ಇದೆ. ಪ್ರಧಾನಿಯವರು ಈ ಚಿತ್ರದೊಂದಿಗೆ ಒಂದು ಶೀರ್ಷಿಕೆಯನ್ನೂ ಬರೆದಿದ್ದಾರೆ.
ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ 80 ದೇವಾಲಯ ಕೆಡವಿದ್ದರು: ಕಾಂಗ್ರೆಸ್ ಆರೋಪ
ಪ್ರಧಾನಿ ಮೋದಿಯವರು ತಮ್ಮ ಈ ಟ್ವೀಟ್ ನಲ್ಲಿ ಸುದೀರ್ಘ ಹಾರಾಟ (ವಿಮಾನ ಪ್ರಯಾಣ) ಎಂದರೆ ಪೇಪರ್‌ಗಳು ಮತ್ತು ಕೆಲವು ಫೈಲ್ ಕೆಲಸಗಳ ಮೂಲಕ ಹೋಗುವ ಅವಕಾಶಗಳು ಎಂದು ಬರೆದಿದ್ದಾರೆ. ಅಂದರೆ ನೀವು ಬಹಳ ದೂರ ಪ್ರಯಾಣಿಸಬೇಕಿದ್ದರೆ ನಿಮ್ಮ ಕಾಗದಪತ್ರಗಳನ್ನು ಪೂರ್ಣಗೊಳಿಸಲು ನೀವು ಆ ಸಮಯವನ್ನು ಬಳಸಬಹುದು ಎಂದು ಪ್ರಧಾನಿ ಮೋದಿ ಬರೆದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ (Socila Media) ಪಿಎಂ ಅವರ ಈ ಫೋಟೋ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿಯವರ ಈ ಟ್ವೀಟ್‌ಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಹೆಚ್ಚಿನ ಜನರು ಈ ಸಲಹೆಯನ್ನು ತಮ್ಮ ಜೀವನದಲ್ಲಿ ಅನುಷ್ಠಾನಗೊಳಿಸುವ ಬಗ್ಗೆಯೂ ಮಾತನಾಡುತ್ತಿದ್ದಾರೆ.
ಗಮನಾರ್ಹವಾಗಿ, ಪ್ರಧಾನಿ ಮೋದಿಯವರ (PM Modi America Visit) ಈ ಭೇಟಿ ಬಹಳ ಮಹತ್ವದ್ದಾಗಿದೆ. ಅಮೆರಿಕದ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿದ ನಂತರ ಪ್ರಧಾನಿ ಮೋದಿ ಅವರು ಬಿಡೆನ್ ಅವರನ್ನು ಭೇಟಿ ಮಾಡುವುದು ಇದೇ ಮೊದಲು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ