ಪರ್ರಮಟ್ಟ: ಆಸ್ಟ್ರೇಲಿಯಾದ ಪರ್ರಮಟ್ಟದಲ್ಲಿ ನಿರ್ಮಿಸಲಾಗಿರುವ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅನಾವರಣಗೊಳಿಸಿದರು.


COMMERCIAL BREAK
SCROLL TO CONTINUE READING

ಮೂರೂ ದಿನಗಳ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರು ಎರಡನೇ ದಿನವಾದ ಗುರುವಾರ ಆಸ್ಟ್ರೇಲಿಯಾದ ಪರ್ರಮಟ್ಟ ನಗರದ ಜ್ಯುಬಿಲಿ ಪಾರ್ಕ್​ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕೋಟ್​ ಮೋರ್ರಿಸೋನ್​ ಮತ್ತು ಪರ್ರಮಟ್ಟ ನಗರದ ಮೇಯರ್​ ಆ್ಯಂಡ್ರ್ಯೂ ವಿಲ್ಸನ್​ ಮತ್ತು ರಾಷ್ಟ್ರಪತಿಯವರ ಪತ್ನಿ ಹಾಜರಿದ್ದರು.



ಆಸ್ಟ್ರೇಲಿಯಾದ ಪರ್ರಮಟ್ಟ ನಗರದ ಜ್ಯುಬಿಲಿ ಪಾರ್ಕ್​ನಲ್ಲಿ ಗಾಂಧೀಜಿ ಅವರ ಪ್ರತಿಮೆ ಇರಿಸಲಾಗಿದ್ದು, ಶಿಲ್ಪಿಗಳಾದ ರಾಮ್​ ಮತ್ತು ಅನಿಲ್​ ಸುತಾರ್​ ಅವರು ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಭಾರತ ಸರ್ಕಾರ ಈ ಪ್ರತಿಮೆಯನ್ನು ಆಸ್ಟ್ರೇಲಿಯಾಕ್ಕೆ ಉಡುಗೊರೆಯಾಗಿ ನೀಡಿದೆ.