ಇನ್ನೂ ಮೂರೇ ವರ್ಷ ಬದುಕುತ್ತಾರಾ ರಷ್ಯಾ ಅಧ್ಯಕ್ಷ ಪುಟೀನ್? ಶಾಕಿಂಗ್ ವಿವರ ನೀಡಿದ ಗುಪ್ತಚರ ಅಧಿಕಾರಿ..!
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕ್ಯಾನ್ಸರ್ ಇರುವುದರಿಂದ ಇನ್ನೂ ಮೂರು ವರ್ಷಗಳು ಕಾಲ ಬದುಕಲಿದ್ದಾರೆ ಎನ್ನುವ ಆಘಾತಕಾರಿ ಸುದ್ದಿಯನ್ನು ರಷ್ಯಾದ ಗುಪ್ತಚರ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ ಎಂದು ಇಂಡಿಪೆಂಡೆಂಟ್ ವರದಿ ತಿಳಿಸಿದೆ.
ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕ್ಯಾನ್ಸರ್ ಇರುವುದರಿಂದ ಇನ್ನೂ ಮೂರು ವರ್ಷಗಳು ಕಾಲ ಬದುಕಲಿದ್ದಾರೆ ಎನ್ನುವ ಆಘಾತಕಾರಿ ಸುದ್ದಿಯನ್ನು ರಷ್ಯಾದ ಗುಪ್ತಚರ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ ಎಂದು ಇಂಡಿಪೆಂಡೆಂಟ್ ವರದಿ ತಿಳಿಸಿದೆ.
ರಷ್ಯನ್ ಫೆಡರಲ್ ಸೆಕ್ಯುರಿಟಿ ಸರ್ವಿಸ್ ಅಧಿಕಾರಿ 69 ವರ್ಷದ ಪುಟಿನ್ ದೃಷ್ಟಿಯನ್ನು ಸಹ ಕಳೆದುಕೊಳ್ಳಲಿದ್ದಾರೆ ಎನ್ನುವ ಶಾಕಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.ಪುಟಿನ್ ಅವರ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ ಎಂಬ ಊಹಾಪೋಹಗಳ ನಡುವೆ ಈ ಮಾಹಿತಿ ಬಂದಿದೆ. ಆದಾಗ್ಯೂ, ಅಧ್ಯಕ್ಷ ಪುಟಿನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಊಹಾಪೋಹವನ್ನು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಭಾನುವಾರದಂದು ನಿರಾಕರಿಸಿದ್ದಾರೆ.
ಇದನ್ನೂ ಓದಿ: ಅಯೋಧ್ಯೆ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಬೊಮ್ಮಾಯಿ ಸಾಂತ್ವನ
ಇಂಡಿಪೆಂಡೆಂಟ್ ತನ್ನ ವರದಿಯಲ್ಲಿ ಎಫ್‌ಎಸ್‌ಬಿ ಅಧಿಕಾರಿಯು ಯುಕೆಯಲ್ಲಿ ವಾಸಿಸುತ್ತಿರುವ ರಷ್ಯಾದ ಮಾಜಿ ಗೂಢಚಾರ ಬೋರಿಸ್ ಕಾರ್ಪಿಚ್‌ಕೋವ್‌ಗೆ ನೀಡಿದ ಸಂದೇಶದಲ್ಲಿ ಪುಟಿನ್ ಅವರ ಆರೋಗ್ಯದ ಬಗ್ಗೆ ಬಹಿರಂಗಪಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.ರೈತ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಎರಚಿದ ಯುವಕ
ಪುಟಿನ್ ಅವರ ಕೈಕಾಲುಗಳು ಈಗ ಅನಿಯಂತ್ರಿತವಾಗಿ ಅಲುಗಾಡುತ್ತಿವೆ.ಈ ತಿಂಗಳ ಆರಂಭದಲ್ಲಿ, ಅವರ ಹೊಟ್ಟೆಯಿಂದ ದ್ರವವನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದಾಗ್ಯೂ, ಲಾವ್ರೊವ್ ರಷ್ಯಾದ ಅಧ್ಯಕ್ಷರ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ನಿರಾಕರಿಸಿದ್ದಾರೆ.ಅಕ್ಟೋಬರ್‌ನಲ್ಲಿ 70 ನೇ ವರ್ಷಕ್ಕೆ ಕಾಲಿಡಲಿರುವ ಪುಟಿನ್ ಪ್ರತಿದಿನ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ ಎಂದು ಲಾವ್ರೊವ್ ಹೇಳಿದ್ದಾರೆ.
ರಷ್ಯಾದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಅಧಿಕಾರದಲ್ಲಿರುವ ಪುಟಿನ್ ಫೆಬ್ರವರಿ 24 ರಂದು ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ್ದು, ಜಗತ್ತನ್ನು ತಲ್ಲಣಗೊಳಿಸಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.