ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ೬ ದಿನಗಳ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಇದೇ ೨೦ ಮಂಗಳವಾರದಿಂದ ಆರಂಭಗೊಳ್ಳಲಿದೆ. ಜೂನ್ ೨೧ರಂದು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದು, ಬಳಿಕ ವಾಷಿಂಗ್ಟನ್‌ಗೆ ತೆರಳಲಿದ್ದಾರೆ.


COMMERCIAL BREAK
SCROLL TO CONTINUE READING

ಶ್ವೇತಭವನದಲ್ಲಿ ಪ್ರಧಾನಿ ಅವರಿಗೆ ಔಪಚಾರಿಕ ಸ್ವಾಗತ ಕಾರ್ಯಕ್ರಮ ಇರಲಿದ್ದು, ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ. ಅಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಗೌರವಾರ್ಥ ಜೋ ಬೈಡನ್ ಮತ್ತು ಅಮೆರಿಕದ ಪ್ರಥಮ ಮಹಿಳೆ ಡಾ.ಜಿಲ್ ಬೈಡನ್ ವಿಶೇಷ ಔತಣಕೂಟ ಆಯೋಜಿಸಲಿದ್ದಾರೆ.


ಇದನ್ನೂ ಓದಿ: ನಾಳೆಯಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ಚಾಲನೆ


೨೩ರಂದು ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಅವರೊಂದಿಗೆ ಪ್ರಧಾನಿ ಸಮಾಲೋಚನೆ ನಡೆಸಲಿದ್ದಾರೆ.


ಅಮೆರಿಕಾ ಸಂಸತ್ ಸಭೆಯ ಜಂಟಿ ಸದನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಎರಡೂ ಸದನಗಳ ಅಧ್ಯಕ್ಷರಾದ ಕೆವಿನ್ ಮೆಕಾರ್ತಿ ಹಾಗೂ ಚಾರ್ಲ್ಸ್ ಸ್ಕೂಮರ್ ಭಾಗವಹಿಸಲಿದ್ದಾರೆ.


ಅಮೆರಿಕದ ಉದ್ಯಮ ವಲಯದ ಪ್ರಮುಖರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಭಾರತೀಯ ಸಮುದಾಯದೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.