Russia-Ukraine War: ರಷ್ಯಾ ಜೊತೆ ಮಾತುಕತೆ ನಡೆಸುವಂತೆ ಪ್ರಧಾನಿ ಮೋದಿ ನೀಡಿದ ಸಲಹೆಯನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಿರಾಕರಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ಝೆಲೆನ್ಸ್ಕಿ ಬುಧವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು ಮತ್ತು ಉಕ್ರೇನ್ ಬಿಕ್ಕಟ್ಟಿಗೆ ಮಿಲಿಟರಿ ಪರಿಹಾರ ಸಾಧ್ಯವಿಲ್ಲ ಎಂದು ಒತ್ತಿ ಹೇಳಿದರು. ಪರಮಾಣು ಸ್ಥಾವರಗಳನ್ನು ಅಪಾಯಕ್ಕೆ ಸಿಲುಕಿಸುವುದು ದೂರಗಾಮಿ ಮತ್ತು ವಿನಾಶಕಾರಿ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Chinaದಲ್ಲಿ ಲ್ಯಾಂಡ್ ಆದ ಇರಾನ್ ವಿಮಾನ, ಹುಸಿ ಸಾಬೀತಾದ ಬಾಂಬ್ ಬೆದರಿಕೆ


ಪಿಎಂಒ ಹೊರಡಿಸಿದ ಹೇಳಿಕೆಯ ಪ್ರಕಾರ, ಪಿಎಂ ಮೋದಿ ಶೀಘ್ರದಲ್ಲೇ ಯುದ್ಧವನ್ನು ಕೊನೆಗೊಳಿಸುವ ಮತ್ತು ಮಾತುಕತೆ ರಾಜತಾಂತ್ರಿಕ ಹಾದಿಯಲ್ಲಿ ನಡೆಯುವ ಬಗ್ಗೆ ಮಾತನಾಡಿದ್ದಾರೆ. ಭಾರತವು ಯಾವುದೇ ರೀತಿಯ ಶಾಂತಿ ಪ್ರಯತ್ನಗಳಿಗೆ ಕೊಡುಗೆ ನೀಡಲು ಸಿದ್ಧವಾಗಿದೆ ಎಂದು ಹೇಳಿದರು. ಇತ್ತೀಚೆಗೆ, ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್‌ನ ಲುಹಾನ್ಸ್ಕ್, ಡೊನೆಟ್ಸ್ಕ್, ಖೆರ್ಸನ್ ಮತ್ತು ಝಪೋರಿಜ್ಜ್ಯಾ ಪ್ರದೇಶಗಳನ್ನು ರಷ್ಯಾದೊಂದಿಗೆ ವಿಲೀನಗೊಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ, ಉಕ್ರೇನ್ ಅನ್ನು ಸ್ವಾಧೀನಪಡಿಸಿಕೊಳ್ಳಲು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದರೂ, ಅವು ಕಾನೂನುಬಾಹಿರ ಮತ್ತು ಇದು ಸತ್ಯವನ್ನು ಬದಲಾಯಿಸುವುದಿಲ್ಲ ಎಂದು ಝೆಲೆನ್ಸ್ಕಿ ಹೇಳಿದರು. ಅಂತಹ ಪರಿಸ್ಥಿತಿಯಲ್ಲಿ ಉಕ್ರೇನ್ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಒಪ್ಪಂದಕ್ಕೆ ಬರುವುದಿಲ್ಲ ಎಂದು ಝೆಲೆನ್ಸ್ಕಿ ಒತ್ತಿ ಹೇಳಿದರು. ಆದರೆ ಉಕ್ರೇನ್ ಯಾವಾಗಲೂ ಮಾತುಕತೆಗಳ ಮೂಲಕ ಶಾಂತಿಯುತ ಇತ್ಯರ್ಥದ ಪರವಾಗಿದೆ.


ಇದನ್ನೂ ಓದಿ : ರಷ್ಯಾದಿಂದ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರ ಮುಖ್ಯಸ್ಥನ ಅಪಹರಣ...!


ಉಕ್ರೇನಿಯನ್ ಅಧ್ಯಕ್ಷರು, "ರಷ್ಯಾ ಎಂದಿಗೂ ಮಾತುಕತೆಗೆ ಸಿದ್ಧವಾಗಿಲ್ಲ ಮತ್ತು ಉದ್ದೇಶಪೂರ್ವಕವಾಗಿ ಆಕ್ರಮಣಕಾರಿ ನಿಲುವನ್ನು ತೆಗೆದುಕೊಂಡಿದೆ. ಮಾತುಕತೆಗಳ ಪ್ರಕ್ರಿಯೆಯನ್ನು ದುರ್ಬಲಗೊಳಿಸಿದೆ. ಯುಎನ್‌ನಲ್ಲಿ ನನ್ನ ಭಾಷಣದಲ್ಲಿ, ನಾನು ಶಾಂತಿಯ ಸೂತ್ರದ ಬಗ್ಗೆ ಮಾತನಾಡಿದ್ದೇನೆ" ಎಂದು ಹೇಳಿದರು. ಉಕ್ರೇನ್‌ನ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಭಾರತದ ಬೆಂಬಲಕ್ಕಾಗಿ ಝೆಲೆನ್ಸ್ಕಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು. 


ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಮಾತುಕತೆಯ ಸಂದರ್ಭದಲ್ಲಿ ಭಾರತ - ಉಕ್ರೇನ್ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಝೆಲೆನ್ಸ್ಕಿ ಒತ್ತಿ ಹೇಳಿದರು. ಉಕ್ರೇನ್‌ಗೆ ಭಾರತ ಸರ್ಕಾರ ಸಾಕಷ್ಟು ಮಾನವೀಯ ನೆರವು ನೀಡಿದೆ ಎಂದು ಹೇಳಿದರು. ಜಾಗತಿಕ ಆಹಾರ ಭದ್ರತೆ ಬಗ್ಗೆಯೂ ಉಭಯ ನಾಯಕರ ನಡುವೆ ಮಾತುಕತೆ ನಡೆದಿದೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.