PM Modi In US: ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
PM Modi In US: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ನಡುವಿನ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ. ಈ ಸಮಯದಲ್ಲಿ, ಹ್ಯಾರಿಸ್ ಭಾರತದ ಲಸಿಕೆ ಅಭಿಯಾನದಿಂದ ಪ್ರಭಾವಿತರಾಗಿರುವುದಾಗಿ ತಿಳಿಸಿದ್ದಾರೆ. ಲಸಿಕೆಯನ್ನು ರಫ್ತು ಮಾಡುವ ಭಾರತದ ನಿರ್ಧಾರವನ್ನು ಅವರು ಸ್ವಾಗತಿಸಿದರು. ಅದೇ ಸಮಯದಲ್ಲಿ, ಪ್ರಧಾನಿ ಮೋದಿ ಭಾರತ ಮತ್ತು ಅಮೆರಿಕವನ್ನು ಪರಸ್ಪರ ಸಹಜ ಪಾಲುದಾರರು ಎಂದು ಬಣ್ಣಿಸಿದ್ದಾರೆ.
ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಮೆರಿಕ ಭೇಟಿಯ ವೇಳೆ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (US Vice President Kamala Harris) ಅವರನ್ನು ಭೇಟಿ ಮಾಡಿದರು. ಈ ಸಭೆಯಲ್ಲಿ ಹಲವು ವಿಷಯಗಳನ್ನು ಚರ್ಚಿಸಲಾಗಿದೆ. ಇದರ ನಂತರ ಜಂಟಿ ಹೇಳಿಕೆಯನ್ನು ಹೊರಡಿಸಲಾಗಿದೆ. ಶೀಘ್ರದಲ್ಲೇ ಲಸಿಕೆ ರಫ್ತುಗಳನ್ನು ಪುನರಾರಂಭಿಸುವುದಾಗಿ ಭಾರತದ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ. ಭಾರತವು ಪ್ರಸ್ತುತ ದಿನಕ್ಕೆ 10 ಮಿಲಿಯನ್ ಜನರಿಗೆ ಲಸಿಕೆ ಹಾಕುತ್ತಿರುವುದು ವಿಶೇಷವಾಗಿ ಗಮನಿಸಬೇಕಾದ ಸಂಗತಿ ಎಂದು ಕಮಲಾ ಹ್ಯಾರಿಸ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ (PM Narendra Modi) ತಿಳಿಸಿದರು. ಅದೇ ಸಮಯದಲ್ಲಿ, ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕವನ್ನು ಪರಸ್ಪರ ಸಹಜ ಪಾಲುದಾರರು ಎಂದು ಬಣ್ಣಿಸಿದರು.
PM Modi In America: ಅಮೆರಿಕ ತಲುಪಿದ ಪ್ರಧಾನಿ ಮೋದಿ, ಟ್ವೀಟ್ ಮೂಲಕ ಹೇಳಿದ್ದೇನು?
ಇದೇ ಸಂದರ್ಭದಲ್ಲಿ ಯುಎಸ್ಎ ಉಪಾಧ್ಯಕ್ಷರಾಗಿ ನಿಮ್ಮ ಆಯ್ಕೆಯು ಒಂದು ಪ್ರಮುಖ ಮತ್ತು ಐತಿಹಾಸಿಕ ಘಟನೆಯಾಗಿದೆ. ನೀವು ಪ್ರಪಂಚದಾದ್ಯಂತ ಅನೇಕರಿಗೆ ಸ್ಫೂರ್ತಿಯ ಮೂಲವಾಗಿದ್ದೀರಿ. ಅಮೆರಿಕ ಅಧ್ಯಕ್ಷ ಜೋ ಬಿಡೆನ್ (Joe Biden) ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ನೇತೃತ್ವದಲ್ಲಿ ಭಾರತ-ಅಮೆರಿಕ ಸಂಬಂಧಗಳು ಹೊಸ ಎತ್ತರವನ್ನು ತಲುಪುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಅಮೆರಿಕಾದ ಟಾಪ್ CEO ಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ
ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್- ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಭೇಟಿ;
ವಾಸ್ತವವಾಗಿ, ಕಮಲಾ ಹ್ಯಾರಿಸ್ ಅಮೆರಿಕ ಉಪಾಧ್ಯಕ್ಷೆ ಆಗಿ ಆಯ್ಕೆಯಾದ ಬಳಿಕ ಇದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರೊಂದಿಗೆ ಮೊದಲ ಭೇಟಿಯಾಗಿದೆ. ಈ ಭೇಟಿ ಸಮಯದಲ್ಲಿ ಇಬ್ಬರೂ ನಾಯಕರು ಭಾರತ ಮತ್ತು ಅಮೆರಿಕ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಒತ್ತಿ ಹೇಳಿದರು. ಈ ಸಮಯದಲ್ಲಿ, ಪರಸ್ಪರ ಮತ್ತು ಜಾಗತಿಕ ಹಿತಾಸಕ್ತಿಯ ವಿಷಯಗಳ ಬಗ್ಗೆಯೂ ಚರ್ಚಿಸಲಾಯಿತು. ಭಾರತದಲ್ಲಿ ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಜೂನ್ ನಲ್ಲಿ ಹ್ಯಾರಿಸ್ ಈ ಹಿಂದೆ ಮೋದಿಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು.
ಜಂಟಿ ಹೇಳಿಕೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ, 'ಕೆಲವು ತಿಂಗಳ ಹಿಂದೆ, ನಿಮ್ಮೊಂದಿಗೆ ದೂರವಾಣಿಯಲ್ಲಿ ವಿವರವಾಗಿ ಮಾತನಾಡಲು ನನಗೆ ಅವಕಾಶವಿತ್ತು. ಇದು ಭಾರತವು ಎರಡನೇ ಕರೋನಾದ ಅಲೆಯ (Corona Second Wave) ಹಿಡಿತದಲ್ಲಿದ್ದ ಸಮಯ. ಆ ಸಮಯದಲ್ಲಿ ನೀವು ಭಾರತದ ಬಗ್ಗೆ ಕಾಳಜಿ ಹೊಂದಿದ್ದ ರೀತಿ. ಭಾರತಕ್ಕೆ ಸಹಾಯ ಮಾಡಲು ಕ್ರಮಗಳನ್ನು ತೆಗೆದುಕೊಂಡಿದ್ದಕ್ಕಾಗಿ ನಾನು ನಿಮಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಭಾರತವು ಕೋವಿಡ್ 19 ರ ಎರಡನೇ ಅಲೆಯಿಂದ ತತ್ತರಿಸಿದಾಗ ಭಾರತಕ್ಕೆ ಸಹಾಯ ಹಸ್ತ ಚಾಚಿದ್ದಕ್ಕಾಗಿ ನಾನು ಅಮೆರಿಕಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.