ಅಮೆರಿಕಾದ ಟಾಪ್ CEO ಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ
ಪ್ರಧಾನಿ ನರೇಂದ್ರ ಮೋದಿ ಗುರುವಾರ (ಸೆಪ್ಟೆಂಬರ್ 23) ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕದ ಉನ್ನತ ತಂತ್ರಜ್ಞಾನ ಕಂಪನಿಗಳ ಸಿಇಒಗಳನ್ನು ಭೇಟಿ ಮಾಡಿದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ (ಸೆಪ್ಟೆಂಬರ್ 23) ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕದ ಉನ್ನತ ತಂತ್ರಜ್ಞಾನ ಕಂಪನಿಗಳ ಸಿಇಒಗಳನ್ನು ಭೇಟಿ ಮಾಡಿದರು.
ಸಿಇಒಗಳ ಜೊತೆಗಿನ ಸಭೆಯಲ್ಲಿ 5 ಜಿ, ಸ್ಟಾರ್ಟ್ ಅಪ್ ಮತ್ತು ಡಿಜಿಟಲ್ ಇಂಡಿಯಾ ಸೇರಿದಂತೆ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಶಾಲ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.ಕ್ವಾಲ್ಕಾಮ್‌ನ ಅಧ್ಯಕ್ಷ ಮತ್ತು ಸಿಇಒ ಕ್ರಿಸ್ಟಿಯಾನೊ ಆರ್ ಅಮೋನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು ಎಂದು ಪಿಎಂಒ ಹೇಳಿದೆ.
ಇದನ್ನೂ ಓದಿ-Gold-Silver Rate : ಮಹಿಳೆಯೆರೆ ಗಮನಿಸಿ : ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ
'ಇದೊಂದು ಉತ್ತಮ ಸಭೆ.ಭಾರತದ ಜೊತೆಗಿನ ಪಾಲುದಾರಿಕೆಯ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ.ನಾವು 5 ಜಿ ಮತ್ತು ಅದರ ವೇಗವರ್ಧನೆಯ ಬಗ್ಗೆ ಮಾತನಾಡಿದ್ದೇವೆ.ನಾವು ಭಾರತದಲ್ಲಿ ಮಾತ್ರವಲ್ಲದೆ ಭಾರತವನ್ನು ತಂತ್ರಜ್ಞಾನದ ರಫ್ತುದಾರರಾಗಿ ಉದ್ಯಮವನ್ನು ಮುನ್ನಡೆಸಲು ಇರುವ ಅವಕಾಶದ ಬಗ್ಗೆ ಮಾತನಾಡಿದ್ದೇವೆ "ಎಂದು ಅಮೋನ್ ಹೇಳಿದ್ದಾರೆ.
PM Kisan: ಈ ತಪ್ಪುಗಳಾಗಿದ್ದರೆ ನಿಂತು ಬಿಡಬಹುದು 9 ನೇ ಕಂತು, ಈ ರೀತಿ ಸರಿಪಡಿಸಿಕೊಳ್ಳಿ
ಅಡೋಬ್ ಚೇರ್ಮನ್ ಶಂತನು ನಾರಾಯಣ್ ಅವರನ್ನು ಕೂಡ ಮೋದಿ ಭೇಟಿ ಮಾಡಿದರು. ಯುವಕರಿಗೆ ಸ್ಮಾರ್ಟ್ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ವರ್ಧನೆಯ ಬಗ್ಗೆ ಇಬ್ಬರೂ ಚರ್ಚಿಸಿದರು ಎಂದು ಪಿಎಂಒ ಹೇಳಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ