ಭಾರತದಲ್ಲಿ 100 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮುಂದಾದ ಸೌದಿ

ವಿಶ್ವದ ಅತಿದೊಡ್ಡ ತೈಲ ರಫ್ತುದಾರರಾದ ಸೌದಿ ಅರೇಬಿಯಾವು ದೇಶದ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ ಪೆಟ್ರೋಕೆಮಿಕಲ್ಸ್, ಮೂಲಸೌಕರ್ಯ ಮತ್ತು ಗಣಿಗಾರಿಕೆ ಕ್ಷೇತ್ರಗಳಲ್ಲಿ ಭಾರತದಲ್ಲಿ 100 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮಾಡಲು ಎದುರು ನೋಡುತ್ತಿದೆ.

Updated: Sep 29, 2019 , 03:36 PM IST
ಭಾರತದಲ್ಲಿ 100 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮುಂದಾದ ಸೌದಿ
ಸಾಂದರ್ಭಿಕ ಚಿತ್ರ

ನವದೆಹಲಿ: ವಿಶ್ವದ ಅತಿದೊಡ್ಡ ತೈಲ ರಫ್ತುದಾರರಾದ ಸೌದಿ ಅರೇಬಿಯಾವು ದೇಶದ ಬೆಳವಣಿಗೆಯ ಸಾಮರ್ಥ್ಯವನ್ನು ಪರಿಗಣಿಸಿ ಪೆಟ್ರೋಕೆಮಿಕಲ್ಸ್, ಮೂಲಸೌಕರ್ಯ ಮತ್ತು ಗಣಿಗಾರಿಕೆ ಕ್ಷೇತ್ರಗಳಲ್ಲಿ ಭಾರತದಲ್ಲಿ 100 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮಾಡಲು ಎದುರು ನೋಡುತ್ತಿದೆ.

ಭಾರತವು ಸೌದಿ ಅರೇಬಿಯಾಕ್ಕೆ ಆಕರ್ಷಕ ಹೂಡಿಕೆ ತಾಣವಾಗಿದೆ ಮತ್ತು ತೈಲ, ಅನಿಲ ಮತ್ತು ಗಣಿಗಾರಿಕೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ದೀರ್ಘಕಾಲೀನ ಸಹಭಾಗಿತ್ವವನ್ನು ಹೊಂದಿದೆ ಎಂದು ಸೌದಿ ರಾಯಭಾರಿ ಡಾ. ಸೌದ್ ಬಿನ್ ಮೊಹಮ್ಮದ್ ಅಲ್ ಸತಿ ಹೇಳಿದ್ದಾರೆ. ಇಂಧನ, ಸಂಸ್ಕರಣೆ, ಪೆಟ್ರೋಕೆಮಿಕಲ್ಸ್, ಮೂಲಸೌಕರ್ಯ, ಕೃಷಿ, ಖನಿಜಗಳು ಮತ್ತು ಗಣಿಗಾರಿಕೆ ಕ್ಷೇತ್ರಗಳಲ್ಲಿ ಭಾರತದಲ್ಲಿ 100 ಬಿಲಿಯನ್ ಡಾಲರ್ ಮೌಲ್ಯದ ಹೂಡಿಕೆ ಮಾಡಲು ಸೌದಿ ಅರೇಬಿಯಾ ನೋಡುತ್ತಿದೆ ಎಂದು ಅಲ್ ಸತಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.  

ಸೌದಿ ಅರೇಬಿಯಾದ ಅತಿದೊಡ್ಡ ತೈಲ ದೈತ್ಯ ಅರಾಮ್ಕೊ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಜೊತೆಗಿನ ಉದ್ದೇಶಿತ ಸಹಭಾಗಿತ್ವವು ಉಭಯ ದೇಶಗಳ ನಡುವೆ ಬೆಳೆಯುತ್ತಿರುವ ಇಂಧನ ಸಂಬಂಧಗಳ ಕಾರ್ಯತಂತ್ರದ ಸ್ವರೂಪವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. ತೈಲ ಪೂರೈಕೆ, ಮಾರ್ಕೆಟಿಂಗ್, ಪೆಟ್ರೋಕೆಮಿಕಲ್ಸ್ ಮತ್ತು ಲೂಬ್ರಿಕಂಟ್‌ಗಳಿಗೆ ಸಂಸ್ಕರಣೆ ಮಾಡುವುದರಿಂದ ಭಾರತದ ಮೌಲ್ಯ ಸರಪಳಿಯಲ್ಲಿ ಹೂಡಿಕೆ ಮಾಡುವುದು ಅರಾಮ್‌ಕೊದ ಜಾಗತಿಕ ಡೌನ್‌ಸ್ಟ್ರೀಮ್ ಕಾರ್ಯತಂತ್ರದ ಪ್ರಮುಖ ಭಾಗವಾಗಿದೆ ಎಂದು ರಾಯಭಾರಿ ಹೇಳಿದರು.

ಈಗ ಈ ಹಿನ್ನೆಲೆಯಲ್ಲಿ, ಸೌದಿ ಅರಾಮ್ಕೊ ಭಾರತದ ಇಂಧನ ಕ್ಷೇತ್ರದಲ್ಲಿ 44 ಬಿಲಿಯನ್ ಯುಎಸ್ ಡಾಲರ್ ವೆಸ್ಟ್ ಕೋಸ್ಟ್ ರಿಫೈನರಿ ಮತ್ತು ಮಹಾರಾಷ್ಟ್ರದ ಪೆಟ್ರೋಕೆಮಿಕಲ್ ಪ್ರಾಜೆಕ್ಟ್ ಮತ್ತು ರಿಲಯನ್ಸ್ ಜೊತೆಗಿನ ದೀರ್ಘಾವಧಿಯ ಸಹಭಾಗಿತ್ವವು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಕಾರ್ಯತಂತ್ರದ ಮೈಲಿಗಲ್ಲುಗಳನ್ನು ಪ್ರತಿನಿಧಿಸುತ್ತದೆ' ಎಂದು ಅವರು ಹೇಳಿದರು.

ಸೌದಿ ರಾಜಕುಮಾರ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ವಿಷನ್ 2030 ಕೂಡ ಭಾರತ ಮತ್ತು ಸೌದಿ ಅರೇಬಿಯಾ ನಡುವೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರದ ಗಮನಾರ್ಹ ವಿಸ್ತರಣೆಗೆ ಕಾರಣವಾಗಲಿದೆ. ವಿಷನ್  2030 ರ ಅಡಿಯಲ್ಲಿ, ಸೌದಿ ಅರೇಬಿಯಾ ತನ್ನ ಆರ್ಥಿಕತೆಯನ್ನು ವೈವಿಧ್ಯಗೊಳಿಸಲು ಯೋಜಿಸುತ್ತಿದ್ದು, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಆರ್ಥಿಕ ಅವಲಂಬನೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ.

ಸೌದಿ ಅರೇಬಿಯಾ ಭಾರತದ ಇಂಧನ ಸುರಕ್ಷತೆಯ ಪ್ರಮುಖ ಆಧಾರ ಸ್ತಂಭವಾಗಿದ್ದು, ಇದು ಶೇಕಡಾ 17 ಅಥವಾ ಅದಕ್ಕಿಂತ ಹೆಚ್ಚಿನ ಕಚ್ಚಾ ತೈಲದ ಮೂಲವಾಗಿದೆ ಮತ್ತು ಭಾರತದ ಶೇ 32 ರಷ್ಟು ಎಲ್‌ಪಿಜಿ ಅವಶ್ಯಕತೆಗಳನ್ನು ಹೊಂದಿದೆ.