ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರು ಶುಕ್ರವಾರ ಬೆಳಗ್ಗೆ ಪಶ್ಚಿಮ ಜಪಾನ್ನ ನಾರಾ ಪ್ರಿಫೆಕ್ಚರ್ನಲ್ಲಿ ಭಾಷಣ ಮಾಡುವಾಗ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಬೆ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಭಾರತದೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಅವರ ಗೌರವಾರ್ಥ ಶನಿವಾರ ಒಂದು ದಿನ ರಾಷ್ಟ್ರೀಯ ಶೋಕಾಚರಣೆ ನಡೆಸಲು ಆದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, "ಮಾಜಿ ಪ್ರಧಾನಿ ಅಬೆ ಶಿಂಜೋ ಅವರಿಗೆ ನಮ್ಮ ಗೌರವದ ಸಂಕೇತವಾಗಿ, 9 ಜುಲೈ 2022 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ" ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಶಿಂಜೊ ಅಬೆ ನಿಧನ: ಕೊನೆಯ ಭೇಟಿ ನೆನೆದು ಮೋದಿ ಭಾವುಕ ಪೋಸ್ಟ್
ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಬಹಳಷ್ಟು ದುಃಖಿತನಾಗಿದ್ದೇನೆ. ಪದಗಳಿಂದ ವರ್ಣಿಸಲಾಗದಷ್ಟು ದುಃಖಿತನಾಗಿದ್ದೇನೆ ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
As a mark of our deepest respect for former Prime Minister Abe Shinzo, a one day national mourning shall be observed on 9 July 2022.
— Narendra Modi (@narendramodi) July 8, 2022
ಭಾನುವಾರದ ಮೇಲ್ಮನೆ ಚುನಾವಣೆಗೆ ಮುನ್ನ ನಡೆದ ಕಾರ್ಯಕ್ರಮವೊಂದರಲ್ಲಿ ಅಬೆ ಭಾಷಣ ಮಾಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ ಎಂದು ರಾಷ್ಟ್ರೀಯ ಪ್ರಸಾರಕ ಎನ್ಎಚ್ಕೆ ಮತ್ತು ಕ್ಯೋಡೋ ಸುದ್ದಿ ಸಂಸ್ಥೆ ತಿಳಿಸಿದೆ. 67 ವರ್ಷದ ನಾಯಕ ಅಬೆ ಎದೆಗೆ ಗುಂಡು ತಗುಲಿದ್ದು, ಸ್ಥಳದಲ್ಲೇ ಕುಸಿದು ಬಿದ್ದರು ಎಂದು ಅವರ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಮೂಲವೊಂದು ಜಿಜಿ ಸುದ್ದಿ ಸಂಸ್ಥೆಗೆ ತಿಳಿಸಿದೆ.
ಶಂಕಿತ ದಾಳಿಕೋರನನ್ನು ಜಪಾನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಬೆ ಜಪಾನ್ನ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿದ್ದರು. ಅವರು 2006 ರಲ್ಲಿ ಒಂದು ವರ್ಷ ಮತ್ತು ಮತ್ತೆ 2012 ರಿಂದ 2020 ರವರೆಗೆ ಅಧಿಕಾರದಲ್ಲಿದ್ದರು. ಅಲ್ಲದೇ ಇವರು ಭಾರತದೊಂದಿಗೆ ಜಪಾನ್ ಒಡನಾಟ ಗಟ್ಟಿಸಿಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದರು.
ಇದನ್ನೂ ಓದಿ: Shinzo Abe declared dead; ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ, ಅಧಿಕಾರಿಗಳಿಂದ ಘೋಷಣೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.