ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರು ಶುಕ್ರವಾರ ಬೆಳಗ್ಗೆ ಪಶ್ಚಿಮ ಜಪಾನ್‌ನ ನಾರಾ ಪ್ರಿಫೆಕ್ಚರ್‌ನಲ್ಲಿ ಭಾಷಣ ಮಾಡುವಾಗ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಬೆ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಭಾರತದೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಅವರ ಗೌರವಾರ್ಥ ಶನಿವಾರ ಒಂದು ದಿನ ರಾಷ್ಟ್ರೀಯ ಶೋಕಾಚರಣೆ ನಡೆಸಲು ಆದೇಶಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, "ಮಾಜಿ ಪ್ರಧಾನಿ ಅಬೆ ಶಿಂಜೋ ಅವರಿಗೆ ನಮ್ಮ ಗೌರವದ ಸಂಕೇತವಾಗಿ, 9 ಜುಲೈ 2022 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ" ಎಂದು ತಿಳಿಸಿದ್ದಾರೆ. 


ಇದನ್ನೂ ಓದಿ: ಶಿಂಜೊ ಅಬೆ ನಿಧನ: ಕೊನೆಯ ಭೇಟಿ ನೆನೆದು ಮೋದಿ ಭಾವುಕ ಪೋಸ್ಟ್‌


ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಬಹಳಷ್ಟು ದುಃಖಿತನಾಗಿದ್ದೇನೆ. ಪದಗಳಿಂದ ವರ್ಣಿಸಲಾಗದಷ್ಟು ದುಃಖಿತನಾಗಿದ್ದೇನೆ ಎಂದು ಪಿಎಂ ಮೋದಿ ಟ್ವೀಟ್‌ ಮಾಡಿದ್ದಾರೆ.  


 


Shinzo Abe declared dead; ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ, ಅಧಿಕಾರಿಗಳಿಂದ ಘೋಷಣೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.