ಆಫ್ಘಾನಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 6 ಮಂದಿ ಸಾವು

ಆಫ್ಘಾನಿಸ್ತಾನದ ಲಾಘ್ಮನ್ ಪ್ರಾಂತ್ಯದಲ್ಲಿ ಮಂಗಳವಾರ ನಡೆದ ಪ್ರಬಲ ಬಾಂಬ್ ಸ್ಫೋಟದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. 

Last Updated : Feb 19, 2019, 05:59 PM IST
ಆಫ್ಘಾನಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 6 ಮಂದಿ ಸಾವು title=

ಕಾಬೂಲ್: ಆಫ್ಘಾನಿಸ್ತಾನದ ಲಾಘ್ಮನ್ ಪ್ರಾಂತ್ಯದಲ್ಲಿ ಮಂಗಳವಾರ ನಡೆದ ಪ್ರಬಲ ಬಾಂಬ್ ಸ್ಫೋಟದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಖ್ವಾರ್ಘಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಈ ಸ್ಫೋಟದಲ್ಲಿ ಐಇಡಿ ಬಾಂಬ್​ ಬಳಸಲಾಗಿದೆ ಎನ್ನಲಾಗಿದೆ. 

ಮೂರು ದಿನಗಳ ಹಿಂದೆ ಕಾಬೂಲ್'ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟು 100ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದರು. ತಾಲಿಬಾನ್ ಉಗ್ರ ಸಂಘಟನೆ ಈ ದಾಳಿ ನಡೆಸಿದ್ದು, ಸುತ್ತಮುತ್ತಲಿನ ಪ್ರದೇಶಗಳ ಮನೆಗಳು ಸಂಪೂರ್ಣ ನಾಶವಾಗಿದ್ದವು. 

ಇತ್ತ ಭಾರತದಲ್ಲಿಯೂ ಪುಲ್ವಾಮಾದಲ್ಲಿ ಇತ್ತೀಚೆಗೆ ಭಯೋತ್ಪಾದಕರು ನಡೆಸಿದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 40 ಕ್ಕೂ ಅಧಿಕ ಯೋಧರು ಬಲಿಯಾಗಿದ್ದರು.

Trending News