ನ್ಯೂಯಾರ್ಕ್: ಇಲ್ಲಿನ ಮನೆಯೊಂದಕ್ಕೆ ಮೂವರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ ಎಂದು ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ಹೇಳಿದೆ. 


COMMERCIAL BREAK
SCROLL TO CONTINUE READING

ಶನಿವಾರ ಸಂಜೆ ವಿಮಾನವು ರಾಜ್ಯದ ಡಚೆಸ್ ಕೌಂಟಿಯಲ್ಲಿರುವ ಮನೆಗೆ ಅಪ್ಪಳಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಸ್ಪುಟ್ನಿಕ್ ವರದಿ ಮಾಡಿದೆ.


 ಪ್ರಯಾಣಿಕರಿಗೆ ಸಂಬಂಧಿಸಿದ ಇನ್ನೂ ವಿವರಗಳು ಲಭ್ಯವಾಗಿಲ್ಲ. ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಆರಂಭಿಸಲಾಗುವುದು ಎಂದು ಎಫ್‌ಎಎ ಹೇಳಿದೆ.