Spain President To Skip G-20 For Covid Positive : ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಈ ಹಿನ್ನೆಲೆ ಭಾರತದಲ್ಲಿ ನಡೆಯಲಿರುವ G-20 ಶೃಂಗಸಭೆಗೆ ನವದೆಹಲಿಗೆ ಆಗಮಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಪೇನ್ ಅಧ್ಯಕ್ಷ X ನಲ್ಲಿ (ಹಿಂದೆ ಟ್ವಿಟರ್) ಹಂಚಿಕೊಂಡಿದ್ದಾರೆ. "ಈ ಮಧ್ಯಾಹ್ನ ನಾನು COVID ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ ಮತ್ತು G20 ಶೃಂಗಸಭೆಗಾಗಿ ನವದೆಹಲಿಗೆ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ. ನಾನು ಚೆನ್ನಾಗಿರುತ್ತೇನೆ. " ಜಿ 20 ಶೃಂಗಸಭೆಯಲ್ಲಿ ಸ್ಪೇನ್ಅನ್ನು ಮೊದಲ ಉಪಾಧ್ಯಕ್ಷ ನಾಡಿಯಾ ಕ್ಯಾಲ್ವಿನೊ ಮತ್ತು ಆರ್ಥಿಕ ವ್ಯವಹಾರಗಳ ಸಚಿವರು ಮತ್ತು ವಿದೇಶಾಂಗ ವ್ಯವಹಾರಗಳು, ಇಯು ಮತ್ತು ಸಹಕಾರ ಸಚಿವರು ಪ್ರತಿನಿಧಿಸುತ್ತಾರೆ ಎಂದು ತಿಳಿಸಿದ್ದಾರೆ.
Esta tarde he dado positivo en COVID y no podré viajar a Nueva Delhi para asistir a la Cumbre del G-20.
Me encuentro bien.
España estará magníficamente representada por la vicepresidenta primera y ministra de Asuntos Económicos y el ministro de Exteriores, UE y Cooperación.
— Pedro Sánchez (@sanchezcastejon) September 7, 2023
G20 ಶೃಂಗಸಭೆಯಿಂದ ಹಿಂದೆ ಸರಿದ ಮೂರನೇ ವಿಶ್ವ ನಾಯಕ ಪೆಡ್ರೊ ಸ್ಯಾಂಚೆಜ್. ಇದಕ್ಕೂ ಮುಂಚೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯಲ್ಲಿ ನಡೆಯಲಿರುವ G-20 ಶೃಂಗಸಭೆಗೆ ಭೇಟಿ ನೀಡದಿರುವ ಇತರ ಇಬ್ಬರು ನಾಯಕರು.
ಇದನ್ನು ಓದಿ - ಜಿ 20 ಗೆ ಆಫ್ರಿಕನ್ ಯುನಿಯನ್ ಗೆ ಎಂಟ್ರಿ..! ಶೀಘ್ರದಲ್ಲೇ ಗ್ರೂಪ್ ಗೆ ಮರುನಾಮಕರಣ
ನವದೆಹಲಿಯ ಪ್ರಗತಿ ಮೈದಾನದಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಭಾರತ್ ಮಂಟಪಂ ಕನ್ವೆನ್ಷನ್ ಸೆಂಟರ್‌ನಲ್ಲಿ G20 ನಾಯಕರ ಶೃಂಗಸಭೆಯನ್ನು ಆಯೋಜಿಸಲಾಗಿದ್ದು, ಇದೇ ಮೊದಲ ಬಾರಿಗೆ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಇದಾಗಿದೆ. ಈ ಸಭೆಯಲ್ಲಿ ಅನೇಕ ಜಾಗತಿಕ ನಾಯಕರು ಮತ್ತು ಪ್ರತಿನಿಧಿಗಳ ಭಾಗಿಯಾಗಲಿದ್ದಾರೆ.
ಜಿ20ಗೆ ಸಂಬಂಧಿಸಿದ ಸುಮಾರು 200 ಸಭೆಗಳನ್ನು ದೇಶಾದ್ಯಂತ 60 ನಗರಗಳಲ್ಲಿ ಆಯೋಜಿಸಲಾಗಿದೆ. 18ನೇ ಜಿ20 ಶೃಂಗಸಭೆಯು ಭಾರತದ ಮೃದು ಶಕ್ತಿ ಮತ್ತು ಆಧುನಿಕ ಮುಖ ಎರಡನ್ನೂ ಪ್ರದರ್ಶಿಸುವ ಮೂಲ ಉದ್ದೇಶವನ್ನು ಈ ಶೃಂಗಸಭೆ ಹೊಂದಿದ್ದು, ವ್ಯಾಪಕ ಸಿದ್ಧತೆ ಮತ್ತು ವ್ಯವಸ್ಥೆಗಳನ್ನು ಮಾಡಲಾಗಿದೆ. ಮುಂದಿನ 2024ರ ಜಿ-20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ವಹಿಸಿಕೊಳ್ಳಲಿದ್ದು, 2025ರ ಅಧ್ಯಕ್ಷ ಸ್ಥಾನವನ್ನು ದಕ್ಷಿಣ ಆಫ್ರಿಕಾ ವಹಿಸಿಕೊಳ್ಳಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.