Sri Lankan PM Resigns: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ನಂತರ, ಪರಿಸ್ಥಿತಿ ಉದ್ವಿಗ್ನವಾಗಿದೆ ಮತ್ತು ದೇಶದಾದ್ಯಂತ ತುರ್ತುಸ್ಥಿತಿ ಜಾರಿಯಲ್ಲಿದೆ. ಏತನ್ಮಧ್ಯೆ, ಭಾರೀ ಪ್ರತಿಭಟನೆಯ ನಂತರ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರ ಕಚೇರಿಯ ಹೊರಗೆ ರಾಜಪಕ್ಸೆ ಬೆಂಬಲಿಗರು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ ನಂತರ ರಾಜಧಾನಿ ಕೊಲಂಬೊದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ: ಈ ಹಳ್ಳಿಯ ಜನರು ಮಲಗಿದರೆ ತಿಂಗಳಾನುಗಟ್ಟಲೆ ಏಳುವುದೇ ಇಲ್ಲವಂತೆ.! ಕಾರಣ ?
ಪ್ರತಿಭಟನಾಕಾರರ ಮೇಲೆ ರಾಜಪಕ್ಸೆ ಬೆಂಬಲಿಗರು ನಡೆಸಿದ ದಾಳಿಯಲ್ಲಿ 78ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶ್ರೀಲಂಕಾದ ಅಧಿಕಾರಿಗಳು ಸೋಮವಾರ ದೇಶಾದ್ಯಂತ ಕರ್ಫ್ಯೂ ವಿಧಿಸಿದರು ಮತ್ತು ಇತರ ಇಬ್ಬರು ಕ್ಯಾಬಿನೆಟ್ ಮಂತ್ರಿಗಳು ಸಹ ತಮ್ಮ ರಾಜೀನಾಮೆಯನ್ನು ಘೋಷಿಸಿದರು.
ರಾಜಪಕ್ಸೆ ಅವರ ಬೆಂಬಲಿಗರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಜನರ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲಂಬೊದಲ್ಲಿರುವ ಪ್ರಧಾನಿಯವರ ಅಧಿಕೃತ ನಿವಾಸವಾದ ಟೆಂಪಲ್ ಟ್ರೀಸ್‌ನಲ್ಲಿ ಜಮಾಯಿಸಿದ ರಾಜಪಕ್ಸೆ ಬೆಂಬಲಿಗರು ಮಹಿಂದಾ ರಾಜಪಕ್ಸೆ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಇದೇ ವೇಳೆ ರಾಷ್ಟ್ರಪತಿಗಳು ಹಿಂಸಾಚಾರದ ಘಟನೆಗಳನ್ನು ಖಂಡಿಸಿದ್ದಾರೆ.
ಪ್ರಧಾನಿ ಮಹಿಂದ ಅವರು ತಮ್ಮ ರಾಜೀನಾಮೆಯನ್ನು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರಿಗೆ ಕಳುಹಿಸಿದ್ದಾರೆ. ಶ್ರೀಲಂಕಾ 1948 ರಲ್ಲಿ ಬ್ರಿಟನ್‌ನಿಂದ ಸ್ವಾತಂತ್ರ್ಯ ಪಡೆದ ನಂತರ ಅತ್ಯಂತ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪ್ರಮುಖವಾಗಿ ವಿದೇಶಿ ವಿನಿಮಯದ ಕೊರತೆಯಿಂದಾಗಿ ಈ ಬಿಕ್ಕಟ್ಟು ಉದ್ಭವಿಸಿದೆ. ದೇಶವು ಆಹಾರ ಪದಾರ್ಥಗಳು ಮತ್ತು ಇಂಧನಗಳ ಆಮದನ್ನು ಪಾವತಿಸಲು ಸಹ ಸಾಧ್ಯವಾಗುತ್ತಿಲ್ಲ.
ಇದನ್ನೂ ಓದಿ: Russia-Ukraine war: ಉಕ್ರೇನ್ ಶಾಲೆ ಮೇಲೆ ರಷ್ಯಾ ಬಾಂಬ್ ದಾಳಿ, ಇಬ್ಬರ ಸಾವು
ಏಪ್ರಿಲ್ 9 ರಿಂದ, ಶ್ರೀಲಂಕಾದಾದ್ಯಂತ ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಏಕೆಂದರೆ ಸರ್ಕಾರದ ಬಳಿ ಆಮದು ಮಾಡಿಕೊಳ್ಳಲು ಹಣವಿಲ್ಲ. ಈ ಕಾರಣದಿಂದ ಜನ ಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇದರೊಂದಿಗೆ ಮೂಲಭೂತ ವಸ್ತುಗಳ ಕೊರತೆಯೂ ಕಂಡು ಬಂದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.