ಕೊಲಂಬೋ: ಈಸ್ಟರ್ ಆಚರಣೆ ವೇಳೆ ಶ್ರೀಲಂಕಾ ರಾಜಧಾನಿಯಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್​​ ದಾಳಿ ಹಿನ್ನೆಲೆಯಲ್ಲಿ  ಸೋಮವಾರ ಮಧ್ಯರಾತ್ರಿಯಿಂದ ಕೊಲೊಂಬೊದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಅಧ್ಯಕ್ಷರ ಕಚೇರಿ ತಿಳಿಸಿದೆ.


COMMERCIAL BREAK
SCROLL TO CONTINUE READING

ಭಾನುವಾರ ಈಸ್ಟರ್​ ಪ್ರಾರ್ಥನೆ ವೇಳೆ  ಕೊಲಂಬೋದ ಚರ್ಚ್​ ಹಾಗೂ ಸ್ಟಾರ್​ ಹೋಟೆಲ್​ಗಳಲ್ಲಿ ಬಾಂಬ್​​ ಸರಣಿ ಸ್ಫೋಟ ಸಂಭವಿಸಿತ್ತು. ಒಟ್ಟು ಎಂಟು ಕಡೆಗಳಲ್ಲಿ ಬಾಂಬ್​ ಸ್ಫೋಟವಾಗಿತ್ತು. ಈ ವೇಳೆ 450ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಕೆಲವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 290ಕ್ಕೆ ಏರಿಕೆ ಆಗಿದೆ. ಸಾವಿನ ಸಂಖ್ಯೆ 300 ದಾಟುವ ಸಾಧ್ಯತೆ ಇದೆ ಎನ್ನಲಾಗಿದೆ.  


ಶ್ರೀಲಂಕಾ ದಾಳಿ ಹಿಂದೆ ನ್ಯಾಷನಲ್​ ತವ್​ಹೀದ್​ ಜಮಾತ್​ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ದಾಳಿಯಲ್ಲಿ ಸ್ಥಳೀಯರೂ ಸೇರಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ಹೇಳಿದೆ. ಅಲ್ಲದೆ, 
ಈ ರೀತಿ ದಾಳಿ ನಡೆಯುವ ಬಗ್ಗೆ ಏ.4ರಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತಾದರೂ ಉಆವುದೇ ಮುನ್ನೆಚ್ಚರಿಕಾ ಕರ್ಮ ಕೈಗೊಂಡಿರಲಿಲ್ಲ ಎಂದು ಸರ್ಕಾರ ಒಪ್ಪಿಕೊಂಡಿದೆ.


ಶ್ರೀಲಂಕಾದಲ್ಲಿ ಬಾಂಬ್​ ದಾಳಿ ನಡೆದ ಹಿನ್ನೆಲೆಯಲ್ಲಿ ಭಾರತದ ಕರಾವಳಿ ತೀರದಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ.