ಕೊಲಂಬೊ: ಶ್ರೀಲಂಕಾದ ರಾಜಧಾನಿಯಲ್ಲಿರುವ ಅಧ್ಯಕ್ಷ ಗೋತಬಯ ರಾಜಪಕ್ಸೆ ಅಧಿಕೃತ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ಮುತ್ತಿಗೆ ಹಾಕಿದ ಕೆಲವೇ ಗಂಟೆಗಳ ನಂತರ, ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಲು ಶನಿವಾರದಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಜುಲೈ 13 ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಾಜಪಕ್ಸೆ ತಿಳಿಸಿದ್ದಾರೆ ಎಂದು ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಅವರು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ ಎಂದು ಶ್ರೀಲಂಕಾದ ಸುದ್ದಿವಾಹಿನಿ ನ್ಯೂಸ್‌ವೈರ್ ವರದಿ ಮಾಡಿದೆ. ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ.


ಇದನ್ನೂ ಓದಿ: ಶ್ರೀಲಂಕಾ ಬಿಕ್ಕಟ್ಟಿನ ನಿವಾರಣೆ ರಾಜಕೀಯ ಪ್ರಬುದ್ಧತೆಯ ಪ್ರತೀಕ ಎಂದ ಭಾರತ


ಇದಕ್ಕೂ ಮೊದಲು, ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಅಬೇವರ್ಧನೆ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಹಂಗಾಮಿ ಅಧ್ಯಕ್ಷರನ್ನು ನೇಮಿಸಲು ಏಳು ದಿನಗಳಲ್ಲಿ ಸಂಸತ್ತನ್ನು ಕರೆಯಬೇಕು ಎಂದು ತಿಳಿಸಿದ್ದರು ಎಂದು ಡೈಲಿ ಮಿರರ್ ವರದಿ ಮಾಡಿದೆ. ನೂತನ ಪ್ರಧಾನಿಯೊಂದಿಗೆ ನೂತನ ಸರ್ವಕಾರವನ್ನು ರಚಿಸಬೇಕು ಮತ್ತು ನಿರ್ದಿಷ್ಟ ಅವಧಿಯ ನಂತರ ಸಾರ್ವತ್ರಿಕ ಚುನಾವಣೆ ನಡೆಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.ಗೋಟಾಬಯ ರಾಜಪಕ್ಸೆ ಅವರು ಸ್ಥಳದಲ್ಲಿ ಇರಲಿಲ್ಲ ಮತ್ತು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.


ಇದನ್ನೂ ಓದಿ: ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ರಾಜೀನಾಮೆ


ಇನ್ನೊಂದೆಡೆಗೆ ಮೇ ತಿಂಗಳಲ್ಲಿ ಪ್ರಧಾನಿಯಾಗಿ ನೇಮಕಗೊಂಡ ವಿಕ್ರಮಸಿಂಘೆ ಅವರು ಸರ್ಕಾರದ ಮುಂದುವರಿಕೆ ಮತ್ತು ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.ಈ ಕುರಿತಾಗಿ ಟ್ವೀಟ್ ಮಾಡಿರುವ ವಿಕ್ರಮಸಿಂಘೆ" ಎಲ್ಲಾ ನಾಗರಿಕರ ಸುರಕ್ಷತೆ ಸೇರಿದಂತೆ ಸರ್ಕಾರದ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು, ಸರ್ವಪಕ್ಷ ಸರ್ಕಾರಕ್ಕೆ ದಾರಿ ಮಾಡಿಕೊಡಲು ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸುಗಳನ್ನು ನಾನು ಇಂದು ಸ್ವೀಕರಿಸುತ್ತೇನೆ. ಇದಕ್ಕೆ ಅನುಕೂಲವಾಗುವಂತೆ ನಾನು ಪ್ರಧಾನಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಅವರು ಬರೆದುಕೊಂಡಿದ್ದಾರೆ.


ಏತನ್ಮಧ್ಯೆ, ಶ್ರೀಲಂಕಾದ ಸಂಸದ ಹರ್ಷ ಡಿ ಸಿಲ್ವಾ ಅವರು ಅಧ್ಯಕ್ಷರು ಮತ್ತು ಪ್ರಧಾನಿಯವರ ರಾಜೀನಾಮೆ ಮತ್ತು ಸ್ಪೀಕರ್ ಗರಿಷ್ಠ 30 ದಿನಗಳ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಪಕ್ಷದ ಬಹುತೇಕ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಇನ್ನುಳಿದ ಅವಧಿಗೆ ಸಂಸದರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಬಗ್ಗೆಯೂ ನಾಯಕರು ಒಪ್ಪಿಗೆ ಸೂಚಿಸಿದ್ದು, ಸಂಸತ್ತಿನಿಂದಲೇ ಆಯ್ಕೆಯಾಗಲಿದೆ ಎಂದರು.ಮುಂದಿನ ಕೆಲವು ದಿನಗಳಲ್ಲಿ ಸರ್ವಪಕ್ಷದ ಮಧ್ಯಂತರ ಸರ್ಕಾರವನ್ನು ನೇಮಿಸಲಾಗುವುದು ಎಂದು ಅವರು ಹೇಳಿದರು.


ಇದನ್ನೂ ಓದಿ: ಮಹಿಂದಾ ರಾಜಪಕ್ಸೆ ಶ್ರೀಲಂಕಾದ ಅಧಿಕೃತ ಪ್ರಧಾನಿಯಲ್ಲ ಎಂದ ಸ್ಪೀಕರ್!


ಇದಕ್ಕೂ ಮೊದಲು, ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಪರಿಸ್ಥಿತಿಯನ್ನು ಚರ್ಚಿಸಲು ಮತ್ತು ತ್ವರಿತ ನಿರ್ಣಯಕ್ಕೆ ಬರಲು ತುರ್ತು ಪಕ್ಷದ ನಾಯಕರ ಸಭೆಯನ್ನು ಕರೆದರು.ದೇಶದಲ್ಲಿ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯು ಹೆಚ್ಚುತ್ತಿರುವ ಉದ್ವಿಗ್ನತೆಗೆ ಕಾರಣವಾಗಿದೆ ಮತ್ತು ಕಳೆದ ಕೆಲವು ವಾರಗಳಲ್ಲಿ, ವ್ಯಕ್ತಿಗಳು ಮತ್ತು ಪೊಲೀಸ್ ಪಡೆ ಮತ್ತು ಸಶಸ್ತ್ರ ಪಡೆಗಳ ನಡುವೆ ಘರ್ಷಣೆಗಳು ನಡೆಯುತ್ತಿವೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ