Sri Lanka Protest: ಶ್ರೀಲಂಕಾದ ಕೋಲಾಹಲದ ನಡುವೆ ಸಾರ್ವಜನಿಕವಾಗಿ ಚುಂಬಿಸಿದ ದಂಪತಿ..!
ಶ್ರೀಲಂಕಾದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಪ್ರತಿಭಟನಾಕಾರರು ಪ್ರಧಾನಿ ನಿವಾಸದ ಹೊರಗೆ ಗದ್ದಲವನ್ನು ಸೃಷ್ಟಿಸಿದ್ದಾರೆ. ಇದೇ ವೇಳೆ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವುದು ಕಂಡುಬಂದ್ದು, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವದೆಹಲಿ: ಶ್ರೀಲಂಕಾದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರು ದೇಶವನ್ನು ತೊರೆದು ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದಾರೆ. ಇದಾದ ಬಳಿಕ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಪರಿಣಾಮ ಅಲ್ಲಿ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಿದ್ದು, ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ದ್ವೀಪ ರಾಷ್ಟ್ರದ ಹದಗೆಟ್ಟ ಪರಿಸ್ಥಿತಿಯನ್ನು ನೋಡಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕಾಯಿತು. ಏತನ್ಮಧ್ಯೆ, ಸಾಮಾಜಿಕ ಮಾಧ್ಯಮದಲ್ಲಿ ಫೋಟೋವೊಂದು ಸಖತ್ ವೈರಲ್ ಆಗುತ್ತಿದೆ, ಈ ಫೋಟೋದಲ್ಲಿ ಜೋಡಿಯೊಂದು ಸಾರ್ವಜನಿಕವಾಗಿ ಚುಂಬಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್
ನ್ಯೂಸ್‌ವೈರ್ ಈ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಈ ಚಿತ್ರವನ್ನು ಹಂಚಿಕೊಳ್ಳುತ್ತಾ, ʼCouples Goals!ʼ ಎಂಬ ಶೀರ್ಷಿಕೆ ಬರೆಯಲಾಗಿದೆ! ಕೊಲಂಬೊದಲ್ಲಿನ ಪ್ರಧಾನ ಮಂತ್ರಿ ಕಚೇರಿಯನ್ನು ಸ್ವಾಧೀನಪಡಿಸಿಕೊಳ್ಳಲು ಕಾರಣವಾದ ಸರ್ಕಾರಿ ವಿರೋಧಿ ಪ್ರತಿಭಟನೆಯ ವೇಳೆ ಈ ದಂಪತಿ ಈ ರೀತಿ ಸಾರ್ವಜನಿಕವಾಗಿ ಚುಂಬಿಸುತ್ತಿರುವುದು ಕಂಡುಬಂದಿದೆ. ಬಳಿಕ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಖತ್ ಸೌಂಡ್ ಮಾಡುತ್ತಿದೆ.
ಅಧ್ಯಕ್ಷ ರಾಜಪಕ್ಸೆ ಪಲಾಯನ.. ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಹೊಸ ಸರ್ಕಾರ ಆಯ್ಕೆ ಮಾಡುವಂತೆ ಸಂಸತ್ತಿನ ಸ್ಪೀಕರ್‌ಗೆ ಮನವಿ
ಶ್ರೀಲಂಕಾದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ, ಹಂಗಾಮಿ ಅಧ್ಯಕ್ಷ ಮತ್ತು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಬುಧವಾರ ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಭಯವರ್ಧನೆಗೆ ಸರ್ಕಾರ ಮತ್ತು ವಿರೋಧ ಪಕ್ಷಗಳಿಗೆ ಸ್ವೀಕಾರಾರ್ಹ ಪ್ರಧಾನಿಯನ್ನು ನಾಮನಿರ್ದೇಶನ ಮಾಡುವಂತೆ ಕೇಳಿಕೊಂಡಿದ್ದಾರೆ. ವಿಕ್ರಮಸಿಂಘೆ ಅವರು ತಮ್ಮ ಕಚೇರಿಯಲ್ಲಿ ಕ್ಯಾಬಿನೆಟ್ ಸದಸ್ಯರೊಂದಿಗೆ ಸಭೆ ನಡೆಸಿದರು ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಸರ್ವಪಕ್ಷ ಸರ್ಕಾರ ರಚನೆಗೆ ಒಪ್ಪಿಗೆ ಸಿಕ್ಕ ತಕ್ಷಣ ಹೊಸ ಸರ್ಕಾರಕ್ಕೆ ಜವಾಬ್ದಾರಿ ಹಸ್ತಾಂತರಿಸುತ್ತೇವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸಚಿವರು ಅಭಿಪ್ರಾಯಪಟ್ಟಿದ್ದಾರೆ ಎಂದು ಅದು ಹೇಳಿದೆ.
ರಾಜಪಕ್ಸೆ ಸಿಂಗಾಪುರಕ್ಕೆ ತೆರಳಬಹುದು
ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರ ರಾಜೀನಾಮೆಗೂ ಮುಂಚಿತವಾಗಿ ವಿಕ್ರಮಸಿಂಘೆ ಅವರು ಕೆಳಗಿಳಿಯುವ ಒತ್ತಡದಲ್ಲಿದ್ದಾರೆ. ಮಾಲ್ಡೀವ್ಸ್ ನಿಂದ ರಾಜಪಕ್ಸೆ ಸಿಂಗಾಪುರಕ್ಕೆ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಿಕ್ರಮಸಿಂಘೆ ಅವರ ಕಚೇರಿಯನ್ನು ಪ್ರವೇಶಿಸಿದ ಪ್ರತಿಭಟನಾಕಾರರು ಸಂಸತ್ ಭವನದ ಸಂಕೀರ್ಣವನ್ನು ಪ್ರವೇಶಿಸಲು ಪ್ರಯತ್ನಿಸಿದರು. ಸಂಸತ್ತಿನ ಸ್ಪೀಕರ್ ಅವರ ಅಧಿಕೃತ ನಿವಾಸದ ಬಳಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ರಾಣಿಲ್ ವಿಕ್ರಂಸಿಂಘೆ ನೇಮಕ
ಪ್ರತಿಭಟನಾಕಾರರಿಂದ ಪ್ರಧಾನಿ ಕಚೇರಿಗೆ ಮುತ್ತಿಗೆ
ಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿರುವುದು ಅಲ್ಲಿನ ಜನರನ್ನು ರೋಚ್ಚಿಗೆಬ್ಬಿಸಿದೆ. ಸರ್ಕಾರದ ವಿರುದ್ಧ ಪ್ರತಿಭಟನೆಯ್ಲಿ ಪಾಲ್ಗೊಂಡಿದ್ದ ಯುವಕನೊಬ್ಬ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದ. ಬೆಳಗ್ಗೆ ಪ್ರಧಾನಿ ಕಚೇರಿಗೆ ನುಗ್ಗಿದ ಗುಂಪಿನಲ್ಲಿ ಈ ಯುವಕನು ಇದ್ದ. ಈ ಘಟನೆಯಲ್ಲಿ 35 ಮಂದಿ ಗಾಯಗೊಂಡಿದ್ದಾರೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಸೇರಿ ಸರ್ವಪಕ್ಷ ಸರ್ಕಾರ ರಚಿಸಬೇಕು ಎಂದು ಪ್ರಧಾನಿಯವರ ಮಾಧ್ಯಮ ವಿಭಾಗ ಹೇಳಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.