Earthquake in California: ಯುನೈಟೆಡ್ ಸ್ಟೇಟ್ಸ್ ನ ಕ್ಯಾಲಿಫೋರ್ನಿಯಾದ ಕರಾವಳಿ ಭಾಗದಲ್ಲಿ ಗುರುವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ ಎಂದು ಯುಎಸ್ ಭೂಕಂಪಶಾಸ್ತ್ರಜ್ಞರು ತಿಳಿಸಿದ್ದಾರೆ.
ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ, ಪೆಸಿಫಿಕ್ ಮಹಾಸಾಗರದಲ್ಲಿರುವ ಹಂಬೋಲ್ಟ್ ಕೌಂಟಿಯ ಕರಾವಳಿಯ ಸಣ್ಣ ಪಟ್ಟಣವಾದ ಫರ್ಂಡೇಲ್‌ನ ಪಶ್ಚಿಮ-ನೈಋತ್ಯಕ್ಕೆ ಸುಮಾರು 100 ಕಿಲೋಮೀಟರ್ ಆಳದಲ್ಲಿ ಲಘು ಭೂಕಂಪದ ಅನುಭವವಾಗಿದೆ ಎಂದು ಯುಎಸ್‌ಜಿಎಸ್ ದೃಢಪಡಿಸಿದೆ.
A strong earthquake was felt widely across Northern California on Thursday, and some residents along its coast were urged to evacuate inland due to the threat of a possible tsunami.
The quake struck at 10:44 am (local time) west of Ferndale, a small city in coastal Humboldt…
— ANI (@ANI) December 5, 2024
ಇದನ್ನೂ ಓದಿ- ಕರ್ನಾಟಕದ ನೆರೆಯ ರಾಜ್ಯದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲು
ಸುನಾಮಿ ಎಚ್ಚರಿಕೆ:
ಯುಎಸ್ ನ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿರುವ ಈ ಭೂಕಂಪದ ಕೇಂದ್ರ ಬಿಂದು ಫರ್ಂಡೇಲ್‌ನಿಂದ ಪಶ್ಚಿಮ ನೈಋತ್ಯಕ್ಕೆ 100 ಕಿಲೋಮೀಟರ್ ದೂರದಲ್ಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಸಾಗರದಲ್ಲಿ ಸುನಾಮಿ ಅಪಾಯದ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಸಮುದ್ರದಲ್ಲಿ ಇನ್ನೂ ಕೂಡ ಯಾವುದೇ ಪ್ರಬಲ ಅಲೆಗಳು ಕಾಣಿಸಿಕೊಂಡಿಲ್ಲ. ಆದರೂ, ಮುಂಜಾಗ್ರತಾ ಕ್ರಮವಾಗಿ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸುನಾಮಿ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ- ಇದು ವಿಶ್ವ ವಿನಾಶದ ಮೊದಲ ಸೂಚನೆ..! ಮರುಭೂಮಿಯಲ್ಲಿ 35 ಮೈಲಿ ಉದ್ದದ ಬಿರುಕು.. ವಿಜ್ಞಾನಿಗಳಿಂದ ಬಯಲಾಯ್ತು ಸತ್ಯ
ಹೊನೊಲುಲು ಮೂಲದ ರಾಷ್ಟ್ರೀಯ ಹವಾಮಾನ ಸೇವಾ ಇಲಾಖೆಯ ಪ್ರಕಾರ, ಭೂಕಂಪದ ಕೇಂದ್ರ ಬಿಂದುವಿನಿಂದ ಸುಮಾರು 300 ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಪಾಯಕಾರಿ ಸುನಾಮಿ ಏಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮಧ್ಯೆ ನೀರಿನೊಳಗೆ ಭೂಕಂಪದ ವಿಡಿಯೋ ಸಖತ್ ವೈರಲ್ ಆಗುತ್ತಿದೆ.
The moment when scuba divers recorded a 7.2 magnitude earthquake / Tsunami underwater near California.#BREAKING #earthquakepic.twitter.com/GgMHmUCbst
— Target Reporter (@Target_Reporter) December 5, 2024
ಮತ್ತೊಂದು ವಿಡಿಯೋದಲ್ಲಿ, ಗುರುವಾರ ಹಂಬೋಲ್ಟ್ ಕೌಂಟಿಯಲ್ಲಿ 7.0 ತೀವ್ರತೆಯ ಭೂಕಂಪ ಸಂಭವಿಸುತ್ತಿದ್ದಂತೆ ಉತ್ತರ ಕ್ಯಾಲಿಫೋರ್ನಿಯಾದ ಪರವಾನಗಿ ಪಡೆದ ಗ್ರೋ ಹೌಸ್‌ನ ಭದ್ರತಾ ಕ್ಯಾಮರಾ ದೃಶ್ಯಾವಳಿಗಳಲ್ಲಿ ಗಾಂಜಾ ಸಸ್ಯಗಳು ಅಲುಗಾಡುತ್ತಿರುವುದನ್ನು ಕಾಣಬಹುದಾಗಿದೆ.
Security camera footage from a licensed grow house in Northern California shows flowering cannabis plants shaking as a 7.0 earthquake struck Humboldt County on Thursday. https://t.co/nxbfNid3At pic.twitter.com/QUuu13xQAv
— ABC News (@ABC) December 5, 2024
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.