ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ತನ್ನ ಸರ್ಕಾರವನ್ನು ಘೋಷಿಸಿದೆ. ಇದರೊಂದಿಗೆ, ತಾಲಿಬಾನ್‌ನ ಪರಮೋಚ್ಛ ನಾಯಕ ಹಿಬತುಲ್ಲಾ ಅಖುಂಡಜಾದ  ಹೇಳಿಕೆ ಮುನ್ನೆಲೆಗೆ ಬಂದಿದೆ. ತಾಲಿಬಾನ್ ತನ್ನ ಸರ್ವೋಚ್ಚ ನಾಯಕನ ಮೊದಲ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಭವಿಷ್ಯದ ಅಫ್ಘಾನಿಸ್ತಾನವು ತಾಲಿಬಾನ್ ಆಳ್ವಿಕೆಯಲ್ಲಿ ಹೇಗೆ ಇರುತ್ತದೆ ಎಂದು ಹೇಳಲಾಗಿದೆ. ಹೊಸ ಸರ್ಕಾರ ಶೀಘ್ರದಲ್ಲೇ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಮತ್ತು ಶರಿಯಾ ಕಾನೂನನ್ನು ಉಳಿಸಿಕೊಳ್ಳಲಾಗುವುದು ಎಂದು  ಹಿಬತುಲ್ಲಾ ಅಖುಂಡಜಾದ (Hibatullah Akhundzada) ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಮಾನವ ಹಕ್ಕುಗಳನ್ನು ರಕ್ಷಿಸುವ ಭರವಸೆ: 
ಇಸ್ಲಾಮಿಕ್ ಕಾನೂನಿಗೆ ವಿರುದ್ಧವಲ್ಲದ ಎಲ್ಲಾ ಅಂತರಾಷ್ಟ್ರೀಯ ಕಾನೂನುಗಳು, ಒಪ್ಪಂದಗಳು ಮತ್ತು ನಿರ್ಣಯಗಳಿಗೆ ತಾಲಿಬಾನ್ ಬದ್ಧವಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಶರಿಯಾ ಚೌಕಟ್ಟಿನೊಳಗೆ ಎಲ್ಲಾ ದೇಶವಾಸಿಗಳಿಗೆ ಧಾರ್ಮಿಕ ಮತ್ತು ಆಧುನಿಕ ವಿಜ್ಞಾನಕ್ಕೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ತಾಲಿಬಾನ್ (Taliban) ಒದಗಿಸುತ್ತದೆ. ಅದೇ ಸಮಯದಲ್ಲಿ, ಇಸ್ಲಾಂನ ವ್ಯಾಪ್ತಿಯಲ್ಲಿ ಮಾನವ ಹಕ್ಕುಗಳು, ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ಹಿಂದುಳಿದ ಜನರ ಹಕ್ಕುಗಳನ್ನು ರಕ್ಷಿಸಲು ತಾಲಿಬಾನ್ ಗಂಭೀರ ಮತ್ತು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಭರವಸೆ ನೀಡಲಾಗಿದೆ.


ಇದನ್ನೂ ಓದಿ- Amrullah Saleh: ಪಂಜ್‌ಶಿರ್ ಪಡೆಯ ನೇತೃತ್ವ ವಹಿಸಿದ ಅಮೃಲ್ಲಾ ಸಲೇಹ್, ಈ ವಿಶೇಷ ತಂತ್ರದಿಂದ ತಾಲಿಬಾನ್ ಮೇಲೆ ದಾಳಿ


ವಿದೇಶಿ ರಾಜತಾಂತ್ರಿಕರು ಭಯಪಡುವ ಅಗತ್ಯವಿಲ್ಲ: 
ತಾಲಿಬಾನ್ ಆಳ್ವಿಕೆಯಲ್ಲಿ ಅಫಘಾನ್ (Afghan Govt) ಮಣ್ಣನ್ನು ಬೇರೆ ಯಾವುದೇ ದೇಶದ ಭದ್ರತೆಗೆ ವಿರುದ್ಧವಾಗಿ ಬಳಸುವುದಿಲ್ಲ ಎಂದು ತಾಲಿಬಾನ್‌ನ ಸರ್ವೋಚ್ಚ ನಾಯಕ ಸ್ಪಷ್ಟಪಡಿಸಿದ್ದಾರೆ. ಎಲ್ಲಾ ವಿದೇಶಿ ರಾಜತಾಂತ್ರಿಕರು, ರಾಯಭಾರ ಕಚೇರಿಗಳು, ದೂತಾವಾಸಗಳು, ಮಾನವೀಯ ಸಂಘಟನೆಗಳು ಮತ್ತು ಹೂಡಿಕೆದಾರರಿಗೆ ಅಫ್ಘಾನಿಸ್ತಾನದಲ್ಲಿ ಸುರಕ್ಷಿತ ವಾತಾವರಣವನ್ನು ಒದಗಿಸಲಾಗುವುದು ಎಂದು ಹಿಬತುಲ್ಲಾ ಅಖುಂಡಜಾದ ತನ್ನ ಹೇಳಿಕೆಯಲ್ಲಿ ಭರವಸೆ ನೀಡಿದ್ದಾರೆ.  


ಅಫ್ಘಾನ್ ಜನರಿಗೆ ತಾಲಿಬಾನ್ ಮನವಿ:
ವೈದ್ಯರು, ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಂತಹ ಪ್ರತಿಭಾವಂತ ಮತ್ತು ವೃತ್ತಿಪರರಿಗೆ ಸರ್ಕಾರವು ಪ್ರಾಮುಖ್ಯತೆಯನ್ನು ನೀಡುತ್ತದೆ. ದೇಶದ ಅಭಿವೃದ್ಧಿಗೆ ಅವರ ಅಗತ್ಯವಿದೆ ಎಂದು ತಾಲಿಬಾನ್ ನಾಯಕ ಹಿಬತುಲ್ಲಾ ಅಖುಂಡಜಾದ (Taliban Leader Hibatullah Akhundzada) ಹೇಳಿದ್ದಾರೆ. ಇದರೊಂದಿಗೆ ದೇಶವನ್ನು ತೊರೆಯದಂತೆ  ತಾಲಿಬಾನ್ ಜನರಿಗೆ ಮನವಿ ಮಾಡಿದೆ. ತಾಲಿಬಾನ್ ಆಳ್ವಿಕೆಯಲ್ಲಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಹಾಗಾಗಿ ಯಾರೂ ಅಫ್ಘಾನಿಸ್ತಾನವನ್ನು ತೊರೆಯುವ ಅಗತ್ಯವಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸರ್ವೋಚ್ಚ ನಾಯಕನ ಹೇಳಿಕೆಯಲ್ಲಿ, ಮಾಧ್ಯಮದ ಸ್ವಾತಂತ್ರ್ಯದ ಬಗ್ಗೆ ಮಾತನಾಡಲಾಗಿದೆ, ಆದರೆ ಇದು ಇಸ್ಲಾಂನ ಬೋಧನೆಗಳನ್ನು ಹರಡಬೇಕಿದೆ ಎಂದು ಸ್ಪಷ್ಟಪಡಿಸಿದೆ.


ಇದನ್ನೂ ಓದಿ- Afghanistan Crisis: ಕಾಬೂಲ್ ನಲ್ಲಿ 'ಪಾಕಿಸ್ತಾನ್ ಮುರ್ದಾಬಾದ್' ಘೋಷಣೆ, ರೊಚ್ಚಿಗೆದ್ದ ತಾಲಿಬಾನನಿಂದ ಮಹಿಳೆಯರ ಮೇಲೆ ಗೋಲಿಬಾರ್


ತಾಲಿಬಾನ್ ಶಾಂತಿಯುತ, ಸಮೃದ್ಧ ಮತ್ತು ಸ್ವಾವಲಂಬಿ ಅಫ್ಘಾನಿಸ್ತಾನವನ್ನು ಬಯಸುತ್ತದೆ:
ಬಂದೂಕುಗಳ ಆಧಾರದ ಮೇಲೆ ಅಧಿಕಾರವನ್ನು ಪಡೆದ ತಾಲಿಬಾನ್ ತನ್ನ ಹೇಳಿಕೆಯಲ್ಲಿ, ತಾಲಿಬಾನ್ ಶಾಂತಿಯುತ, ಸಮೃದ್ಧ ಮತ್ತು ಸ್ವಾವಲಂಬಿ ಅಫ್ಘಾನಿಸ್ತಾನವನ್ನು ಬಯಸುತ್ತದೆ. ಏಕೆಂದರೆ ದೇಶದಲ್ಲಿ ಯುದ್ಧ ಮತ್ತು ಸಂಘರ್ಷದ ಎಲ್ಲಾ ಕಾರಣಗಳನ್ನು ತೊಡೆದುಹಾಕಲು ಈ ಪ್ರಯತ್ನಗಳನ್ನು ಮಾಡಲಾಗುವುದು. ಇದರಿಂದ ದೇಶವಾಸಿಗಳು ಸಂಪೂರ್ಣ ಸುರಕ್ಷತೆ ಮತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ. ಹೊಸ ಸರ್ಕಾರವು ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತದೆ ಮತ್ತು ಅದಕ್ಕಾಗಿ ನಾವು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದು ತಾಲಿಬಾನ್ ನಾಯಕ ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.