ನವದೆಹಲಿ: 2016-17ರಲ್ಲಿ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚಿನ ಭದ್ರತೆಯ ನಡುವೆ ಮಲಿಕ್ ಅವರನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪರ್ವೀನ್ ಸಿಂಗ್ ಅವರ ಮುಂದೆ ಹಾಜರುಪಡಿಸಲಾಯಿತು. 10 ಲಕ್ಷ ರೂ. ದಂಡದ ಜೊತೆಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ದೆಹಲಿಯ ಎನ್ಐಎ ಕೋರ್ಟ್ ಮೇ 19ರಂದು ಯಾಸಿನ್ ಮಲಿಕ್ ತಪ್ಪಿತಸ್ಥ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಇದಕ್ಕೂ ಮುನ್ನ ಮಲಿಕ್ಗೆ ಮರಣದಂಡನೆ ವಿಧಿಸುವಂತೆ NIA ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ ನ್ಯಾಯಾಲಯ ನೇಮಿಸಿದ ಅಮಿಕಸ್ ಕ್ಯೂರಿ, ಮರಣದಂಡನೆ ಬದಲು ಜೀವಾವಧಿ ಶಿಕ್ಷೆ ನೀಡುವಂತೆ ಕೋರಿದ್ದರು.
ಇದನ್ನೂ ಓದಿ: Viral Image: ಬರೋಬ್ಬರಿ 11 ಲಕ್ಷ ಖರ್ಚು ಮಾಡಿ ನಾಯಿಯಂತಾದ ವ್ಯಕ್ತಿ!
ಮೇ 10ರಂದು ಕಟ್ಟುನಿಟ್ಟಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ಎಲ್ಲಾ ಆರೋಪಗಳಿಗೆ ಮಲಿಕ್ ತಪ್ಪೊಪ್ಪಿಕೊಂಡಿದ್ದರು. ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (JKLF) ಮುಖ್ಯಸ್ಥ ಮಲಿಕ್ 2016ರಲ್ಲಿ ಹಿಂಸಾತ್ಮಕ ಪ್ರತಿಭಟನೆಗಳನ್ನು ಆಯೋಜಿಸಿದ್ದಾರೆ ಎಂದು ಎನ್ಐಎ ಆರೋಪಿಸಿದೆ. ಈ ಪೈಕಿ 89 ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿವೆ. ತಮಗೆ ನೀಡುವ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಬಿಡುತ್ತಿದ್ದೇನೆಂದು ಮಲಿಕ್ ನ್ಯಾಯಾಧೀಶರಿಗೆ ತಿಳಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಅಂತಿಮವಾಗಿ ಜೀವಾವಧಿ ಶಿಕ್ಷೆ ನೀಡಿದೆ.
ಮಲಿಕ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, ಹಿಜ್ಬ್-ಉಲ್-ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯ ಲೆಟರ್ ಹೆಡ್ ನ ಪ್ರತಿ ಸಿಕ್ಕಿದೆ ಎಂದು ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿತ್ತು. ವಿವಿಧ ಭಯೋತ್ಪಾದಕ ಸಂಘಟನೆಗಳು ಸಹಿ ಮಾಡಿದ ಲೆಟರ್ಹೆಡ್ನಲ್ಲಿ ಕಣಿವೆಯಲ್ಲಿ ಫುಟ್ಬಾಲ್ ಪಂದ್ಯಾವಳಿಗಳನ್ನು ಬೆಂಬಲಿಸುವ ಜನರು ಆಟದ ಸಂಘಟಕರಿಂದ ದೂರವಿರಲು ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ನಿಷ್ಠೆಯನ್ನು ತೋರಿಸಲು ಎಚ್ಚರಿಸಿದ್ದಾರೆ ಎಂದು ಸಂಸ್ಥೆ ಹೇಳಿದೆ.
ಇದನ್ನೂ ಓದಿ: ʼWife For Saleʼ ಎಂದು ಜಾಹೀರಾತು ನೀಡಿದ ಪತಿ: ಟೂರ್ಗೆ ಹೋಗಿದ್ದ ಪತ್ನಿಗೆ ಶಾಕ್!
ಕೋರ್ಟ್ ತೀರ್ಪು ನೀಡುವ ಮುನ್ನ ಶ್ರೀನಗರದ ಕೆಲ ಭಾಗಗಳಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ನಗರದ ಕೆಲವು ಭಾಗಗಳಲ್ಲಿ ಅಂಗಡಿಗಳು ಬಂದ್ ಆಗಿದ್ದವು. ಶ್ರೀನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು-ಸುವ್ಯವಸ್ಥೆ ಹದಗೆಡದಂತೆ ಪರಿಸ್ಥಿತಿ ನಿಭಾಯಿಸಿಲು ಭದ್ರತಾ ಪಡೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.