ಪಾಕಿಸ್ತಾನದಲ್ಲಿ ಸೈನಿಕರ ಮೇಲೆ ದಾಳಿ ನಡೆಸಿದ ಉಗ್ರರು.. 9 ಮಂದಿ ಸಾವು!

Pakistan News : ಪಾಕಿಸ್ತಾನದಲ್ಲಿ ಸೇನೆಯ ಮೇಲೆ ಉಗ್ರರ ದಾಳಿ ಮುಂದುವರಿದಿದೆ. ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 9 ಯೋಧರು ಹುತಾತ್ಮರಾಗಿದ್ದರು.

Written by - Chetana Devarmani | Last Updated : Sep 1, 2023, 06:10 PM IST
  • ಪಾಕಿಸ್ತಾನ ಸೇನೆಯ ಮೇಲೆ ಉಗ್ರರ ದಾಳಿ
  • ಸೈನಿಕರ ಮೇಲೆ ದಾಳಿ ನಡೆಸಿದ ಉಗ್ರರು
  • ಸೇನಾ ವಾಹನ ಗುರಿಯಾಗಿಸಿಕೊಂಡು ದಾಳಿ
ಪಾಕಿಸ್ತಾನದಲ್ಲಿ ಸೈನಿಕರ ಮೇಲೆ ದಾಳಿ ನಡೆಸಿದ ಉಗ್ರರು.. 9 ಮಂದಿ ಸಾವು!  title=
Pakistan

ಪೇಶಾವರ (ಪಾಕಿಸ್ತಾನ): ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ ಒಂಬತ್ತು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ಡಾನ್ ನ್ಯೂಸ್ ಗುರುವಾರ ವರದಿ ಮಾಡಿದೆ.

ಮಾಲಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ಮೋಟಾರು ಬೈಕಿನಲ್ಲಿ ಬಂದ ಆತ್ಮಾಹುತಿ ಬಾಂಬರ್ ದಾಳಿ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಪಾಕಿಸ್ತಾನ ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: ಅಕ್ಸಾಯ್ ಚಿನ್‌ನಲ್ಲಿ ಬಂಕರ್‌ ಮತ್ತು ಸುರಂಗಗಳನ್ನು ನಿರ್ಮಿಸಲು ಮುಂದಾದ ಚೀನಾ..!  

ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರು ಬನ್ನು ವಿಭಾಗದ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದ ಇಂತಹ ಎರಡನೇ ಘಟನೆ ಇದಾಗಿದೆ. 

ಜುಲೈ 30 ರಂದು ರಾಜಕೀಯ ಪಕ್ಷದ ಸಭೆಯಲ್ಲಿ ಆತ್ಮಹತ್ಯಾ ಬಾಂಬರ್ ಸ್ಫೋಟದ ನಂತರ ಕನಿಷ್ಠ 54 ಜನರು ಸಾವನ್ನಪ್ಪಿದ್ದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಇದನ್ನೂ ಓದಿ: ಚೀನಾದ ಭೂಪಟದಲ್ಲಿ ಭಾರತದ ಅರುಣಾಚಲ ಪ್ರದೇಶ.!!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News