ಪಾಕ್ ರೈಲಿನ ಮೇಲೆ ಉಗ್ರರಿಂದ ದಾಳಿ: 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿಕೊಂಡ ಭಯೋತ್ಪಾದಕರು

Terrorists attack Pakistani train: ಉಗ್ರಗಾಮಿ ಪ್ರತ್ಯೇಕತಾವಾದಿ ಗುಂಪು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಒಂದು ಹೇಳಿಕೆಯಲ್ಲಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಭದ್ರತಾ ಸಿಬ್ಬಂದಿ ಸೇರಿದಂತೆ ರೈಲಿನಿಂದ ೪೦೦ ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿರುವ ಬಗ್ಗೆ ತಿಳಿಸಿದೆ.

Written by - Bhavishya Shetty | Last Updated : Mar 11, 2025, 05:29 PM IST
    • ಕ್ವೆಟ್ಟಾದಿಂದ ಪೇಶಾವರ್‌ಗೆ ಪ್ರಯಾಣಿಸುತ್ತಿದ್ದಾಗ ಹೈಜಾಕ್‌
    • 400 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ರೈಲಿನ ಮೇಲೆ ಉಗ್ರರಿಂದ ದಾಳಿ
    • ದಾಳಿಯ ಹೊಣೆ ಹೊತ್ತುಕೊಂಡ ಬಲೂಚ್ ಲಿಬರೇಶನ್ ಆರ್ಮಿ
ಪಾಕ್ ರೈಲಿನ ಮೇಲೆ ಉಗ್ರರಿಂದ ದಾಳಿ: 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿಕೊಂಡ ಭಯೋತ್ಪಾದಕರು
Pakistan train

Terrorists attack Pakistani train: ನೈಋತ್ಯ ಪಾಕಿಸ್ತಾನದಲ್ಲಿ ಮಂಗಳವಾರ ಪ್ರತ್ಯೇಕತಾವಾದಿ ಉಗ್ರರು ಪ್ಯಾಸೆಂಜರ್ ರೈಲಿನ ಮೇಲೆ ಗುಂಡು ಹಾರಿಸಿ, ರೈಲು ಚಾಲಕನಿಗೆ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, 400 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ರೈಲು ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಿಂದ ಖೈಬರ್ ಪಖ್ತುಂಖ್ವಾದ ಪೇಶಾವರ್‌ಗೆ ಪ್ರಯಾಣಿಸುತ್ತಿದ್ದಾಗ ಹೈಜಾಕ್‌ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

Add Zee News as a Preferred Source

ಉಗ್ರಗಾಮಿ ಪ್ರತ್ಯೇಕತಾವಾದಿ ಗುಂಪು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಒಂದು ಹೇಳಿಕೆಯಲ್ಲಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಭದ್ರತಾ ಸಿಬ್ಬಂದಿ ಸೇರಿದಂತೆ ರೈಲಿನಿಂದ ೪೦೦ ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿರುವ ಬಗ್ಗೆ ತಿಳಿಸಿದೆ.

ಇದನ್ನೂ ಓದಿ:  ಇದ್ದಕ್ಕಿದ್ದಂತೆ ಮದ್ಯಪಾನ ನಿಲ್ಲಿಸಿದ್ರೆ, ಈ ಆರೋಗ್ಯ ಸಮಸ್ಯೆಗಳು ನಿಮ್ಮನ್ನ ಕಾಡಲು ಶುರು ಮಾಡುತ್ತವೆ..! ಹಾಗಿದ್ರೆ ಕುಡಿತ ಬಿಡುವುದು ಹೇಗೆ..?

"ಬಲೂಚ್ ಲಿಬರೇಶನ್ ಆರ್ಮಿ ಮಶ್ಕಾಫ್, ಧದರ್, ಬೋಲಾನ್‌ನಲ್ಲಿ ಕಾರ್ಯತಂತ್ರದ ಕಾರ್ಯಾಚರಣೆಯನ್ನು ನಡೆಸಿದ್ದು, ಜಾಫರ್ ಎಕ್ಸ್‌ಪ್ರೆಸ್ ಅನ್ನು ಹಳಿತಪ್ಪಿಸುವ ಮೂಲಕ ಅದರ ನಿಯಂತ್ರಣವನ್ನು ವಶಪಡಿಸಿಕೊಂಡಿದೆ. ಪ್ರತಿರೋಧದ ಸಮಯದಲ್ಲಿ, ಆರು ಮಿಲಿಟರಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ" ಎಂದು ಬಿಎಲ್‌ಎ ಹೇಳಿಕೆಯಲ್ಲಿ ತಿಳಿಸಿದೆ.

ಬಲೂಚಿಸ್ತಾನ್ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ಅವರು, "ತುರ್ತು ಕ್ರಮಗಳನ್ನು ಜಾರಿಗೊಳಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಸಂಸ್ಥೆಗಳನ್ನು ಸಜ್ಜುಗೊಳಿಸಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ. “ಪೆಹ್ರೋ ಕುನ್ರಿ ಮತ್ತು ಗದಲಾರ್ ನಡುವೆ ಕ್ವೆಟ್ಟಾದಿಂದ ಪೇಶಾವರಕ್ಕೆ ಹೋಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ [ರೈಲು] ಮೇಲೆ ತೀವ್ರವಾದ ಗುಂಡಿನ ದಾಳಿ ನಡೆದ ವರದಿಗಳಿವೆ” ಎಂದು ರಿಂಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಘಟನೆಯ ಪ್ರಮಾಣ ಮತ್ತು ಭಯೋತ್ಪಾದಕ ಅಂಶಗಳ ಸಾಧ್ಯತೆಯನ್ನು ನಿರ್ಧರಿಸಲಾಗುತ್ತಿದೆ. ಬಲೂಚಿಸ್ತಾನ್ ಸರ್ಕಾರ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶಿಸಿದೆ ಮತ್ತು ಎಲ್ಲಾ ಸಂಸ್ಥೆಗಳು ಸಕ್ರಿಯವಾಗಿವೆ” ಎಂದು ಹೇಳಿಕೆಯಲ್ಲಿ ಮತ್ತಷ್ಟು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:  ದುಬೈ ಅಲ್ಲ... ನಮ್ಮ ರಾಜ್ಯದ ಪಕ್ಕದಲ್ಲೇ ಅತಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಬಹುದು..!

ದಶಕಗಳಿಂದ, ಬಲೂಚಿಸ್ತಾನ್‌ನಲ್ಲಿರುವ ಪ್ರತ್ಯೇಕತಾವಾದಿ ಉಗ್ರಗಾಮಿ ಗುಂಪುಗಳು ಸರ್ಕಾರ, ಸೈನ್ಯ ಮತ್ತು ಚೀನಾದ ಹಿತಾಸಕ್ತಿಗಳನ್ನು ಗುರಿಯಾಗಿಸಿಕೊಂಡು ದಂಗೆಯನ್ನು ನಡೆಸುತ್ತಿವೆ. ಜೊತೆಗೆ ಈ ಪ್ರದೇಶದ ಖನಿಜ ಸಂಪತ್ತಿನಲ್ಲಿ ಹೆಚ್ಚಿನ ಪಾಲು ನೀಡುವಂತೆ ಬೇಡಿಕೆ ಇಡುತ್ತಲೇ ಬಂದಿದೆ. ಬಲೂಚಿಸ್ತಾನ್‌ನ ಹೇರಳವಾದ ಅನಿಲ ಮತ್ತು ಖನಿಜ ಸಂಪನ್ಮೂಲಗಳನ್ನು ಸರ್ಕಾರವು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಎಲ್‌ಎ ಸ್ವಾತಂತ್ರ್ಯವನ್ನು ಕೇಳುತ್ತಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News