)
Iran-Isreal War: ಇಸ್ರೇಲ್-ಇರಾನ್ ನಡುವಿನ ಯುದ್ಧ ಕೊನೆಗೂ ಅಂತ್ಯವಾಗಿದ್ದು, ಉಭಯ ದೇಶಗಳ ನಡುವೆ ಕದನ ವಿರಾಮ ಜಾರಿಗೆ ಬಂದಿದೆ ಎಂದು ಟೆಹ್ರಾನ್ ಖಚಿತಪಡಿಸಿದೆ. ಮಂಗಳವಾರ ಬೆಳಗ್ಗೆ ಸಾಮಾಜಿಕ ಜಾಲತಾಣ Truth Socialನಲ್ಲಿ ಪೋಸ್ಟ್ ಮಾಡಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ʼಎಲ್ಲರಿಗೂ ಅಭಿನಂದನೆಗಳು. ಇಸ್ರೇಲ್-ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್-ಇರಾನ್ ತಮ್ಮ ಅಂತಿಮ ಕಾರ್ಯಾಚರಣೆ ಮುಗಿಸಿದ ನಂತರ 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆʼ ಅಂತಾ ಹೇಳಿದ್ದರು.
ಟ್ರಂಪ್ ಹೇಳಿಕೆಯನ್ನ ತಳ್ಳಿಹಾಕಿದ್ದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ʼಇಸ್ರೇಲ್ ಜೊತೆ ಇರಾನ್ ಕದನ ವಿರಾಮಕ್ಕೆ ಒಪ್ಪಿಲ್ಲʼ ಎಂದು ಸ್ಪಷ್ಟಪಡಿಸಿದ್ದರು. ʼಇರಾನ್ ಮೇಲೆ ಯುದ್ಧ ಆರಂಭಿಸಿದ್ದು ಇಸ್ರೇಲ್. ಈವರೆಗೆ ಯಾವುದೇ ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಒಪ್ಪಂದ ಆಗಿಲ್ಲ. ಇಸ್ರೇಲ್ ತನ್ನ ಕಾನೂನುಬಾಹಿರ ಆಕ್ರಮಣ ನಿಲ್ಲಿಸಿದರೆ, ನಾವು ಯುದ್ಧ ಮುಂದುವರಿಸುವ ಉದ್ದೇಶ ಹೊಂದಿಲ್ಲ. ನಮ್ಮ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದುʼ ಅಂತಾ ಹೇಳಿದ್ದರು.
ಇದರ ಬೆನ್ನಲ್ಲೇ ಇಸ್ರೇಲ್ ಮೇಲಿನ ದಾಳಿಯನ್ನ ಇರಾನ್ ತೀವ್ರಗೊಳಿಸಿತ್ತು. ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ದಕ್ಷಿಣ ಇಸ್ರೇಲ್ ನಗರ ಬೀರ್ ಶೆವಾದ ವಸತಿ ಕಟ್ಟಡಕ್ಕೆ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆಂದು ವರದಿಯಾಗಿತ್ತು. ಕ್ಷಿಪಣಿ ದಾಳಿಗೆ ವಸತಿ ಸಂಕೀರ್ಣ ಸಂಪೂರ್ಣ ನಾಶವಾಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸುಟ್ಟುಹೋದ ಕಾರುಗಳು ಮತ್ತು ಮರಗಳ ಅವಶೇಷಗಳು ವಿಡಿಯೋದಲ್ಲಿ ಕಂಡುಬಂದಿದ್ದವು.
ಇದೀಗ ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದು, ಅಂತಿಮವಾಗಿ 12 ದಿನಗಳ ಯುದ್ಧ ಕೊನೆಗೂ ಮುಕ್ತಾಯವಾದಂತಾಗಿದೆ. ಯುದ್ಧ ನಿಲ್ಲಿಸುವುದಾಗಿ ಇರಾನ್ ಘೋಷಣೆ ಮಾಡಿದ್ದು, ಕದನ ವಿರಾಮ ಜಾರಿಗೆ ಬರುವ ಕೊನೆಯ ಕ್ಷಣದರವೆಗೂ ಹೋರಾಡಿದ್ದೇವೆಂದು ಇರಾನ್ ಹೇಳಿದೆ. ಆದರೆ ಕದನ ವಿರಾಮದ ಬಗ್ಗೆ ಇಸ್ರೇಲ್ ಇನ್ನೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಕದನ ವಿರಾಮದ ಕುರಿತು ಡೊನಾಲ್ಡ್ ಟ್ರಂಪ್ ಉಭಯ ದೇಶಗಳಿಗೆ ಎಚ್ಚರಿಕೆ ನೀಡಿದ್ದು, ದಯವಿಟ್ಟು ಕದನ ವಿರಾಮ ಉಲ್ಲಂಘನೆ ಮಾಡಬೇಡಿ ಎಂದು ಸೂಚಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ