ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಯೋಗದ ಪ್ರೀತಿ ಎಲ್ಲರಿಗೂ ತಿಳಿದಿದೆ. ಆಗಾಗ್ಗೆ, ಅವರು ತಮ್ಮ ಲಕ್ಷಾಂತರ ಅನುಯಾಯಿಗಳನ್ನು ತಲುಪುವ ಯೋಗದ ಫೋಟೋಗಳು ಮತ್ತು ವೀಡಿಯೊಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಳ್ಳುತ್ತಾರೆ. ಇಂದು ಅವರು ಟ್ವಿಟ್ಟರ್ ನಲ್ಲಿ ಯೋಗ ನಿದ್ರಾ ವಿಡಿಯೋವನ್ನು ಹಂಚಿಕೊಂಡಿದ್ದಾರೆ, ಇದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಕೂಡ ಮೆಚ್ಚಿದ್ದಾರೆ.


COMMERCIAL BREAK
SCROLL TO CONTINUE READING

'ನನಗೆ ಸಮಯ ಸಿಕ್ಕಾಗಲೆಲ್ಲಾ ನಾನು ವಾರದಲ್ಲಿ ಒಂದು ಅಥವಾ ಎರಡು ಬಾರಿ ಯೋಗ ನಿದ್ರಾ ಅಭ್ಯಾಸ ಮಾಡುತ್ತೇನೆ.ಇದು ಒಟ್ಟಾರೆ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ, ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ನೀವು ಯೋಗ ನಿದ್ರಾದ ಅನೇಕ ವೀಡಿಯೊಗಳನ್ನು ನೆಟ್‌ನಲ್ಲಿ ಕಾಣಬಹುದು. ನಾನು ಪ್ರತಿ ವೀಡಿಯೊವನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಹಂಚಿಕೊಳ್ಳುತ್ತಿದ್ದೇನೆ' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.



ಇದಕ್ಕೆ ಪ್ರತಿಕ್ರಿಯಿಸಿರುವ ಇವಾಂಕಾ ಟ್ರಂಪ್ "ಇದು ಅದ್ಭುತವಾಗಿದೆ. ಧನ್ಯವಾದಗಳು" ಎಂದು ಟ್ವೀಟ್ ಮಾಡಿದ್ದಾರೆ ಮತ್ತು ಅದನ್ನು #TogetherApart ನೊಂದಿಗೆ ಅನುಸರಿಸಿದ್ದಾರೆ.ಪ್ರಧಾನಿ ಮೋದಿ ಯಾವಾಗಲೂ ಯೋಗಾಭ್ಯಾಸ ಮಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಪಿಎಂ ಮೋದಿ ಅವರು ಕೆಲವೇ ದಿನಗಳ ಹಿಂದೆ ತಮ್ಮ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ, 21 ದಿನಗಳ ಲಾಕ್ ಡೌನ್ ಅವಧಿಯಲ್ಲಿ  ಎದುರಿಸಲು ಅವರು ಹೇಗೆ ಸದೃಡರಾಗಿದ್ದಾರೆ ಎಂಬ ವೀಡಿಯೊಗಳನ್ನು ಹಂಚಿಕೊಳ್ಳುವುದಾಗಿ ಭರವಸೆ ನೀಡಿದ್ದರು.


ಇವಾಂಕಾ ಟ್ರಂಪ್ ಇತ್ತೀಚೆಗೆ ತಮ್ಮ ತಂದೆ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಭಾರತ ಪ್ರವಾಸಕ್ಕೆ ತೆರಳಿದ್ದರು ಮತ್ತು ಪ್ರಧಾನಿ ಮೋದಿ ಅವರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹಂಚಿಕೊಂಡಿದ್ದರು.ಕರೋನವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 24 ರ ಮಧ್ಯರಾತ್ರಿಯಿಂದ ಲಾಕ್ ಡೌನ್ ಘೋಷಿಸಿದರು. COVID-19 ವಿರುದ್ಧದ ಯುದ್ಧವನ್ನು ಗೆಲ್ಲಲು ದೇಶಕ್ಕೆ ಸಹಾಯ ಮಾಡಲು ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಬೇಕೆಂದು ಪ್ರಧಾನಿ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮನವಿ ಮಾಡಿದ್ದರು.


ಭಾರತದಿಂದ 1,200 ಕ್ಕೂ ಹೆಚ್ಚು ಕರೋನವೈರಸ್ ಪ್ರಕರಣಗಳು ವರದಿಯಾಗಿವೆ ಮತ್ತು 32 ಸಾವುಗಳು ಸಂಭವಿಸಿವೆ. ವಿಶ್ವಾದ್ಯಂತ ಸುಮಾರು 7.5 ಲಕ್ಷ ಜನರ ಮೇಲೆ ಪರಿಣಾಮ ಬೀರುವ ಹೆಚ್ಚು ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಸರ್ಕಾರ ಹಲವಾರು ಕ್ರಮಗಳನ್ನು ಘೋಷಿಸಿದೆ.