Pakistan Occupied Kashmir news: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇದೀಗ ಬಂಡಾಯ ತೀವ್ರಗೊಂಡಿದೆ. ಗೋಧಿ ಹಿಟ್ಟು ಮತ್ತು ವಿದ್ಯುತ್ನ ದುಬಾರಿ ಬೆಲೆಯ ವಿರುದ್ಧ ಪಿಒಕೆ ಕಾಶ್ಮೀರದಲ್ಲಿ ಆರಂಭವಾದ ಮುಷ್ಕರ ಮುಂದುವರೆದಿದೆ. ಇದರಿಂದಾಗಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆ ತೀವ್ರಗೊಂಡಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪಾಕಿಸ್ತಾನ ಸರ್ಕಾರವು ಎಲ್ಲ ಪ್ರಯತ್ನಗಳನ್ನು ನಡೆಸಿದರೂ ಫಲ ನೀಡುತ್ತಿಲ್ಲ.
ಪಾಕಿಸ್ತಾನದಲ್ಲಿ ದಿನಬಳಕೆಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಈ ಹಿನ್ನಲೆಯಲ್ಲಿ ಅಲ್ಲಿನ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ತರಕಾರಿಗಳ ಬೆಲೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದಾಗಿ ಅಲ್ಲಿನ ಜನರು ಹಣದುಬ್ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದರಿಂದ ಜನರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಚಲೋ ಮುಜಫರಾಬಾದ್ ಎಂದು ಕರೆ ನೀಡಿದ್ದಾರೆ. ಈ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಜನರ ನಡುವೆ ಘರ್ಷಣೆ ಉಂಟಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಜನರು ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಜನರ ನಡುವೆ ಹಲವು ಬಾರಿ ಘರ್ಷಣೆ ನಡೆದಿದ್ದು, ಸೇನೆಯೂ ಪಿಒಕೆ ತಲುಪಿದೆ. ಎಕೆ 47 ಬಂದೂಕುಗಳಿಂದ ಅಮಾಯಕರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ನಾಗರಿಕರು ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಗಾಜಾ : ವಿಶ್ವಸಂಸ್ಥೆಯ ಸೇವೆಯಲ್ಲಿದ್ದ ಮಾಜಿ ಭಾರತೀಯ ಕರ್ನಲ್ ಸಾವು
ಹಲವು ದೇಶಗಳೊಂದಿಗೆ ಪಾಕಿಸ್ತಾನದ ಜಗಳದಿಂದಾಗಿ ರಫ್ತು ಮತ್ತು ಆಮದುಗಳ ಕೊರತೆಯಿಂದ ಆರ್ಥಿಕತೆಯು ಸಂಪೂರ್ಣವಾಗಿ ಕುಸಿದಿದೆ. ಇದರಿಂದ ಕೆಲವೆಡೆ ಜನ ದಂಗಾಗಿದ್ದಾರೆ. ಜನರಿಗೆ ವೈದ್ಯಕೀಯ ಸೌಲಭ್ಯಗಳು ಸಹ ಸರಿಯಾಗಿಲ್ಲ ಎಂಬ ಆತಂಕವನ್ನೂ ವ್ಯಕ್ತಪಡಿಸುತ್ತಿದ್ದಾರೆ. ಹೊಸದಾಗಿ ರಚನೆಯಾದ ಸರ್ಕಾರ ಇನ್ನೂ ಸರಿಯಾಗಿ ಆಡಳಿತ ನಡೆಸಿಲ್ಲ ಎಂದು ಪಾಕಿಸ್ತಾನದ ನಾಯಕರು ಟೀಕಿಸುತ್ತಿದ್ದಾರೆ.
ಪ್ರತಿಭಟನಾಕಾರರ ಬೇಡಿಕೆಗಳು :
ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಎಸಿ) ಸದಸ್ಯರು ಈ ಪ್ರದೇಶದಲ್ಲಿ ಜಲವಿದ್ಯುತ್ ಉತ್ಪಾದನೆಯ ವೆಚ್ಚದ ಪ್ರಕಾರ ವಿದ್ಯುತ್ ಬೆಲೆಗಳನ್ನು ನಿಗದಿಪಡಿಸಬೇಕು. ಗೋಧಿ ಹಿಟ್ಟಿನ ಮೇಲಿನ ಸಬ್ಸಿಡಿ ಮತ್ತು ಗಣ್ಯ ವರ್ಗದ ಸವಲತ್ತುಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಕಾನೂನನ್ನು ಕೈಗೆ ತೆಗೆದುಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ:
ಮಾರುಕಟ್ಟೆಗಳು, ವ್ಯಾಪಾರ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಸಾರಿಗೆ ಸೇವೆಗಳು ಸ್ಥಗಿತಗೊಂಡಿವೆ. ಶನಿವಾರ ಮೀರ್ಪುರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್, ಕಾನೂನನ್ನು ಕೈಗೆ ತೆಗೆದುಕೊಳ್ಳುವುದನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಪಿಒಕೆ ಪ್ರಧಾನ ಮಂತ್ರಿ ಚೌಧರಿ ಅನ್ವರುಲ್ ಹಕ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಪ್ರದೇಶದ ಎಲ್ಲಾ ಪಾಕಿಸ್ತಾನ್ ಮುಸ್ಲಿಂ ಲೀಗ್-ಎನ್ ಅಧಿಕಾರಿಗಳಿಗೆ ಕ್ರಿಯಾ ಸಮಿತಿಯ ನಾಯಕರೊಂದಿಗೆ ಮಾತನಾಡಲು ಸೂಚಿಸಿದ್ದೇನೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದರು. ಎಲ್ಲಾ ಪಕ್ಷಗಳು ತಮ್ಮ ಬೇಡಿಕೆಗಳನ್ನು ಪರಿಹರಿಸಲು ಶಾಂತಿಯುತ ಮಾರ್ಗಗಳನ್ನು ಅನುಸರಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದರು.
ಇಂಟರ್ನೆಟ್ ಸೇವೆ ಸ್ಥಗಿತ :
ಇದಲ್ಲದೆ, ಇಡೀ ಪ್ರದೇಶದಲ್ಲಿ ಮಾರುಕಟ್ಟೆಗಳು, ವ್ಯಾಪಾರ ಕೇಂದ್ರಗಳು, ಕಚೇರಿಗಳು, ಶಾಲೆಗಳು ಮತ್ತು ರೆಸ್ಟೋರೆಂಟ್ಗಳನ್ನು ಮುಚ್ಚಲಾಗಿದೆ. ಪಿಒಕೆಯ ಹಲವು ಸ್ಥಳಗಳಲ್ಲಿ ಹಿಂಸಾಚಾರದ ನಂತರ, ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಂಡರು. ಮುಜಫರಾಬಾದ್ನಲ್ಲಿ ನೂರಾರು ಜನರನ್ನು ಬಂಧಿಸಿದರು. ಸರ್ಕಾರವು ಈ ಪ್ರದೇಶದ ಹಲವು ಭಾಗಗಳಲ್ಲಿ ಮೊಬೈಲ್ ಫೋನ್ ನೆಟ್ವರ್ಕ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಇದನ್ನೂ ಓದಿ: ಜಾಗತಿಕ ಪಾರಂಪರಿಕ ಗ್ರಂಥಗಳಾಗಿ ಯುನೆಸ್ಕೋ ಪಟ್ಟಿಗೆ ಸೇರ್ಪಡೆಯಾದ ಭಾರತದ ಈ ಕೃತಿಗಳು...!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.