Indian High Commission in London : ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲು ಖಲಿಸ್ತಾನಿ ಬೆಂಬಲಿಗರು ನಡೆಸಿದ ಪ್ರಯತ್ನದ ನಂತರ ಭಾರತವು ದೆಹಲಿಯಲ್ಲಿರುವ ಅತ್ಯಂತ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿದೆ. ಭದ್ರತಾ ವ್ಯವಸ್ಥೆಗಳ ಅನುಪಸ್ಥಿತಿಯ ಕುರಿತು ಭಾರತವು ಬ್ರಿಟಿಷ್ ರಾಜತಾಂತ್ರಿಕರಿಂದ ವಿವರಣೆಯನ್ನು ಕೇಳಿದೆ. ಅದೇ ಸಮಯದಲ್ಲಿ, ದೆಹಲಿಯಲ್ಲಿರುವ ಬ್ರಿಟನ್‌ನ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಟ್ವೀಟ್‌ನಲ್ಲಿ, "ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಾಂಪ್ಲೆಕ್ಸ್ ಮತ್ತು ಅಲ್ಲಿನ ಜನರ ವಿರುದ್ಧ ಇಂದಿನ ಹೇಯ ಕೃತ್ಯಗಳನ್ನು ನಾನು ಖಂಡಿಸುತ್ತೇನೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಡೀ ವಿಷಯದ ಬಗ್ಗೆ ಬಲವಾದ ನಿಲುವು ತೆಗೆದುಕೊಂಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, ಬ್ರಿಟನ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಆವರಣಗಳು ಮತ್ತು ಅಲ್ಲಿ ಕೆಲಸ ಮಾಡುವ ಜನರ ಸುರಕ್ಷತೆಯ ಬಗ್ಗೆ ಬ್ರಿಟನ್ ಸರ್ಕಾರದ ಉದಾಸೀನತೆ ಭಾರತದ ಗಮನಕ್ಕೆ ಬಂದಿದೆ ಎಂದು ಹೇಳಿದೆ. ಇದನ್ನು ಭಾರತ ಸಹಿಸುವುದಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಆಕಾಶದಲ್ಲಿ ಇದ್ದಕ್ಕಿದ್ದಂತೆ ಕಂಡ ನಿಗೂಢ ಬೆಳಕು, ಅಚ್ಚರಿಗೊಂಡ ಜನ! ವಿಡಿಯೋ ವೈರಲ್‌


ಮೂಲಗಳ ಪ್ರಕಾರ, ಈ ಇಡೀ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ದೆಹಲಿಯಲ್ಲಿಲ್ಲದ ಕಾರಣ ಬ್ರಿಟನ್‌ನ ಡೆಪ್ಯುಟಿ ಹೈಕಮಿಷನರ್ ಕ್ರಿಸ್ಟಿನಾ ಸ್ಕಾಟ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಕರೆಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ, "ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ವಿರುದ್ಧ ಪ್ರತ್ಯೇಕತಾವಾದಿ ಮತ್ತು ಉಗ್ರಗಾಮಿ ಘಟಕಗಳು ಕೈಗೊಂಡ ಕ್ರಮದ ವಿರುದ್ಧ ಭಾರತ ತೀವ್ರವಾಗಿ ಪ್ರತಿಭಟಿಸಿದೆ ಮತ್ತು ನವದೆಹಲಿಯಲ್ಲಿರುವ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿದೆ. ಇದರೊಂದಿಗೆ ಭದ್ರತಾ ವ್ಯವಸ್ಥೆ ಇಲ್ಲದಿರುವುದಕ್ಕೆ ಬ್ರಿಟನ್‌ನಿಂದ ವಿವರಣೆಯನ್ನೂ ಕೇಳಲಾಗಿದೆ" ಎಂದು ತಿಳಿಸಿದೆ.


ಬ್ರಿಟಿಷ್ ಹೈಕಮಿಷನರ್ ಅವರನ್ನು ಕರೆಸುವುದರೊಂದಿಗೆ ಭಾರತವು ವಿಯೆನ್ನಾ ಒಪ್ಪಂದದ ಅಡಿಯಲ್ಲಿ ಬ್ರಿಟಿಷ್ ಸರ್ಕಾರದ ಮೂಲಭೂತ ಜವಾಬ್ದಾರಿಗಳನ್ನು ನೆನಪಿಸಿತು. ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಮೇಲಿರುವ ರಾಷ್ಟ್ರಧ್ವಜವನ್ನು ಉರುಳಿಸುವ ಪ್ರಯತ್ನದಲ್ಲಿ ಭಾಗಿಯಾದವರನ್ನು ಗುರುತಿಸಲು, ಬಂಧಿಸಲು ಮತ್ತು ಕಾನೂನು ಕ್ರಮ ಜರುಗಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತವು ಬ್ರಿಟನ್‌ಗೆ ಒತ್ತಾಯಿಸಿದೆ.


ಇದನ್ನೂ ಓದಿ: Ecuador Earthquake : 6.8 ತೀವ್ರತೆಯ ಭೂಕಂಪ, 13 ಕ್ಕೂ ಹೆಚ್ಚು ಜನ ಮೃತ


"ಘಟನೆಯಲ್ಲಿ ಭಾಗಿಯಾಗಿರುವವರನ್ನು ಯುಕೆ ಸರ್ಕಾರವು ಗುರುತಿಸುತ್ತದೆ, ಬಂಧಿಸುತ್ತದೆ ಮತ್ತು ಕಾನೂನು ಕ್ರಮ ಜರುಗಿಸುತ್ತದೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ" ಎಂದು ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. ಇದರೊಂದಿಗೆ ಮುಂದೆ ಇಂತಹ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.